ಇತ್ತೀಚೆಗೆ ಕನ್ನಡವನ್ನು ತಮಿಳು ಭಾಷೆಯೊಂದಿಗೆ ಹೋಲಿಕೆ ಮಾಡಿ ವಿವಾದವನ್ನೆಳೆದುಕೊಂಡಿದ್ದ ತಮಿಳಿನ ನಟ ಕಮಲ್ ಹಾಸನ್ ಕೊನೆಗೂ ಕನ್ನಡಿಗರ ಬಳಿ ಕ್ಷಮೆ ಕೇಳಿದ್ದಾರೆ.
ತಮಿಳು ಭಾಷೆಯಿಂದಲೇ ಕನ್ನಡ ಹುಟ್ಟಿದೆ ಎಂದು ಹೇಳಿ ಕನ್ನಡಿಗರನ್ನು ಕೆರಳಿಸಿದ್ದ ಕಮಲ್ ಹಾಸನ್ ಕ್ಷಮೆ ಕೇಳುವಂತೆ ಒತ್ತಾಯ ಮಾಡಲಾಗಿತ್ತು.
ಕನ್ನಡ ಪರ ಸಂಘಟನೆಗಳು ಕಮಲ್ ಹಾಸನ್ ಅವರ ಚಿತ್ರಗಳನ್ನು ಬಹಿಷ್ಕರಿಸುವಂತೆ ಕರೆ ನೀಡಿದ ಬಳಿಕ ಹಾಗೂ ಕನ್ನಡ ಭಾಷೆಯ ಬಗ್ಗೆ ನೀಡಿದ ಹೇಳಿಕೆಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿದ ನಂತರ ಇದೀಗ ಅವರು ಕ್ಷಮೆಯಾಚಿಸಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಕಮಲ್, ಇದು ಪ್ರಜಾಪ್ರಭುತ್ವ. ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳದ ಮೇಲಿನ ನನ್ನ ಪ್ರೀತಿ ನಿಜ. ಕಾರ್ಯಸೂಚಿ ಹೊಂದಿರುವವರನ್ನು ಹೊರತುಪಡಿಸಿ ಯಾರೂ ಇದನ್ನು ಅನುಮಾನಿಸುವುದಿಲ್ಲ. ನನಗೆ ಈ ಹಿಂದೆಯೂ ಬೆದರಿಕೆ ಹಾಕಲಾಗಿದೆ. ನಾನು ನೀಡಿದ ಹೇಳಿಕೆಯಲ್ಲಿ ತಪ್ಪಾಗಿದ್ದರೆ, ನಾನು ಕ್ಷಮೆಯಾಚಿಸುತ್ತೇನೆ. ಮುಂದೆಂದೂ ಈ ರೀತಿ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.