Bigg Boss Kannada 11 : ನಮಸ್ಕಾರ ಸ್ನೇಹಿತರೇ, ಕಳೆದ 10 ವರ್ಷಗಳಿಂದ ಕಿಚ್ಚ ಸುದೀಪ್ ಬಿಗ್ ಬಾಸ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿಕೊಂಡು ಬರ್ತಿದ್ದಾರೆ. ಸುದೀಪ್ ಹೊರತಾಗಿ ಬಿಗ್ ಬಾಸ್ ಅನ್ನು ಅವರಷ್ಟು ಶಕ್ತವಾಗಿ ನಿರೂಪಣೆ ಮಾಡುವ ಇನ್ನೊಬ್ಬ ಸೆಲೆಬ್ರಿಟಿಯನ್ನು ಊಹೆ ಮಾಡಿಕೊಳ್ಳುವುದಕ್ಕೂ ಸಾಧ್ಯವಿಲ್ಲ.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಆದರೆ ಸುದೀಪ್ ಮುಂದಿನ ಸೀಸನ್ನಿಂದ ಬಿಗ್ಬಾಸ್ ನಿರೂಪಣೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಈ ಘೋಷಣೆಗೆ ಅವರದ್ದೇ ಆದ ಕಾರಣಗಳಿವೆ. ಆದರೆ ಕೆಲವರು ಸುದೀಪ್ರ ಈ ಘೋಷಣೆಗೆ ಬೇರೆ ಅರ್ಥ ಕಲ್ಪಿಸುವ ಪ್ರಯತ್ನ ಮಾಡಿದ್ದರು. ಅದೇ ಕಾರಣಕ್ಕೆ ಸುದೀಪ್ ಈಗ ಆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಕಲರ್ಸ್ ವಾಹಿನಿಯಿಂದ, ಬಿಗ್ಬಾಸ್ ಆಯೋಜಕರಿಂದ ಕಿಚ್ಚ ಸುದೀಪ್ಗೆ ಅವಮಾನ ಆಗಿದೆ ಹಾಗಾಗಿ ಅವರು ಈ ನಿರ್ಣಯ ತೆಗೆದುಕೊಂಡಿದ್ದಾರೆ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳನ್ನು ಹಂಚಿಕೊಂಡಿದ್ದರು. ಇದರ ಬಗ್ಗೆ ಸ್ವತಃ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ‘ನನ್ನ ಟ್ವೀಟ್ ನೋಡಿ, ಗೌರವಿಸಿ ಬಂದ ಪ್ರೀತಿ ಮತ್ತು ಬೆಂಬಲವನ್ನು ನಾನು ಪ್ರಶಂಸಿಸುತ್ತೇನೆ. ಇದು ನಿಜವಾಗಿಯೂ ನನಗೆ ಸ್ಪೂರ್ತಿ ತುಂಬುತ್ತದೆ. ಈ ಪ್ರೀತಿ ಗೌರವವನ್ನು ನೆನಪಿನಲ್ಲಿ ಇಟ್ಟುಕೊಳ್ಳುತ್ತೇನೆ’ ಎಂದಿದ್ದಾರೆ.
ಇದನ್ನೂ ಕೂಡ ಓದಿ : ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana
ಮುಂದುವರೆದು, ‘ನನ್ನ ಹಾಗೂ ಚಾನೆಲ್ ನಡುವೆ ಭಿನ್ನಾಭಿಪ್ರಾಯ ಮೂಡಿದೆ, ನನಗೆ ಅಗೌರವವನ್ನು ಚಾನೆಲ್ ತೋರಿದೆ ಎಂದು ವಿಡಿಯೋ, ಕಮೆಂಟ್ ಮಾಡುವವರಿಗೆ ನಾನು ಹೇಳಬಯಸುವುದೆಂದರೆ, ನಾನು ಮತ್ತು ಚಾನೆಲ್ ದೀರ್ಘವಾದ ಹಾಗೂ ಧನಾತ್ಮಕವಾದ ಜರ್ನಿ ಮಾಡಿದ್ದೇವೆ. ಭಿನ್ನಾಭಿಪ್ರಾಯ, ಅಗೌರವ ಎಂಬುದೆಲ್ಲ ಸುಳ್ಳು, ಸಾಕ್ಷ್ಯ ಇಲ್ಲದ್ದು. ಬಿಗ್ಬಾಸ್ನಿಂದ ಹೊರಹೋಗುತ್ತಿರುವ ಕುರಿತು ಮಾಡಿದ ಟ್ವೀಟ್ ಸ್ಪಷ್ಟವಾಗಿತ್ತು ಮತ್ತು ನೇರವಾಗಿತ್ತು.
