Cyclone Fengal : ಫೆಂಗಲ್ ಸೈಕ್ಲೋನ್’ ಎಫೆಕ್ಟ್ : ರಾಜ್ಯದಲ್ಲಿ 3-4 ದಿನ ಭಾರೀ ಮಳೆ ಸಾಧ್ಯತೆ! ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Cyclone Fengal : ನಮಸ್ಕಾರ ಸ್ನೇಹಿತರೇ, ಬಂಗಾಳಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ಅಪ್ಪಳಿಸಿದ್ದು, ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇದೀಗ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (India Meteorological Department) ನೀಡಿದೆ.

ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?

ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡು, ಪುದುಚೇರಿಯಲ್ಲಿ ಭಾರಿ ಮಳೆ ಆಗುತ್ತಿದ್ದು, ಇದೀಗ ಕರ್ನಾಟಕದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ (India Meteorological Department) ಮಾಹಿತಿ ನೀಡಿದೆ.

ಇದನ್ನೂ ಕೂಡ ಓದಿ : Pan Card 2.0 : ಪ್ಯಾನ್ ಕಾರ್ಡ್ 2.0 ಬಂದ ಮೇಲೆ ಹಳೇ ಪ್ಯಾನ್ ಕಾರ್ಡ್ ಬದಲಾಯಿಸಬೇಕಾ.? ಸಂಪೂರ್ಣ ಮಾಹಿತಿ ಇಲ್ಲಿದೆ

ಇಂದಿನಿಂದ ರಾಜ್ಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಡಿಸೆಂಬರ್ 3ರಂದು ರಾಮನಗರ, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಕೊಡಗು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Leave a Reply