ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್‌ ಜಾರಕಿಹೊಳಿ

Spread the love

ರಾಜ್ಯ ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತ ಡಾ.ವೈ.ಮಂಜುನಾಥ್ ಮೇಲಿನ ಜಾರಿ ನಿರ್ದೇಶನಾಲಯದ ದಾಳಿ ಸದ್ಯದ ಪರಿಸ್ಥಿತಿಯಲ್ಲಿ ರಾಜಕೀಯ ಪ್ರೇರಿತ ಎಂದು ಹೇಳಲು ಸಾಧ್ಯವಿಲ್ಲ. ಇದರ ಸತ್ಯಾಂಶ 6 ತಿಂಗಳ ಬಳಿಕ ಹೊರಬರಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಸಾಮಾನ್ಯವಾಗಿ 2028ರ ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಇಂತಹ ಇ.ಡಿ. ದಾಳಿಗಳು ಆರಂಭವಾಗುತ್ತವೆ. ಇದು ತಮ್ಮ ರಾಜಕೀಯ ಅನುಭವ ಎಂದರು.

ಭ್ರಷ್ಟಾಚಾರದ ಪ್ರಕರಣದಲ್ಲಿ ಅಬಕಾರಿ ಇಲಾಖೆಯ ಇಷ್ಟು ದೊಡ್ಡ ಅಧಿಕಾರಿ ಮೇಲೆ ಇ.ಡಿ. ದಾಳಿ ನಡೆಸಿರುವುದು ಇದೇ ಮೊದಲು. ಹೀಗಾಗಿ ಈ ಬೆಳವಣಿಗೆ ನಮಗೂ ಕೂಡ ಆತಂಕ ಮೂಡಿಸಿದೆ. ಈ ಹಿಂದೆ 2011ರಲ್ಲಿ ಮಂಜುನಾಥ್ ಮೇಲೊಂದು ಪ್ರಕರಣ ದಾಖಲಾಗಿತ್ತು, ಆದರೆ ಅದು ಈಗಾಗಲೇ ರದ್ದಾಗಿದೆ. ಅಧಿಕಾರಿಗಳು ಈಗ ಯಾವ ಮಾಹಿತಿ ಪಡೆಯುತ್ತಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಸಚಿವ ಜಾರಕಿಹೊಳಿ ಹೇಳಿದರು.

ಈ ಹಿಂದೆ ಬೆಳಗಾವಿ ಜಿಲ್ಲಾ ಅಬಕಾರಿ ಉಪ ಆಯುಕ್ತರಾಗಿದ್ದ, ಸದ್ಯ ಹೆಚ್ಚುವರಿ ಆಯುಕ್ತರಾಗಿರುವ ಡಾ.ವೈ.ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿರುವುದು ನಿಜ. ಅವರು ನಮ್ಮ ಸಂಬಂಧಿ ಆಗಿರುವುದೂ ಸಹ ನಿಜ. ಇದಕ್ಕೆ ಪ್ರತ್ಯೇಕ ಸ್ಪಷ್ಟನೆ ಕೊಡಬೇಕಾದ ಅಗತ್ಯವಿಲ್ಲ.

ದಾಳಿ ಕುರಿತು ನಾನು ಅವರ ಜತೆ ಮಾತನಾಡುತ್ತೇನೆ. ಮಂಜುನಾಥ ಕುಟುಂಬಸ್ಥರು ಕಳೆದ 30 ವರ್ಷಗಳಿಂದ ಮದ್ಯದ ಅಂಗಡಿ ವ್ಯವಹಾರದಲ್ಲಿದ್ದಾರೆ. ಈ ತನಿಖೆ ಕೇವಲ ಒಂದು ಇಲಾಖೆಗೆ ಸೀಮಿತವಾಗಿಲ್ಲ ಮತ್ತು ಇಷ್ಟಕ್ಕೇ ಮುಗಿಯುವುದಿಲ್ಲ. 2028ರ ಚುನಾವಣೆ ಹತ್ತಿರ ಬರುತ್ತಿದ್ದಂತೆ ಇವೆಲ್ಲ ಸಹಜ. ನಮ್ಮನ್ನು ರಾಜಕೀಯವಾಗಿ ಕಟ್ಟಿಹಾಕಲು ಈ ದಾಳಿ ನಡೆಯುತ್ತಿದೆಯೇ ಎಂಬುದು ಈಗಲೇ ಗೊತ್ತಾಗುವುದಿಲ್ಲ. ಅದಕ್ಕೆ ಕನಿಷ್ಠ ಆರು ತಿಂಗಳು ಬೇಕು. ಸಾಮಾನ್ಯವಾಗಿ 2028ರ ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಇಂತಹ ಇಡಿ ದಾಳಿಗಳು ಆರಂಭವಾಗುತ್ತವೆ. ಇದು ತಮ್ಮ ರಾಜಕೀಯ ಅನುಭವ ಎಂದರು.

ಸಂಪುಟ ವಿಸ್ತರಣೆ ವಿಳಂಬ:

ಅಧಿಕೃತವಾಗಿ ಇನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿಲ್ಲ. ಸಚಿವ ಸಂಪುಟ ವಿಸ್ತರಣೆ ವಿಳಂಬ ಆಗಿದ್ದರಿಂದಲೇ ಸದ್ಯಕ್ಕೆ ನಮಗೆ ತಾತ್ಕಾಲಿಕವಾಗಿ ಉಸ್ತುವಾರಿ ಜವಾಬ್ದಾರಿ ನೀಡಿ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಲು ಸಿದ್ದರಾಮಯ್ಯ ಕಾರಣವಲ್ಲ. ಈಗಾಗಲೇ ಸಾಕಷ್ಟು ಬಾರಿ ಸ್ಪಷ್ಟಪಡಿಸಿದ್ದೇನೆ. ಹೈಕಮಾಂಡ್‌ನ ‘ಒಬ್ಬರಿಗೆ ಒಂದೇ ಹುದ್ದೆ’ ಎಂಬ ಕಟ್ಟುನಿಟ್ಟಿನ ನಿಯಮದ ಅನ್ವಯವೇ ಈ ತೀರ್ಮಾನವಾಗಿದೆ.

ಕಳೆದ ಎರಡು ತಿಂಗಳ ಹಿಂದೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಕುರಿತು ಹೈಕಮಾಂಡ್ ಮಟ್ಟದಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆದಿತ್ತು. ಸಚಿವ ಸ್ಥಾನದ ಜತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನೂ ನಮಗೆ ನೀಡಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿತ್ತು. ಆದರೆ ಪಕ್ಷದ ನಿಯಮದ ಪ್ರಕಾರ ಒಂದೇ ಹುದ್ದೆ ನಿಭಾಯಿಸಬೇಕಿದ್ದರಿಂದ, ನಾನು ಅಂತಿಮವಾಗಿ ಸಚಿವ ಸ್ಥಾನದಲ್ಲೇ ಮುಂದುವರಿಯಲು ನಿರ್ಧರಿಸಿ ಅಧ್ಯಕ್ಷ ಸ್ಥಾನದ ರೇಸ್‌ನಿಂದ ಹಿಂದೆ ಸರಿದೆ ಎಂದರು.

WhatsApp Group Join Now

Spread the love

Leave a Reply