ಸರ್ಕಾರಿ ಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!

ಕನ್ನಡ ನ್ಯೂಸ್ ಟೈಮ್ : ಸರ್ಕಾರಿ ಕಾಲೇಜಿನ ಶೌಚಾಲಯದಲ್ಲಿ 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿ, ಬಳಿಕ ನವಜಾತ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟ ಆಘಾತಕಾರಿ ಘಟನೆ ತಮಿಳುನಾಡಿನ ಕುಂಭಕೋಣಂನಲ್ಲಿ ನಡೆದಿದೆ.

ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ತಾನು ಗರ್ಭಿಣಿಯಾಗಿರುವ ವಿಷಯ ಯಾರಿಗೂ ಗೊತ್ತಾಗದಂತೆ ಎಚ್ಚರಿಕೆ ವಹಿಸಿದ್ದಳು.

ಸ್ವಂತ ಮನೆ ಇಲ್ಲದವರಿಗೆ ಸಿಗಲಿದೆ ₹2.5 ಲಕ್ಷ ಸಹಾಯಧನ.! ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ – PM Awas Yojana

ಶುಕ್ರವಾರ ಎಂದಿನಂತೆ ಕಾಲೇಜಿಗೆ ಬಂದಾಗ ಹೆರಿಗೆ ನೋವು ಕಾಣಿಸಿಕೊಂಡಿದೆ. ಬಳಿಕ ಕಾಲೇಜಿನ ಶೌಚಾಲಯಕ್ಕೆ ತೆರಳಿ ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ಯಾರಿಗೂ ಗೊತ್ತಾಗದಂತೆ ನವಜಾತ ಶಿಶುವನ್ನು ಅಲ್ಲೇ ಇದ್ದ ಕಸದ ಬುಟ್ಟಿಯಲ್ಲಿ ಮುಚ್ಚಿಟ್ಟು, ಕ್ಲಾಸ್ ರೂಂಗೆ ತೆರಳಿದ್ದಳು. ಆ ಬಳಿಕ ತೀವ್ರ ರಕ್ತಸ್ರಾವವಾಗಿ ಕ್ಲಾಸ್ ರೂಂನಲ್ಲಿ ಪ್ರಜ್ಞೆತಪ್ಪಿ ಬಿದ್ದಾಗ ಆಂಬ್ಯುಲೆನ್ಸ್ ಮೂಲಕ ಕುಂಭಕೋಣಂ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

WhatsApp Group Join Now

Shrama Shakti Yojane : ಈ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಗೆ ಸಿಗಲಿದೆ ₹50,000/- ರೂಪಾಯಿ.! ಬೇಕಾಗುವ ದಾಖಲೆಗಳೇನು.?

ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಯನ್ನು ವೈದ್ಯರು ಪರಿಶೀಲಿಸಿದಾಗ, ಹೆರಿಗೆ ಆಗಿರುವ ಮಾಹಿತಿ ಮತ್ತು ಮಗುವನ್ನು ಕಸದ ಬುಟ್ಟಿಯಲ್ಲಿ ಮುಚ್ಚಿಟ್ಟಿರುವುದು ಗೊತ್ತಾಗಿತ್ತು. ಆಗ ವೈದ್ಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಪೊಲೀಸರು, ಕಾಲೇಜು ಸಿಬ್ಬಂದಿ ಶೌಚಾಲಯದ ಕಸದ ಬುಟ್ಟಿಯಲ್ಲಿದ್ದ ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ತಾಯಿ, ಮಗುವಿಗೆ ಚಿಕಿತ್ಸೆ ಮುಂದುವರಿದಿದ್ದು, ಇಬ್ಬರೂ ಆರೋಗ್ಯವಾಗಿದ್ದಾರೆ.

Leave a Reply