ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು, ಗುಟ್ಕಾ ಉಗುಳುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು, ತಂಬಾಕು, ಗುಟ್ಕಾ ಉಗುಳಿದರೆ ಒಂದು ಸಾವಿರ ರೂಪಾಯಿ ದಂಡ ವಿಧಿಸಲಾಗುವುದು.
ಈ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ ಸರಬರಾಜು ವಿತರಣೆ ವಿನಿಮಯ -ಕರ್ನಾಟಕ(ತಿದ್ದುಪಡಿ) ಮಸೂದೆ 2024ಕ್ಕೆ ಮೇ 23 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ.
ಶುಕ್ರವಾರ ಈ ಸಂಬಂಧ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿ ಕಾಯ್ದೆ ಜಾರಿಗೆ ತರಲಾಗಿದೆ. 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರೆಗೆ ಬೀಡಿ, ಸಿಗರೇಟ್, ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಲಾಗಿದೆ. ಕಾಯ್ದೆ ಉಲ್ಲಂಘಿಸುವವರಿಗೆ ಒಂದು ಸಾವಿರ ರೂಪಾಯಿ ದಂಡ ವಿಧಿಸಬಹುದಾಗಿದೆ.
ಅದೇ ರೀತಿ ಬಾರ್, ರೆಸ್ಟೋರೆಂಟ್, ಪಬ್, ಉಪಹಾರ ಗೃಹಗಳಲ್ಲಿ ಹುಕ್ಕಾ ಸೇವನೆಗೆ ಅವಕಾಶ ನಿಷೇಧಿಸಲಾಗಿದೆ. ಉಲ್ಲಂಘಿಸಿದವರಿಗೆ 50 ಸಾವಿರದಿಂದ ಒಂದು ಲಕ್ಷ ರೂಪಾಯಿವರೆಗೆ ದಂಡ, ಒಂದು ವರ್ಷದಿಂದ ಮೂರು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು.

ರಾಜ್ಯದಲ್ಲಿನ್ನು ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದಿದರೆ, ಗುಟ್ಕಾ/ತಂಬಾಕು ಉಗುಳಿದರೆ 1000 ದಂಡ : ನಿಷೇಧ ಕಾಯ್ದೆ ಜಾರಿಗೊಳಿಸಿದ ಸರ್ಕಾರ
WhatsApp Group
Join Now