ರೈಲಿನಲ್ಲಿ ಗರ್ಭಿಣಿ ಮೇಲೆ ಅತ್ಯಾಚಾರ, ಮಹಿಳೆಗೆ ಗರ್ಭಪಾತ.! ಕೈಮುಗಿದು ಬೇಡಿಕೊಂಡರೂ ಬಿಡದ ಪಾಪಿ

Spread the love

Crime News : ತಮಿಳುನಾಡಿನ ಜೋಲಾರ್‌ಪೇಟೆ ಬಳಿ ಚಲಿಸುವ ರೈಲಿನಿಂದ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿ, ತಳ್ಳಿ ಗಂಭೀರ ಗಾಯಗೊಳಿಸಲಾಗಿದೆ. ಕೊಯಮತ್ತೂರಿನಲ್ಲಿ ಟೇಲರಿಂಗ್‌ ಮಾಡುತ್ತಿದ್ದ ಸಂತ್ರಸ್ತೆ ಕೊಯಿಮತ್ತೂರ್-ತಿರುಪತಿ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ನಲ್ಲಿ ಚಿತ್ತೂರಿಗೆ ಪ್ರಯಾಣಿಸುತ್ತಿದ್ದಾಗ, ಮಹಿಳೆಯರ ವಿಭಾಗದಲ್ಲಿದ್ದ ವ್ಯಕ್ತಿಯೊಬ್ಬರು ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಸದ್ಯ 36 ವರ್ಷದ ಗರ್ಭಿಣಿ ಮಹಿಳೆ ಶನಿವಾರ ಗರ್ಭಪಾತಕ್ಕೊಳಗಾಗಿದ್ದಾರೆ. TOI ವರದಿಯ ಪ್ರಕಾರ, 4 ತಿಂಗಳ ಗರ್ಭಿಣಿಯಾಗಿದ್ದ ಮಹಿಳೆ ಎರಡು ದಿನಗಳ ಹಿಂದೆ ನಡೆದ ಹಲ್ಲೆಯ ನಂತರ ವೆಲ್ಲೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಗರ್ಭಿಣಿ ಎಂದು ಬೇಡಿಕೊಂಡರು ಬಿಡದ ಪಾಪಿ:

ವರದಿಯ ಪ್ರಕಾರ, ಚಲಿಸುತ್ತಿದ್ದ ರೈಲಿನಲ್ಲಿ ಇತರ ಮಹಿಳಾ ಪ್ರಯಾಣಿಕರು ಹೋದ ನಂತರ ಆರೋಪಿಯು ಮಹಿಳಾ ಬೋಗಿಯನ್ನು ಹತ್ತಿದ್ದ ಎಂದು ಮಹಿಳೆ ತನ್ನ ಭಯಾನಕ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಇದು ಮಹಿಳಾ ಬೋಗಿಯಾಗಿರುವುದರಿಂದ ನಾನು ಅವನನ್ನು ಕೆಳಗಿಳಿಯಲು ಕೇಳಿದಾಗ, ರೈಲು ಈಗಾಗಲೇ ಚಲಿಸಲು ಪ್ರಾರಂಭಿಸಿದೆ ಮತ್ತು ಮುಂದಿನ ನಿಲ್ದಾಣದಲ್ಲಿ ಇಳಿಯುವುದಾಗಿ ಅವನು ಹೇಳಿದನು. ನಾನು ಸರಿ ಎಂದು ಹೇಳಿದೆ. ಆದರೆ ಆ ಬೋಗಿಯಲ್ಲಿ ಬೇರೆ ಯಾರೂ ಇರಲಿಲ್ಲ ಎಂದು ಹೇಳಿದರು. ಅರ್ಧ ಗಂಟೆ ಆ ವ್ಯಕ್ತಿ ಮೌನವಾಗಿದ್ದ. ನಂತರ, ಅವನು ಬಾತ್ರೂಮ್ ನಿಂದ ಬೆತ್ತಲೆಯಾಗಿ ಬಂದು ನನ್ನ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿದನು. ನಾನು ಗರ್ಭಿಣಿ ಮತ್ತು ನಾನು ನಿಮ್ಮ ಸಹೋದರಿಯಂತೆ ಎಂದು ಹೇಳುತ್ತಾ ಬೇಡಿಕೊಂಡರೂ ಪಾಪಿ ಗರ್ಭಿಣಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ದೌರ್ಜನ್ಯವೆಸಗಿದ್ದಾಗಿ ಮಹಿಳೆ ಹೇಳಿಕೊಂಡಿದ್ದಾಳೆ.

