ಸ್ಟಿಂಗ್ ಆಪರೇಷನ್ ಪ್ರಕರಣ : ಸಿದ್ದರಾಮಯ್ಯ ಭೇಟಿಗೆ ಮುಂದಾದ HDK : ಕುತೂಹಲ ಮೂಡಿಸಿದ ದಳಪತಿ ನಡೆ.!

Spread the love

ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್ ಇದೀಗ ಭಾರಿ ಕೋಲಾಹಲ ಎಬ್ಬಿಸಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ನನ್ನನ್ನು ಬ್ಲಾಕ್ಮೇಲ್ ಮಾಡಲು ಈ ರೀತಿ ಮಾಡಿದ್ದಾರೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಅಲ್ಲದೆ ಅವರ ಪುತ್ರ ಯತೀಂದ್ರ ಕೂಡ ಸ್ಟಿಂಗ್ ಮಾಡಿದವರು ನಮ್ಮ ಪಕ್ಷದಲ್ಲಿಯೇ ಇದ್ದಾರೆ ಎಂದು ಪ್ರಕರಣಕ್ಕೆ ಹೊಸ ತಿರುಗು ಕೊಟ್ಟಿದ್ದರು.

ಇದೆಲ್ಲದರ ಮಧ್ಯೆ ಇದೀಗ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿದ್ದಾರೆ, ಸಿದ್ದರಾಮಯ್ಯ ಭೇಟಿಗೆ ಕುಮಾರಸ್ವಾಮಿ ಮುಂದಾಗಿದ್ದಾರೆ ಈಗಾಗಲೇ ಎಚ್ ಡಿ ಕುಮಾರಸ್ವಾಮಿ ಸಿದ್ದರಾಮಯ್ಯ ಪರವಾಗಿ ಬ್ಯಾಟ್ ಬೀಸುತ್ತಿದ್ದು ಸ್ಟಿಂಗ್ ಆಪರೇಷನ್ ವಿಚಾರವಾಗಿ ಸಿದ್ದರಾಮಯ್ಯ ಪರ ಹೇಳಿಕೆ ನೀಡಿದ್ದಾರೆ.

ಹಾಗಾಗಿ ಸಿದ್ದರಾಮಯ್ಯರನ್ನು ಭೇಟಿ ಮಾಡುವಂತೆ ಹೆಚ್‍ಡಿ ಕುಮಾರಸ್ವಾಮಿಗೆ ಆಪ್ತರು ಸಲಹೆ ನೀಡಿದ್ದಾರೆ ಶೀಘ್ರದಲ್ಲಿಯೇ ಕುಮಾರಸ್ವಾಮಿ ಅಥವಾ ಜೆಡಿಎಸ್ ನಾಯಕರ ನಿಯೋಗದಿಂದ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಈ ಮೂಲಕ ಮತ್ತೊಂದು ಮಹತ್ವದ ಹೆಜ್ಜೆ ಇಡಲು ಎಚ್ ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ ಎನ್ನಲಾಗಿದೆ

WhatsApp Group Join Now

Spread the love

Leave a Reply