ಬಿಪಿಎಲ್‌ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್.! BPL Ration Card Updates

Spread the love

ರಾಜ್ಯದಲ್ಲಿ ಸದ್ಯ ಆಹಾರ ಇಲಾಖೆ ಅನರ್ಹರ ಬಳಿಯ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸುತ್ತಿದೆ. ಈ ನಡುವೆಯೇ ಇಂತಹವರೆಲ್ಲರನ್ನು ಬಿಗ್‌ ಶಾಕ್‌ವೊಂದು ಕಾದಿದ್ದು, ಬಿಪಿಎಲ್/ಅಂತ್ಯೋದಯ ಪಡಿತರ ಚೀಟಿಯಿಂದ ಹೊರಗಿಡಲಾಗಿದೆ. ಹಾಗಾದ್ರೆ, ಯಾರನ್ನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

WhatsApp Group Join Now

ಸಾಮಾನ್ಯವಾಗಿ ಬಿಪಿಎಲ್‌ ಕಾರ್ಡ್ ಅನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೀಡಲಾಗುತ್ತದೆ. ಆದರೆ, ಇದನ್ನು ಶ್ರೀಮಂತರು ಅಂದರೆ, ಅನರ್ಹರು ಸಹ ಪಡೆದುಕೊಂಡಿದ್ದು, ಇಂತಹವರ ವಿರುದ್ಧ ಸರ್ಕಾರ ಸಮರ ಸಾರಿದೆ. ಈ ನಡುವೆಯೇ ಕೆಳಗೆ ನೀಡಲಾಗಿರುವ ಇಂತಹವರನ್ನು ಬಿಪಿಎಲ್‌/ಅಂತ್ಯೋದಯ ಕಾರ್ಡ್‌ನಿಂದ ಹೊರಗಿಡಲಾಗಿದೆ.

• ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ಹೊಂದಿರುವ ಜಮೀನು ಸೇರಿಸಿದಾಗ 7 ಹೆಕ್ಟೇರ್‌ಗೂ ಅಧಿಕ ಜಮೀನು ಇದ್ದಲ್ಲಿ ಅಂತಹವರು ಬಿಪಿಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು ಎಂದು ತಿಳಿಸಲಾಗಿದೆ.

WhatsApp Group Join Now

• ಪಡಿತರ ಚೀಟಿಯ ಯಾವುದೇ ಸದಸ್ಯ 4 ಚಕ್ರ ವಾಹನ ಹೊಂದಿದ್ದಲ್ಲಿ ಅಂತಹವರು ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು(ತಂದೆ/ ತಾಯಿ/ಪತ್ನಿ/ಅವಿವಾಹಿತ ಮಕ್ಕಳು) ಬಿಪಿಎಲ್/ ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.

• ಜಿಎಸ್‌ಟಿ ಅಥವಾ ಆದಾಯ ತೆರಿಗೆ ಪಾವತಿಸುತ್ತಿರುವ ಯಾವುದೇ ವ್ಯಕ್ತಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು (ತಂದೆ/ ತಾಯಿ/ಹೆಂಡತಿ/ಅವಿವಾಹಿತ ಮಕ್ಕಳು) ಬಿಪಿಎಲ್/ ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.

WhatsApp Group Join Now

• ಸರ್ಕಾರಿ ನೌಕರಿ ಮಾಡುತ್ತಿರುವ ಯಾವುದೇ ವ್ಯಕ್ತಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು (ತಂದೆ/ತಾಯಿ/ಹೆಂಡತಿ/ಅವಿವಾಹಿತ ಮಕ್ಕಳು) ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.

• ಸಹಕಾರಿ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಸಿಬ್ಬಂಧಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು (ತಂದೆ/ ತಾಯಿ/ ಹೆಂಡತಿ/ ಅವಿವಾಹಿತ ಮಕ್ಕಳು) ಬಿಪಿಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.

• ವೃತ್ತಿಪರ ನೌಕರರು (ವೈದ್ಯರು, ಎಂಜಿನಿಯರ್, ವಕೀಲರು, ಇತರರು) ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು (ತಂದೆ/ ತಾಯಿ/ ಹೆಂಡತಿ/ ಅವಿವಾಹಿತ ಮಕ್ಕಳು ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.

• ನೋಂದಾಯಿತ ಗುತ್ತಿಗೆದಾರರು, ಎಪಿಎಂಸಿ ಟ್ರೇಡರ್‌ಗಳು, ಕಮಿಷನ್ ಏಜಂಟರು, ಬೀಜ ಮತ ಗೊಬ್ಬರ ಡೀಲರ್‌ಗಳು ಇತ್ಯಾದಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರ (ತಂದೆ/ ತಾಯಿ/ ಹೆಂಡತಿ/ ಅವಿವಾಹಿತ ಮಕ್ಕಳು) ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀ ಹೊಂದಲು ಅನರ್ಹರು.

• ಅನುದಾನಿತ ಶಾಲಾ ಕಾಲೇಜುಗಳ ನೌಕರರು ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು (ತಂದೆ/ತಾಯಿ/ ಹೆಂಡತಿ/ ಅವಿವಾಹಿತ ಮಕ್ಕಳು) ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.

• ಸರ್ಕಾರಿ ಸ್ವಾಮ್ಯದ ಉದ್ಯಮಗಳು/ ಮಂಡಳಿಗಳು /ನಿಗಮಗಳ ಖಾಯಂ ನೌಕರರು, ಸ್ವಾಯ ಸಂಸ್ಥೆ/ ಮಂಡಳಿಯ ನೌಕರರು ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ (ತಂದೆ/ ತಾಯಿ/ ಹೆಂಡತಿ/ ಅವಿವಾಹಿತ ಮಕ್ಕಳು) ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು. ಹೀಗೆ ಇಂತಹವರೆಲ್ಲರನ್ನು ಬಿ.ಪಿ.ಎಲ್/ಅಂತ್ಯೋದಯದಿಂದ ಹೊರಗಿಡಲಾಗುತ್ತದೆ ಎಂದು ತಿಳಿಸಲಾಗಿದೆ.


Spread the love

Leave a Reply