Dhanashri Scheme : ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ₹30,000/- ಸಹಾಯಧನ.! ಬೇಕಾಗುವ ದಾಖಲೆಗಳೇನು.?

Dhanashri Scheme : ನಮಸ್ಕಾರ ಸ್ನೇಹಿತರೇ, ಹೆಚ್.ಐ.ವಿ. ಸೋಂಕಿತ ಮತ್ತು ಬಾಧಿತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಪ್ರೇರೇಪಿಸುವುದು ಮತ್ತು ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಈ ಧನಶ್ರೀ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಸದರಿಯವರು ಆದಾಯೋತ್ಪನ್ನಕರ ಚಟುವಟಿಕೆಗಳನ್ನು ಕೈಗೊಳ್ಳಲು ₹30,000/- ರೂಪಾಯಿಗಳನ್ನು ಪ್ರೋತ್ಸಾಹ ಧನವನ್ನು ಫಲಾನುಭವಿಗಳ ಬ್ಯಾಂಕ್‍ ಖಾತೆಗೆ ಮಂಜೂರು ಮಾಡಲಾಗುವುದು. ಫಲಾನುಭವಿಗಳನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಆಯ್ಕೆ ಸಮಿತಿಯಿಂದ ಆಯ್ಕೆ ಮಾಡಲಾಗುವುದು.

ಇದನ್ನೂ ಕೂಡ ಓದಿ : Udyogini Scheme : ಎಲ್ಲಾ ವರ್ಗದ ಮಹಿಳೆಯರು ಅರ್ಜಿ ಸಲ್ಲಿಸಬಹುದು – ಬೇಕಾಗುವ ದಾಖಲೆಗಳೇನು.? ಸಂಪೂರ್ಣ ಮಾಹಿತಿ

WhatsApp Group Join Now

ಅರ್ಹತಾ ಮಾನದಂಡ ಹಾಗೂ ಅಗತ್ಯ ದಾಖಲೆಗಳೇನು.?

  • ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, ಮಾಜಿ ದೇವದಾಸಿ ಮಹಿಳೆಯಾಗಿರಬೇಕು
  • ಅರ್ಜಿದಾರ ಮಹಿಳೆ ಹೆಚ್.ಐ.ವಿ., ಸೋಂಕಿತ / ಭಾದಿತ ರಾಗಿದ್ದರೆ ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರು
  • ವಾಸ ಸ್ಥಳ ದೃಢೀಕರಣ ಪತ್ರ
  • ಮತದಾರರ ಗುರುತಿನ ಚೀಟಿ
  • ಆಧಾರ್ ಕಾರ್ಡ್
  • ಪಡಿತರ ಚೀಟಿ
  • ಕೈಗೊಳ್ಳಲು ಉದ್ದೇಶಿಸಿರುವ ಆದಾಯೋತ್ಪನ್ನ ಚಟುವಟಿಕೆಗೆ ಸಂಬಂಧಿಸಿದಂತೆ ಯೋಜನಾ ವರದಿ
  • ಅರ್ಜಿದಾರರ ಬ್ಯಾಂಕ್‍ ಖಾತೆಗೆ ಆಧಾರ್‍ ಸೀಡಿಂಗ್‍ ಮಾಡಿಸಿರಬೇಕು.
  • ಐ.ಸಿ.ಟಿ.ಸಿ., /ಎ.ಆರ್.ಟಿ. ಕೇಂದ್ರಗಳಲ್ಲಿ ವೈದ್ಯಕೀಯ ಪ್ರಮಾಣ ಪತ್ರ ಹೊಂದಿರಬೇಕು.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply