ಖಾಸಗಿ ಶಾಲಾ ಶಿಕ್ಷಕಿಯೊಬ್ಬಳು (Teacher) ದಸರಾ ಹಬ್ಬದ ದಿನವೇ, ತುಂಗಭದ್ರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ಕೊಪ್ಪಳದಲ್ಲಿ (Koppal) ನಡೆದಿದೆ.
ಸಂಗೀತ ಮೇಟಿ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಕೊಪ್ಪಳ ತಾಲೂಕಿನ ಕಾತರಕಿ ಗ್ರಾಮದ ಖಾಸಗಿ ಶಾಲಾ ಶಿಕ್ಷಕಿ. ದಸರಾ ಹಬ್ಬದ ದಿನವೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಸಂಗೀತ ಅ.19 ರಂದು ಕೊಪ್ಪಳಕ್ಕೆ ಹೋಗಿಬರುವುದಾಗಿ ಹೇಳಿ ಹೋಗಿದ್ದಳು. ಇಂದು ಬೆಳಗ್ಗೆ ವಿಜಯನಗರ ಜಿಲ್ಲೆಯ ಗಡಿ ಭಾಗದಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಆತ್ಮಹತ್ಯೆಗೂ ಮುನ್ನ ಡೆತ್ನೋಟ್ ಬರೆದಿಟ್ಟಿರುವ ಸಂಗೀತ, ಸುಮಾರು 14 ವರ್ಷಗಳಿಂದ ತನ್ನ ಸಂಬಂಧಿ ವಿಕಾಸ್ನನ್ನ ಪ್ರೀತಿಸುತ್ತಿದ್ದೇನು. ಪ್ರೀತಿಯ ವಿಚಾರ ಇಬ್ಬರ ಮನೆಯವರಿಗೂ ಗೊತ್ತಿತ್ತು. ಆದರೆ ಮದುವೆ ವಿಚಾರಕ್ಕೆ ವಿಕಾಸ್ ಮನೆಯಲ್ಲಿ ಗೊಂದಲವಿತ್ತು. ವಿಕಾಸ್ ಸಹೋದರ ವಸಂತ್ ಹಾಗೂ ಆತನ ಪತ್ನಿ ರೇಣುಕಾ ಮದುವೆಗೆ ಅಡ್ಡಿ ಮಾಡುತ್ತಿದ್ದಾರೆ. ಈ ಮೂವರಿಗೂ ಗಲ್ಲು ಶಿಕ್ಷೆ ಆಗಬೇಕು ಎಂದು ಡೆತ್ನೋಟ್ ಬರೆದಿಟ್ಟು ದಸರಾ ಹಬ್ಬದ ದಿನವೇ, ತುಂಗಭದ್ರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
‘ಪ್ರಿಯತಮನನ್ನು ಗಲ್ಲಿಗೇರಿಸಿ’ ಡೆತ್ನೋಟ್ ಬರೆದಿಟ್ಟು ಹಬ್ಬದ ದಿನವೇ ಪ್ರಾಣ ಬಿಟ್ಟ ಶಿಕ್ಷಕಿ
WhatsApp Group
Join Now