Gruhalakshmi Scheme : ಈ ಜಿಲ್ಲೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಜಮೆ! ಹೇಗೆ ಚೆಕ್ ಮಾಡುವುದು.?

Gruhalakshmi Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯನ್ನು ರಾಜ್ಯದ ಮಹಿಳೆಯರು ನಂಬಿಕೊಂಡಿದ್ದಾರೆ. ತಮಗೆ ಮನೆ ನಡೆಸಲು ಅಥವಾ ಸ್ವಂತ ಖರ್ಚುಗಳನ್ನು ನೋಡಿಕೊಳ್ಳಲು ಗೃಹಲಕ್ಷ್ಮಿ ಯೋಜನೆಯಿಂದ ಸಿಗುವ ₹2,000/- ರೂಪಾಯಿ ಹಣ ನಮಗೆ ಸಹಾಯ ಮಾಡುತ್ತಿದೆ. ಈ ಯೋಜನೆ ಜಾರಿಗೆ ಬಂದು ಈಗಾಗಲೇ 1 ವರ್ಷ ಕಳೆದಿದೆ. ಆದರೆ ಎಲ್ಲಾ ಮಹಿಳೆಯರು ಕೂಡ ಈ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಇನ್ನು ಕೂಡ ಪಡೆಯಲು ಸಾಧ್ಯವಾಗಿಲ್ಲ.

ಇದನ್ನೂ ಕೂಡ ಓದಿ : Parihara Payment :- ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಮೊಬೈಲ್ ನಲ್ಲಿ ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.

WhatsApp Group Join Now

ಈ ವರ್ಷ ಜೂನ್ ಹಾಗೂ ಜುಲೈ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಕೂಡ ಮಹಿಳೆಯರ ಬ್ಯಾಂಕ್ ಖಾತೆ ತಲುಪದ ಕಾರಣ, ಇನ್ನು ಕೂಡ ತಮಗೆ ಹಣ ಬಂದಿಲ್ಲ ಎಂದು ಮಹಿಳೆಯರು ಆತಂಕಕ್ಕೆ ಒಳಗಾಗಿದ್ದರು, ಹಾಗೆಯೇ ಸರ್ಕಾರವನ್ನು ಈ ಬಗ್ಗೆ ಪ್ರಶ್ನಿಸಿದರೆ ಅವರಿಗೆ ಸರಿಯಾದ ಉತ್ತರ ಸಿಗುತ್ತಿಲ್ಲ, ತಮ್ಮ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ (Gruhalakshmi scheme) ಹಣ ಜಮಾವಾಗುತ್ತದೋ.? ಇಲ್ಲವೋ.? ಎನ್ನುವ ಗೊಂದಲಕ್ಕೆ ಉತ್ತರ ಅಂತೂ ಸಿಕ್ಕಿರಲಿಲ್ಲ. ಇದರಿಂದ ಮಹಿಳೆಯರಿಗೆ ಆತಂಕ ಕಡಿಮೆ ಆಗಿರಲೇ ಇಲ್ಲ.

ಈ ಬಗ್ಗೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಆಗಿರುವ ಲಕ್ಷ್ಮೀ ಹೆಬ್ಬಾಳ್ಳ‌ರ್ ಅವರು ಈ ವಿಷಯದ ಬಗ್ಗೆ ಮಾತನಾಡಿದ್ದು, ಶೀಘ್ರದಲ್ಲೇ ಪೆಂಡಿಂಗ್ ಇರುವ ಹಣ ಎಲ್ಲಾ ಮಹಿಳೆಯರ ಬ್ಯಾಂಕ್ ಖಾತೆಗೆ ಜಮೆ ಆಗುತ್ತದೆ ಎಂದು ತಿಳಿಸಿದ್ದಾರೆ. ಜೂನ್ ಹಾಗೂ ಜುಲೈ ತಿಂಗಳ ಹಣವನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ ಎಂದಿದ್ದಾರೆ.

ಇದನ್ನೂ ಕೂಡ ಓದಿ : Parihara Payment :- ಮೊಬೈಲ್ ನಂಬರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಮೊಬೈಲ್ ನಲ್ಲಿ ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ.

WhatsApp Group Join Now

ಪ್ರಸ್ತುತ ಸಿಕ್ಕಿರುವ ಮಾಹಿತಿಯ ಅನುಸಾರ, ಸರ್ಕಾರವು ಈಗಾಗಲೇ ಗೃಹಲಕ್ಷ್ಮೀ ಯೋಜನೆಯ 11 ಹಾಗೂ 12ನೇ ಕಂತಿನ ಹಣವಾಗಿ ಬಿಡುಗಡೆ ಮಾಡಲಾಗಿದ್ದು, ಮೊದಲ ಹಂತದಲ್ಲಿ ಕೆಲವು ಜಿಲ್ಲೆಯ ಮಹಿಳೆಯರ ಬ್ಯಾಂಕ್ ಖಾತೆಗೆ ಈ ಹಣ ತಲುಪಿದೆ. ಮೊದಲನೆಯ ಹಂತದಲ್ಲಿ ಬೀದ‌ರ್, ಬೆಳಗಾವಿ, ಕಲಬುರಗಿ, ಬಳ್ಳಾರಿ, ವಿಜಯಪುರ, ಕಲಬುರಗಿ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಈ ಜಿಲ್ಲೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ (Gruhalakshmi scheme) ಪೆಂಡಿಂಗ್ ಹಣ ಬಿಡುಗಡೆ ಆಗಿದೆ.

ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಚೆಕ್ ಮಾಡುವ ಮೂಲಕ ಹಾಗೂ ನಿಮ್ಮ ಮೊಬೈಲ್ ಫೋನ್ ನಲ್ಲಿ ಡಿಬಿಟಿ ಕರ್ನಾಟಕ ಅಪ್ಲಿಕೇಶನ್ ನಲ್ಲಿ ಚೆಕ್ ಮಾಡುವ ಮೂಲಕ, ನಿಮ್ಮ ಅಕೌಂಟ್ ಗೆ ಗೃಹಲಕ್ಷ್ಮಿ ಯೋಜನೆಯ (Gruhalakshmi scheme) ಹಣ ಜಮಾ ಆಗಿದೆಯಾ.? ಇಲ್ಲವಾ.? ಎನ್ನುವುದನ್ನ ನೀವು ಚೆಕ್ ಮಾಡಿಕೊಳ್ಳಬಹುದಾಗಿದೆ.

Leave a Reply