ಹಬ್ಬ ಮುಗಿಸಿ ಬೆಂಗಳೂರಿಗೆ ಬರ್ತಿದ್ದವರ ಬೈಕ್ಗೆ ವಾಹನ ಡಿಕ್ಕಿ, 8 ವರ್ಷದ ಮಗಳು ಸೇರಿ ಮೂವರ ದುರ್ಮರಣ

Spread the love

ಗಣೇಶ ಹಬ್ಬಕ್ಕೆಂದು ಊರಿಗೆ ಹೋಗಿ ಇಂದು ಬೆಳಗ್ಗೆ ಬೆಂಗಳೂರಿಗೆ (Bengaluru) ವಾಪಸ್ ಆಗ್ತಿದ್ದವರು ರಸ್ತೆ ಮಧ್ಯೆಗೆ ಹೆಣವಾಗಿದ್ದಾರೆ. ಮಂಡ್ಯ (Mandya) ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ರಸ್ತೆಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತ (Accident) ಸಂಭವಿಸಿದ್ದು, ಜವರಾಯನ ಅಟ್ಟಹಾಸಕ್ಕೆ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಮತ್ತೊಂದು ಮಗು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಟ ಮಾಡ್ತಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗಂಡ-ಹೆಂಡತಿ, ಮಗಳ ದುರಂತ ಅಂತ್ಯ

ಮಂಡ್ಯದ ಮದ್ದೂರಿನ ಕೊಪ್ಪ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಬರ್ತಿದ್ದ ಸ್ಕೂಟರ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಬೆಂಗಳೂರಿನ ಮುತ್ತುರಾಜ್ (35), ಕಾವ್ಯ (30) ಹಾಗೂ ಕೀರ್ತನಾ (8) ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮತ್ತೊಂದು ಪುಟ್ಟ ಮಗು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪರಿಚಿತ ವಾಹನ ಡಿಕ್ಕಿ

ಗಣೇಶ ಹಬ್ಬಕ್ಕೆಂದು ಊರಿಗೆ ಬಂದಿದ್ದ ಮುತ್ತುರಾಜ್ ಕುಟುಂಬ ಹಬ್ಬ ಮುಗಿಸಿ ಇಂದು ಬೆಳ್ಳಗ್ಗೆ ಬೈಕ್ನಲ್ಲೇ ಬೆಂಗಳೂರಿಗೆ ಹೊರಟಿದ್ದರು. ಆದ್ರೆ ಅಪರಿಚಿತ ವಾಹನದ ರೂಪದಲ್ಲಿ ರಸ್ತೆ ಕಾದು ಕುಳಿತಿದ್ದ ಜವರಾಯ ಮೂವರನ್ನ ಬಲಿ ಪಡೆದಿದ್ದಾರೆ. ಹಿಂದಿನಿಂದ ಸ್ಕೂಟರ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಮೂವರ ದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.

ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹಿಂದಿನಿಂದ ಬರ್ತಿದ್ದ ಅಪರಿಚಿತ ವಾಹನ ಸ್ಕೂಟರ್ಗೆ ಗುದ್ದಿದೆ. ಅಪಘಾತದ ಬಳಿಕ ವಾಹನ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು. ಮತ್ತೊಂದು ಮಗುವಿನ ಸ್ಥಿತಿ ಗಂಭೀರವಾಗಿದೆ. ಮಂಡ್ಯ ಮಿಮ್ಸ್ ಶವಾಗಾರಕ್ಕೆ ಮೃತ ದೇಹಗಳ ರವಾನೆ ಮಾಡಲಾಗಿದ್ದು, ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now

Spread the love

Leave a Reply