ಕಲರ್ಸ್ ವಾಹಿನಿಯೊಟ್ಟಿಗೆ ನನ್ನ ಸಂಬಂಧ ಅದ್ಭುತವಾಗಿದೆ ಮತ್ತು ಅವರು ಯಾವಾಗಲೂ ನನ್ನನ್ನು ಗೌರವದಿಂದ ನಡೆಸಿಕೊಂಡಿದ್ದಾರೆ. ಈಗಿನ ನಿರ್ದೇಶಕ ಪ್ರಕಾಶ್, ಅಸಾಧ್ಯ ಪ್ರತಿಭಾವಂತ ಮತ್ತು ಶಕ್ತಿಯುತ ವ್ಯಕ್ತಿ ಮತ್ತು ನಾನು ಅವರ ಬಗ್ಗೆ ಆಳವಾದ ಗೌರವವನ್ನು ಹೊಂದಿದ್ದೇನೆ. ನಾನು ಕೆಲಸ ಮಾಡುತ್ತಿರುವ ತಂಡವು ಇಲ್ಲದ ಆರೋಪಗಳನ್ನು ಎದುರಿಸುತ್ತಿರುವಾಗ ಸುಮ್ಮನೆ ಕುಳಿತು ಆನಂದಿಸುವ ವ್ಯಕ್ತಿತ್ವ ನನ್ನದಲ್ಲ’ ಎಂದಿದ್ದಾರೆ ಸುದೀಪ್.
ಇದನ್ನೂ ಕೂಡ ಓದಿ : Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?
ಕಿಚ್ಚ ಸುದೀಪ್, ತಾವು ಬಿಗ್ಬಾಸ್ ನಿರೂಪಣೆ ಮಾಡುವುದಿಲ್ಲ ಎಂದು ಕೆಲ ದಿನಗಳ ಹಿಂದೆಯಷ್ಟೆ ಘೋಷಣೆ ಮಾಡಿದ್ದಾರೆ. ಸುದೀಪ್ರ ಈ ಹಠಾತ್ ಘೋಷಣೆ ಅವರ ಅಭಿಮಾನಿಗಳಲ್ಲಿ, ಬಿಗ್ಬಾಸ್ ವೀಕ್ಷಕರಲ್ಲಿ ಮತ್ತು ಮಾಜಿ ಬಿಗ್ಬಾಸ್ ಸ್ಪರ್ಧಿಗಳಿಗೆ ಆಘಾತ ಉಂಟು ಮಾಡಿತ್ತು. ಇದೇ ಸಂದರ್ಭದಲ್ಲಿ ಕೆಲ ಮಾಜಿ ಬಿಗ್ಬಾಸ್ ಸ್ಪರ್ಧಿಗಳು ಕಲರ್ಸ್ ವಾಹನಿಯಿಂದ ಸುದೀಪ್ಗೆ ಅವಮಾನ ಆಗಿದೆಯೇ ಎಂಬ ಅನುಮಾನವನ್ನು ಸಹ ವ್ಯಕ್ತಪಡಿಸಿದ್ದರು. ಅದೇ ಕಾರಣಕ್ಕೆ ಸುದೀಪ್ ಇದೀಗ ಸ್ಪಷ್ಟನೆ ನೀಡುವ ಮೂಲಕ ಅನುಮಾನಗಳಿಗೆ ತೆರೆ ಎಳೆದಿದ್ದಾರೆ.
