ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್‌

Spread the love

ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ನಡೆದ ಭಾರಿ ಗದ್ದಲದ ಹಿನ್ನೆಲೆಯಲ್ಲಿ, ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಘಟನೆಯ ಸಂಪೂರ್ಣ ವಿವರ ನೀಡಿದ್ದಾರೆ.

ಕಣ್ಣೀರು ಹಾಕಿದ ಶಾಸಕ

ಈ ವೇಳೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ತಮ್ಮ ಮೇಲೆ ಚಪ್ಪಲಿ ಎಸೆದು, ತಮ್ಮ ಹಾಗೂ ತಮ್ಮ ಕುಟುಂಬದವರನ್ನು ಸಾರ್ವಜನಿಕವಾಗಿ ಅತ್ಯಂತ ಕೀಳಾಗಿ ನಿಂದಿಸಿದ ಸಂಗತಿಯನ್ನು ನೆನೆದು ಪ್ರದೀಪ್ ಈಶ್ವರ್ ಅವರು ಸಿದ್ದರಾಮಯ್ಯ ಅವರ ಮುಂದೆ ಕಣ್ಣೀರು ಹಾಕಿದ್ದಾರೆ. ತೀವ್ರ ಬೇಸರಗೊಂಡಿದ್ದ ಶಾಸಕರಿಗೆ ಆತ್ಮಸ್ಥೈರ್ಯ ತುಂಬಿದ ಸಿದ್ದರಾಮಯ್ಯ ಅವರು, ರಾಜಕೀಯ ಜೀವನದಲ್ಲಿ ಇಂತಹ ಸವಾಲುಗಳು ಮತ್ತು ಘಟನೆಗಳು ಎದುರಾಗುವುದು ಸಾಮಾನ್ಯ. ಇವುಗಳಿಗೆ ಧೃತಿಗೆಡದೆ ಧೈರ್ಯವಾಗಿ ಎದುರಿಸಬೇಕು, ಇಡೀ ಪಕ್ಷ ನಿಮ್ಮ ಬೆಂಬಲಕ್ಕೆ ನಿಲ್ಲಲಿದೆ ಎಂದು ಭರವಸೆ ನೀಡಿದ್ದಾರೆ.

ಶಾಸಕರ ಅಳಲು ಆಲಿಸಿದ ತಕ್ಷಣವೇ ಕಾರ್ಯಪ್ರವೃತ್ತರಾದ ಸಿದ್ದರಾಮಯ್ಯ ಅವರು, ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೆ ದೂರವಾಣಿ ಕರೆ ಮಾಡಿ ಘಟನೆಯ ಕುರಿತು ಸುದೀರ್ಘವಾಗಿ ಮಾತನಾಡಿದ್ದಾರೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ, ಅದರಲ್ಲೂ ಪೊಲೀಸರ ಸಮ್ಮುಖದಲ್ಲೇ ಆಡಳಿತ ಪಕ್ಷದ ಶಾಸಕರೊಬ್ಬರ ಮೇಲೆ ಈ ರೀತಿಯ ಹಲ್ಲೆ ಮತ್ತು ನಿಂದನೆ ನಡೆದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಇಡೀ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ಜೊತೆಗೆ, ಘಟನೆ ನಡೆಯುವಾಗ ನಿರ್ಲಕ್ಷ್ಯ ವಹಿಸಿದ ಸ್ಥಳೀಯ ಸಂಬಂಧಪಟ್ಟ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಶಿಸ್ತುಕ್ರಮ ಜರುಗಿಸಬೇಕು ಎಂದು ಗೃಹ ಸಚಿವರಿಗೆ ತಿಳಿಸಿದ್ದಾರೆ. ಈ ಪ್ರಮುಖ ಭೇಟಿಯ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಮಧು ಬಂಗಾರಪ್ಪ ಅವರು ಉಪಸ್ಥಿತರಿದ್ದರು.

ಗಲಭೆಗೆ ಪ್ರಚೋದನೆ ಆರೋಪ- ಪ್ರದೀಪ್ ಈಶ್ವರ್ ವಿರುದ್ದ ಮತ್ತೊಂದು ದೂರು ದಾಖಲು!

ಚಿಕ್ಕಬಳ್ಳಾಪುರ (Chikkaballapur) ನಗರದ ಕನ್ನಡ ಭವನದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಸಂಭವಿಸಿದ ಗಲಭೆಗೆ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಅವರೇ ನೇರ ಕಾರಣ ಎಂದು ಆರೋಪಿಸಿ ಎನ್ ಡಿಎ (ಬಿಜೆಪಿ-ಜೆಡಿಎಸ್) ಮೈತ್ರಿಕೂಟದ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್ಪಿ) ಅಧಿಕೃತವಾಗಿ ದೂರು ನೀಡಿದ್ದಾರೆ. ಸೋಮವಾರ ನಗರದ ಹೊರವಲಯದಲ್ಲಿರುವ ಎಸ್ಪಿ ಕಚೇರಿಗೆ ತೆರಳಿದ ನಿಯೋಗವು, ಎಸ್ಪಿ ಕುಶಲ್ ಚೌಕ್ಸೆ ಅವರನ್ನು ಭೇಟಿ ಮಾಡಿ ಈ ಕುರಿತು ಲಿಖಿತ ದೂರು ಸಲ್ಲಿಸಿದೆ.

WhatsApp Group Join Now

Spread the love

Leave a Reply