Scholarship : ವಿದ್ಯಾರ್ಥಿಗಳಿಗೆ ಸಿಹಿಸುದ್ಧಿ –  ವಿದ್ಯಾಸಿರಿ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಮುಂದೂಡಿಕೆ.!

Scholarship : ನಮಸ್ಕಾರ ಸ್ನೇಹಿತರೇ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ಹಾಗೂ ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ ಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಮೆಟ್ರಿಕ-ನಂತರದ ವಿದ್ಯಾರ್ಥಿವೇತನ ಶುಲ್ಕ ಮರುಪಾವತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!

WhatsApp Group Join Now

ಮೆಟ್ರಿಕ್ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಅಕ್ಟೋಬರ್ 15, 2024 ಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಅಕ್ಟೋಬರ್ 31, 2024 ರವರೆಗೆ ವಿಸ್ತರಿಸಲಾಗಿದೆ. ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ ಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ನವೆಂಬರ್ 30, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಇದನ್ನೂ ಕೂಡ ಓದಿ : Pension Scheme : 60 ವರ್ಷ ಮೇಲ್ಪಟ್ಟ ಅಜ್ಜ ಅಜ್ಜಿಯರಿಗೆ ಪ್ರತಿ ತಿಂಗಳ ಪಿಂಚಣಿ ಹಣ ಡಬಲ್.!

WhatsApp Group Join Now

ಆಸಕ್ತ ಅಭ್ಯರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ವೆಬ್ಸೈಟ್ ಮೂಲಕ ಅಕ್ಟೋಬರ್ 31, 2024 ರೋಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8050770005 ಅಥವಾ bcwdhelpline@gmail.com ವೆಬ್ಸೈಟ್ಗೆ ಭೇಟಿ ನೀಡಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply