ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಬಂಧನ

Spread the love

ಕನ್ನಡ ನ್ಯೂಸ್ ಟೈಮ್ : ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕು ಬಳಿಕ ಲಿಂಗಸುಗೂರು (Lingasuguru) ತಾಲೂಕಿನಲ್ಲಿ ನಡೆದಿದೆ. ಆರೋಪಿಯನ್ನು 43 ವರ್ಷದ ಚಂದ್ರಶೇಖರ ಎಂದು ಗುರುತಿಸಲಾಗಿದ್ದು, ಪೇಂಟಿಂಗ್ ಕೆಲಸ ಮಾಡುತ್ತಿದ್ದ.

ಮಾನಸಿಕ ಖಿನ್ನತೆಗೆ ಒಳಗಾಗಿ, ಓದಲು ಬರೆಯಲು ಸರಿಯಾಗಿ ಬಾರದ ವಿದ್ಯಾರ್ಥಿನಿ ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಬಿಟ್ಟ ವೇಳೆ ಬಾಲಕಿ ಶಾಲೆ ಪಕ್ಕದ ಅಂಗಡಿಗೆ ತೆರಳಿದ್ದಾಳೆ. ಅಂಗಡಿ ಬಳಿ ಚಾಕೊಲೇಟ್ ಕೊಟ್ಟು ಆಸೆ ತೋರಿಸಿ ಬಾಲಕಿಯನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ

ಬಾಲಕಿಯನ್ನ ಕರೆದೊಯ್ಯುವುದನ್ನ ಗಮನಿಸಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮನೆ ಬಾಗಿಲು ಮುರಿದು ಒಳನುಗಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

WhatsApp Group Join Now

Spread the love

Leave a Reply