Weather Today : ಕರ್ನಾಟಕದಲ್ಲಿ ಮುಂಗಾರು ಮಳೆ ತೀವ್ರವಾಗಿದ್ದು, ವಾಯುಭಾರ ಕುಸಿತದಿಂದಾಗಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜಿಲ್ಲಾಡಳಿತವು ಅಪಾಯಗಳನ್ನು ತಡೆಗಟ್ಟಲು ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಿದೆ.
ಮುಂಗಾರು ಮಳೆ ಅಬ್ಬರ ಹಾಗೂ ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದಲ್ಲಿ ಭಾರಿ ಮಳೆ ಆರ್ಭಟಿಸುತ್ತಿದ್ದು, ನಿನ್ನೆ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗಿತ್ತು. ಇಂದು ಕೂಡಾ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಭಾರಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಎರಡು ಜಿಲ್ಲೆಗಳಿಗೆ ಬೆಳ್ಳಂಬೆಳಗ್ಗೆ ಭಾರೀ ಮಳೆಯ ನೌಕಾಸ್ಟ್ ಅಲರ್ಟ್ ಹೊರಡಿಸಲಾಗಿದೆ.
ಮುಂದಿನ 3 ಗಂಟೆಯ ಒಳಗಾಗಿ ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಮಳೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಕ್ಷಣದ ಅಲರ್ಟ್ ನೀಡಿದೆ. ಮಿಂಚು ಗುಡುಗು ಸಹಿತ ಮಳೆಯಾಗಲಿದೆ. ಗಾಳಿಯ ವೇಗ 30-40 ಕಿಮೀ ವೇಗದಲ್ಲಿ ಇರಲಿದೆ ಎಂದು ಇಲಾಖೆ ಬೆಳಗ್ಗಿನ ಜಾವ 7 ಗಂಟೆಗೆ ಅಲರ್ಟ್ ನೀಡಿದೆ.
ಎಲ್ಲೆಲ್ಲಿ ರೆಡ್ ಅಲರ್ಟ್.?
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಅತ್ಯಂತ ಭಾರೀ ಮಳೆಯಾಗಲಿದ್ದು, ಮೇ 30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಆರೆಂಜ್ ಅಲರ್ಟ್ ಎಲ್ಲೆಲ್ಲಿ.?
ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ವಿಜಯಪುರ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳ ಕೆಲವೆಡೆ ಮೇ 29ರವರೆಗೆ ಆರೆಂಜ್ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. ಯಾದಗಿರಿ, ಬಾಗಲಕೋಟೆ, ಗದಗ, ಹಾಸನ, ಕೊಡಗು, ಹಾವೇರಿ ಜಿಲ್ಲೆಗಳಿಗೆ ಮೇ 29 ರವರೆಗೆ ಯೆಲ್ಲೊಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಸಾಧಾರಣ ಮಳೆ
ಬೆಂಗಳೂರಲ್ಲಿ ಮೋಡ ಕವಿದ ವಾತಾವರಣವಿದ್ದು, ತಂಪಿನ ವಾತಾವರಣ ಇರಲಿದೆ. ಅಲ್ಲದೆ ಅಲ್ಲಲ್ಲಿ ಹಗುರದಿಂದ ಸಾಧಾರಣವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಶಾಲೆ-ಕಾಲೇಜು-ಅಂಗನವಾಡಿಗಳಿಗೆ ರಜೆ :-
ಇನ್ನು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗುವ ಅಪಾಯಗಳನ್ನು ತಡೆಗಟ್ಟಲು ಜಿಲ್ಲಾಡಳಿತ ಹಲವು ಕ್ರಮ ಕೈಗೊಂಡಿದೆ. ಮುಂಜಾಗೃತಾ ಕ್ರಮವಾಗಿ ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ದಕ್ಷಿಣ ಕನ್ನಡದ ಶಾಲೆ ಕಾಲೇಜು, ಅಂಗನವಾಡಿಗಳಿಗೆ ಇಂದು ಮತ್ತು ನಾಳೆ ರಜೆ ನೀಡಲಾಗಿದೆ.
ಉಡುಪಿಯಲ್ಲೂ ರಜೆ ಮುಂದುವರಿಕೆ :-
ಉಡುಪಿಯಲ್ಲಿಇಂದು ಅಂಗನವಾಡಿಗಳಿಗೆ ರಜೆ: ರೆಡ್ ಅಲರ್ಟ್ ಹಿನ್ನೆಲೆಯಲ್ಲಿಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಮೇ 27ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಗೆ ಮೇ 28ರ ತನಕ ರೆಡ್ ಅಲರ್ಟ್ ಘೋಷಿಸಿದ್ದು ಕಳೆದ 24 ಗಂಟೆಗಳಲ್ಲಿ ಭಾರೀ ಮಳೆಯಾಗಿದೆ.
ಚಿಕ್ಕಮಗಳೂರಲ್ಲೂ ರಜೆ ಅಂಗನವಾಡಿಗಳಿಗೆ ರಜೆ :-
ಜಿಲ್ಲೆಯಲ್ಲಿ ಸತತವಾಗಿ ಮಳೆ ಸುರಿಯುತ್ತಿದ್ದು, ಆರು ತಾಲೂಕುಗಳ ಅಂಗನವಾಡಿಗಳಿಗೆ ಮೂರು ದಿನ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ಮತ್ತು ನರಸಿಂಹರಾಜಪುರ ತಾಲೂಕುಗಳ ಅಂಗನವಾಡಿಗಳಿಗೆ ಮೇ 28ರವರೆಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಮೈಸೂರಲ್ಲಿ ಮಳೆ ಆರ್ಭಟ-ಶಾಲೆಗಳಿಗೆ ರಜೆ :-
ಮೈಸೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ ಇದ್ದು, ಭಾರೀ ಮಳೆಗೆ ಮರಗಳು ಧರೆಗುರುಳುತ್ತಿವೆ. ಮುಂಜಾಗೃತಾ ಕ್ರಮವಾಗಿ ಮೇ 27 ರಂದು ಎಲ್ಲಾ ಅಂಗನವಾಡಿಗಳಿಗೆ ಹಾಗೂ ಕೆಲ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕಳೆದ 24 ಗಂಟೆಯ ಮಳೆ ವಿವರ :-
ಕಲಬುರ್ಗಿ- 12.4 ಮಿಮೀ
ಬೆಳಗಾವಿ -7 ಮಿಮೀ
ಗದಗ -6.0 ಮಿಮೀ
ಕಾರವಾರ- 16.3 ಮಿಮೀ
ಚಿತ್ರದುರ್ಗ- 4.7 ಮಿಮೀ
ಮಂಗಳೂರು- ಎಪಿ 114.3
ಬೆಂಗಳೂರು ನಗರ- 5.2 ಮಿಮೀ
ಬೆಂಗಳೂರು ಎಚ್ಎಎಲ್- 4.3 ಮಿಮೀ
ಬಿಜಾಪುರ- 3.8 ಮಿಮೀ
ರಾಯಚೂರು-1.2 ಮಿಮೀ
ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ)- 3.0
ಬೆಂಗಳೂರು ಏವ್ಸ್ -5.0
ಹರದನಹಳ್ಳಿ (ಚಾಮರಾಜನಗರ dt)- 3.0
ಚಿಕ್ಕಬಳ್ಳಾಪುರ- 1.0
ಮೂಡಿಗೆರೆ(ಚಿಕ್ಕಮಗಳೂರು ಡಿಟಿ)- 32.0
ಮಂಗಳೂರು (ದಕ್ಷಿಣ ಕನ್ನಡ) -66.6