ರಾಜ್ಯಾದ್ಯಂತ ಇಂದಿನಿಂದ `ಜಾತಿ ಗಣತಿ’ ಆರಂಭ : ತಪ್ಪದೇ ಎಲ್ಲರೂ ಈ ಮಾಹಿತಿ ನೀಡುವುದು ಕಡ್ಡಾಯ – Caste census

Spread the love

Caste census : ಸೆಪ್ಟೆಂಬರ್ 22 ರ ಇಂದಿನಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಆರಂಭವಾಗಲಿದ್ದು, ತಪ್ಪದೇ ಎಲ್ಲಾರೂ ಈ ಮಾಹಿತಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ.

WhatsApp Group Join Now

ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಸೂಚನೆ ನೀಡಲಾಗಿದೆ.

ಸಮೀಕ್ಷೆಗೆ ಈ ದಾಖಲೆಗಳು ಕಡ್ಡಾಯ :-

WhatsApp Group Join Now
  • ಆಧಾರ್ ಕಾರ್ಡ್
  • ಪಡಿತರ ಚೀಟಿ

ಮತದಾರರ ಗುರುತಿನ ಚೀಟಿ, ವಿಕಲಚೇತನರ ಸಂದರ್ಭದಲ್ಲಿ UID ಕಾರ್ಡ್ ಅಥವಾ ಪ್ರಮಾಣಪತ್ರಗಳು. ಪ್ರತಿ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ಗಳು ಮೊಬೈಲ್ಗೆ ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ, ಏಕೆಂದರೆ ಸಮೀಕ್ಷೆಯ ಸಮಯದಲ್ಲಿ ಒಟಿಪಿ (OTP) ಗಾಗಿ ಆಧಾರ್ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ಗೆ ಸಂದೇಶ ಕಳುಹಿಸಲಾಗುತ್ತದೆ.

ಸಮೀಕ್ಷೆಗೆ ಹಾಜರಾಗಲು ಬೇಕಾಗುವ ದಾಖಲೆಗಳು

WhatsApp Group Join Now

ಆಧಾರ್ ಕಾರ್ಡ್ : ಪ್ರತಿ ಕುಟುಂಬದ ಸದಸ್ಯರಿಗೆ, ವಿಶೇಷವಾಗಿ 6 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಡ್ಡಾಯವಾಗಿದೆ.

ಪಡಿತರ ಚೀಟಿ : ಆಧಾರ್ ಸಂಖ್ಯೆಯನ್ನು ದೃಢೀಕರಿಸಲು ಪಡಿತರ ಚೀಟಿಯನ್ನು ಆಧಾರವಾಗಿ ಬಳಸಲಾಗುತ್ತದೆ.

ಮತದಾರರ ಗುರುತಿನ ಚೀಟಿ : ಇದು ಗುರುತಿನ ದೃಢೀಕರಣಕ್ಕೆ ಸಹಕಾರಿಯಾಗುತ್ತದೆ.

ವಿಕಲಚೇತನರಿಗಾಗಿ : ವಿಕಲಚೇತನರಾಗಿದ್ದರೆ, ಅವರ UID ಕಾರ್ಡ್ ಅಥವಾ ಸಂಬಂಧಪಟ್ಟ ಪ್ರಮಾಣಪತ್ರಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

ನೆನಪಿನಲ್ಲಿಡಬೇಕಾದ ಅಂಶಗಳು:

ಆಧಾರ್ ಲಿಂಕಿಂಗ್ : ನಿಮ್ಮ ಆಧಾರ್ಗೆ ಮೊಬೈಲ್ ನಂಬರ್ ಲಿಂಕ್ ಆಗಿದೆಯೆ ಎಂಬುದನ್ನು ಖಚಿತಪಡಿಸಿಕೊಳ್ಳಿ, ಏಕೆಂದರೆ ಸಮೀಕ್ಷೆಯ ಸಮಯದಲ್ಲಿ OTP ಸಂದೇಶವನ್ನು ಅದಕ್ಕೆ ಕಳುಹಿಸಲಾಗುತ್ತದೆ.

ಒಟಿಪಿ (OTP ): ಒಬ್ಬ ಸದಸ್ಯ ಮನೆಯಲ್ಲಿ ಇಲ್ಲದಿದ್ದರೆ, ಕುಟುಂಬದ ಪರವಾಗಿ ಉತ್ತರ ನೀಡುವವರು ಫೋನ್ ಮೂಲಕ OTP ಸಂಖ್ಯೆಯನ್ನು ಪಡೆದು ಮಾಹಿತಿ ನೀಡಬೇಕಾಗುತ್ತದೆ.

ಆಧಾರ್ ಇಲ್ಲದಿದ್ದರೆ : ಆಧಾರ್ ಸಂಖ್ಯೆ ಇಲ್ಲದಿದ್ದರೆ, ಹತ್ತಿರದ ಆಧಾರ್ ನೋಂದಣಿ ಕೇಂದ್ರಕ್ಕೆ ಭೇಟಿ ನೀಡಿ ನೋಂದಣಿ ಸಂಖ್ಯೆಯನ್ನು ಪಡೆದು ಸಮೀಕ್ಷೆಯಲ್ಲಿ ಭಾಗವಹಿಸಬಹುದು.

ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯಾರೂ ಕೂಡಾ ಸಮೀಕ್ಷೆಯಿಂದ ಹೊರಗುಳಿಯಬಾರದು. ಸಮೀಕ್ಷೆಯಲ್ಲಿ 60 ಪ್ರಶ್ನೆಗಳನ್ನು ಕೇಳಲಾಗುವುದು. ಎಲ್ಲರೂ ಪ್ರತಿಯೊಂದು ಪ್ರಶ್ನೆಗಳಿಗೆ ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು. ಸರಿಯಾದ ಮಾಹಿತಿ ನೀಡಿದರೆ ಮಾತ್ರ ವೈಜ್ಞಾನಿಕ ಸಮೀಕ್ಷೆ ಸಾಧ್ಯವಿದೆ.

ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಸಾರ್ವಜನಿಕರು ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಬಹುದು. ಆನ್ ಲೈನ್ ಮೂಲಕ ಸಹ ಸಮೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಸಮೀಕ್ಷೆ ಆರಂಭವಾಗುವ ಪೂರ್ವದಲ್ಲೇ ಆಶಾ ಕಾರ್ಯಕರ್ತರು ಎಲ್ಲರ ಮನೆಗಳಿಗೆ ಹೋಗಿ ಸಮೀಕ್ಷೆಯ ನಮೂನೆಯನ್ನು ಒದಗಿಸಲಿದ್ದಾರೆ. ಇದರಿಂದ ಸರಿಯಾದ ಮಾಹಿತಿಯನ್ನು ಒದಗಿಸುವ ಬಗ್ಗೆ ಜಾಗೃತಿ ಮೂಡಲು ಸಾಧ್ಯವಿದೆ. ಪ್ರತಿ ಶಿಕ್ಷಕರಿಗೆ 120ರಿಂದ 150ಮನೆಗಳ ವ್ಯಾಪ್ತಿಯನ್ನು ನಿಗದಿಪಡಿಸಲಾಗಿದೆ.

ವಿವಾದದ 33 ಜಾತಿಗಳನ್ನು ಕೈ ಬಿಟ್ಟ ಆಯೋಗ

ವಿವಾದಕ್ಕೆ ಕಾರಣವಾಗಿದ್ದಂತ ಕ್ರಿಶ್ಚಿಯನ್ ಗೆ ಮತಾಂತರ ಆದ 33 ಜಾತಿಗಳನ್ನು ಹಿಂದುಳಿದ ವರ್ಗಗಳ ಆಯೋಗವು ಸಮೀಕ್ಷೆ ನಡೆಸುವ ನಿರ್ಧಾರದಿಂದ ಕೈ ಬಿಟ್ಟಿದೆ. ಹೀಗಾಗಿ ಮತಾಂತರ ಆಗಿದ್ದರೇ ಆ ಧರ್ಮವೇ ಫಿಕ್ಸ್ ಆದಂತೆ ಆಗಿದೆ.

ಹಿಂದುಳಿದ ವರ್ಗಗಳ ಆಯೋಗವು ಈ ಮಾಹಿತಿ ನೀಡಿದ್ದು, ಗೊಂದಲಕ್ಕೆ ಕಾರಣವಾದಂತ 33 ಜಾತಿಗಳನ್ನು ಸಾರ್ವಜನಿಕರ ಸಲಹೆಯ ಮೇರೆಗೆ ಕೈಬಿಡಲಾಗಿದೆ. ನಾಳೆಯಿಂದ ಆರಂಭಗೊಳ್ಳುವಂತ ಜಾತಿ ಗಣತಿ ಸಮೀಕ್ಷೆಯ ಪಟ್ಟಿಯಲ್ಲಿ ಆ ಜಾತಿಗಳು ಇರೋದಿಲ್ಲ. ಇಚ್ಚೆ ಇರೋರು ಅವುಗಳನ್ನು ಸ್ವಇಚ್ಚೆಯಿಂದ ಬರೆಸಬಹುದು ಎಂದಿದೆ.

ಇನ್ನೂ ಮತಾಂತರವಾದ ಜಾತಿಗಳಿಗೆ ಮೂಲ ಜಾತಿ ಬಿಟ್ಟು ಮತಾಂತರವಾದ ಧರ್ಮವೇ ಅನ್ವಯಿಸಲಿದೆ. ಮೂಲ ಜಾತಿ ಅವರಿಗೆ ಅನ್ವಯಿಸೋದಿಲ್ಲ. ಸಮೀಕ್ಷೆಯ ನಂತ್ರ ಯಾವ ಜಾತಿ ಯಾವ ಕೆಟಗರಿಯಲ್ಲಿ ಬರುತ್ತದೆ ಎಂಬುದಾಗಿ ತಜ್ಞರ ತಂಡವು ನಿರ್ಧರಿಸಲಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್ ನಾಯಕ್ ಮಾಹಿತಿ ನೀಡಿದ್ದಾರೆ.


Spread the love

Leave a Reply