ಮಹಿಳೆಯ ತಲೆಗೆ 20 ಹೊಲಿಗೆ

ಇನ್ನು, ಶನಿವಾರ ಮಧ್ಯಾಹ್ನ ವೈದ್ಯರು ಮಹಿಳೆ ಚೇತರಿಸಿಕೊಳ್ಳುತ್ತಿದ್ದು, ಆದರೆ ದುರಾದೃಷ್ಟವಶಾತ್‌ ಗರ್ಭಪಾತವಾಗಿರುವುದನ್ನು ದೃಢಪಡಿಸಿದ್ದಾರೆ ಎಂದು ಅವರ ಪತಿ ವರದಿಗಾರರಿಗೆ ಮಾಹಿತಿ ನೀಡಿದರು. ಗುರುವಾರ ಅವರನ್ನು ಆಸ್ಪತ್ರೆಗೆ ದಾಖಲಿಸಿದಾಗ ಭ್ರೂಣವು ಸಾಮಾನ್ಯವಾಗಿತ್ತು. ಆದರೆ ಮಹಿಳೆ ಸ್ಥಿತಿ ಹದಗೆಟ್ಟಿತು. ಶನಿವಾರ ಭ್ರೂಣದ ಹೃದಯ ಬಡಿತ ಕಡಿಮೆಯಾದ ಕಾರಣ ಗರ್ಭಪಾತವಾಗಿದೆ ಎಂದು ಹೇಳಿದ್ದಾರೆ. ಇನ್ನು, ಮಹಿಳೆಯ ಕೈಕಾಲುಗಳು ಮತ್ತು ತಲೆಯಲ್ಲಿ ಮುರಿತಗಳು ಸೇರಿದಂತೆ ತೀವ್ರವಾದ ಗಾಯಗಳಾಗಿದ್ದು, ಆಕೆಯ ತಲೆಯ ಮೇಲೆ 20 ಹೊಲಿಗೆಗಳನ್ನು ಹಾಕಲಾಗಿದೆ ಎಂದು ವರದಿಯಾಗಿದೆ.

ಆರೋಪಿ ಹೇಮರಾಜ್ ಬಂಧನ

ವೆಲ್ಲೂರಿನ ಕೆವಿ ಕುಪ್ಪಂನ 30 ವರ್ಷದ ಹೇಮರಾಜ್ ಎಂದು ಗುರುತಿಸಲಾದ ಆರೋಪಿಯನ್ನು ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿಕೊಂಡು 12 ಗಂಟೆಗಳ ಒಳಗೆ ಪತ್ತೆಹಚ್ಚಲಾಯಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಹಿಂದೆ ಕೊಲೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಆತ ಜಾಮೀನಿನ ಮೇಲೆ ಹೊರಬಂದಿದ್ದ ಎಂದು ತಿಳಿದುಬಂದಿದೆ. ಏತನ್ಮಧ್ಯೆ, ದಕ್ಷಿಣ ರೈಲ್ವೆ ಮಹಿಳೆಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ. ಮಹಿಳಾ ಪ್ರಯಾಣಿಕನ ಮೇಲೆ ದುಷ್ಕರ್ಮಿ ಹಲ್ಲೆ ನಡೆಸಿ ಲೈಂಗಿಕ ಕಿರುಕುಳ ನೀಡಿದ್ದಾನೆ.

ಆದರೆ ಆಕೆ ಧೈರ್ಯದಿಂದ ವಿರೋಧಿಸಿದ್ದಾಳೆ ಎಂದು ದಕ್ಷಿಣ ರೈಲ್ವೆ ಮುಖ್ಯಸ್ಥ ಪಿಆರ್‌ಒ ಎಂ. ಸೆಂಥಮಿಲ್ ಸೆಲ್ವನ್ ಹೇಳಿದ್ದಾರೆ. ನಾನು ಸುಮಾರು 30 ನಿಮಿಷಗಳ ಕಾಲ ಹೋರಾಡಿದೆ. ನಾನು ಎದುರಿಸಿದ ಘಟನೆಯನ್ನು ಬೇರೆ ಯಾವುದೇ ಮಹಿಳೆ ಎದುರಿಸಬಾರದು. ದಯವಿಟ್ಟು ಅವನನ್ನು ಶಿಕ್ಷಿಸಿ. ಈ ಸೈಕೋನನ್ನು ಹೊರಗೆ ಬಿಡಬೇಡಿ ಎಂದು ಮಹಿಳೆ ಕೇಳಿಕೊಂಡಿದ್ದಾಳೆ.

WhatsApp Group Join Now

Spread the love

Leave a Reply