- ಮಗುವಿಗೆ ಜನ್ಮ ನೀಡಿದ 10ನೇ ಕ್ಲಾಸ್ ವಿದ್ಯಾರ್ಥಿನಿ: ಶಾಲಾ ಬಸ್ ಡ್ರೈವರ್ನಿಂದಲೇ ನೀಚ ಕೃತ್ಯ
- ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
- ಲಿವರ್ ಭಾಗದಲ್ಲಿ ಸೇರಿಕೊಂಡಿರುವ ಕೊಬ್ಬಿನಾಂಶವನ್ನು ಹೊರಹಾಕುವ ಪಾನೀಯವಿದು
- ಪತ್ನಿ ಕಸ್ಟಡಿಗೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶ : ಇಬ್ಬರು ಕಂದಮ್ಮಗಳಿಗೆ ವಿಷವುಣಿಸಿ ತಾಯಿ ಜೊತೆ ಪತಿ ಆತ್ಮಹತ್ಯೆ!
- ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಮೃತದೇಹವನ್ನು ‘ಗ್ರೈಂಡರ್’ ನಲ್ಲಿ ರುಬ್ಬಿ, ಚರಂಡಿಗೆ ಎಸೆದ ಪತ್ನಿ!
- ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್ಗೆ ಜಾವೇದ್ ಅಖ್ತರ್ ಪ್ರಶ್ನೆ
- Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ
- ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?
- ‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!
- ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು
- Horoscope Today : ಡಿಸೆಂಬರ್ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ
- ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ
- ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
- ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು
- ಕೊಲೆಸ್ಟ್ರಾಲ್ ಹೆಚ್ಚಾಗಿದೆ ಅಂತ ಚಿಂತೆನಾ? ಈ ಒಂದು ಹಣ್ಣು ತಿಂದ್ರೆ ಸಾಕು ರಕ್ತದಲ್ಲಿರೋ LDL ಕಡಿಮೆಯಾಗುತ್ತೆ.!
- ಬೆಂಗಳೂರಲ್ಲಿ ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಲಾಂಗು, ಮಚ್ಚುಗಳಿಂದ ಹಲ್ಲೆ : ಮಹಿಳೆ ಅರೆಸ್ಟ್
- Horoscope Today : ಡಿಸೆಂಬರ್ 22 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : ಸೋಮವಾರದ 12 ರಾಶಿ ಭವಿಷ್ಯ ಇಲ್ಲಿದೆ
- ರಾಜ್ಯದಲ್ಲಿ ಮರ್ಯಾದಾ ಹತ್ಯೆ : ಅನ್ಯ ಜಾತಿ ಯುವಕನ ಜತೆ ಮದುವೆ : ಗರ್ಭಿಣಿ ಮಗಳನ್ನು ಕೊಂದ ಪಾಲಕರು
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗ್ಯಾಸ್ಟ್ರಿಕ್ ಎಂದು 5 ವರ್ಷ ಸುಮ್ಮನಿದ್ದ ವ್ಯಕ್ತಿಗೆ ವೈದ್ಯರ ಬಳಿ ಹೋದಾಗ ಕಾದಿತ್ತು ಶಾಕ್!
- ಇಳಿ ವಯಸ್ಸಿನಲ್ಲಿ ಮತ್ತೊಂದು ಮದುವೆಯಾದ ತಂದೆ – ಆಸ್ತಿಗಾಗಿ ಮಕ್ಕಳಿಂದ ಹಲ್ಲೆ.!
- ತಾಕತ್ತಿದ್ರೆ ನೋಟಲ್ಲಿರುವ ಮಹಾತ್ಮ ಗಾಂಧಿ ಚಿತ್ರ ತೆಗೆಯಿರಿ : ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಸವಾಲು!
- ಅಸಮರ್ಥರನ್ನು ಜಗದೇಕ ವೀರ ಎನ್ನಬೇಕೆ? : ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಪ್ರಿಯಾಂಕ್ ಖರ್ಗೆ ಟೀಕೆ
- ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ: ಮಕ್ಕಳು, ಗರ್ಭಿಣಿಯರಿಗೆ ಅಪಾಯ; ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ
























