ಪೊಲೀಸರು 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಮಾಡಿದ್ರು : ಕೈಯಲ್ಲಿ ಡೆತ್ ನೋಟ್ ಬರೆದುಕೊಂಡು ವೈದ್ಯೆ ಆತ್ಮಹತ್ಯೆ

Spread the love

ಮಹಾರಾಷ್ಟ್ರದಲ್ಲಿ ವೈದ್ಯೆಯೊಬ್ಬರ ಆತ್ಮಹತ್ಯೆ ಸಂಚಲನ ಮೂಡಿಸಿದೆ. ಐದು ತಿಂಗಳಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಎಸ್‌ಐ) ನಾಲ್ಕು ಬಾರಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಹೇಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಆಸ್ಪತ್ರೆಯಲ್ಲಿ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಂತ್ರಸ್ತೆ ತನ್ನ ಎಡಗೈಯಲ್ಲಿ ಆತ್ಮಹತ್ಯೆ ಪತ್ರ ಬರೆದು ದೌರ್ಜನ್ಯ ಬಹಿರಂಗ ಪಡೆಸಿದ್ದಾಳೆ. ಎಸ್‌ಐ ಗೋಪಾಲ್ ಬಡ್ನೆ ತನಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಆಕೆ ಆರೋಪಿಸಿದ್ದಾಳೆ. ಆತನ ಕಿರುಕುಳದಿಂದಲೇ ತಾನು ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಆಕೆ ಹೇಳಿದ್ದಾಳೆ. ಪ್ರಸ್ತುತ, ಸರ್ಕಾರ ಎಸ್‌ಐ ಬಡ್ನೆಯನ್ನ ಅಮಾನತುಗೊಳಿಸಿದೆ.

“ನನ್ನ ಸಾವಿಗೆ ಪೊಲೀಸ್ ಇನ್ಸ್‌ಪೆಕ್ಟರ್ ಗೋಪಾಲ್ ಬುಡ್ನೆ ಕಾರಣ. ಆತ ನನ್ನ ಮೇಲೆ ನಾಲ್ಕು ಬಾರಿ ಅತ್ಯಾಚಾರ ಎಸಗಿದ್ದಾನೆ. ಐದು ತಿಂಗಳಿಗೂ ಹೆಚ್ಚು ಕಾಲ ನನ್ನನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸಿಸಿದ” ಎಂದು ಟಿಪ್ಪಣಿಯಲ್ಲಿ ಹೇಳಲಾಗಿದೆ. ಫಾಲ್ಟನ್ ಉಪ-ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕೆಲಸ ಮಾಡುತ್ತಿರುವ ಸಂತ್ರಸ್ತೆ ಜೂನ್ 19ರಂದು ಇದೇ ರೀತಿಯ ಆರೋಪಗಳೊಂದಿಗೆ ಡಿಎಸ್‌ಪಿಗೆ ಪತ್ರ ಬರೆದಿದ್ದರು. ಆತ್ಮಹತ್ಯೆಗೆ ತಿಂಗಳುಗಳ ಮೊದಲು ಡಿಎಸ್‌ಪಿಗೆ ಬರೆದ ಪತ್ರದಲ್ಲಿ, ಗ್ರಾಮೀಣ ಪೊಲೀಸ್ ಇಲಾಖೆಯ ಮೂವರು ಪೊಲೀಸ್ ಅಧಿಕಾರಿಗಳು ತನಗೆ ಕಿರುಕುಳ ನೀಡಿದ್ದಾರೆ ಎಂದು ಆಕೆ ಆರೋಪಿಸಿದ್ದಳು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದು, ತನ್ನ ಪತ್ರದಲ್ಲಿ ಬುಡ್ನೆ, ಉಪ-ವಿಭಾಗೀಯ ಪೊಲೀಸ್ ಇನ್ಸ್‌ಪೆಕ್ಟರ್ ಪಾಟೀಲ್ ಮತ್ತು ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಲಾಡ್‌ಪುತ್ರೆ ಹೆಸರಿಸಿದ್ದಾರೆ. ಅವರು ತೀವ್ರ ಒತ್ತಡದಲ್ಲಿದ್ದಾರೆ ಎಂದು ಹೇಳಿದರು ಮತ್ತು ಈ ವಿಷಯವನ್ನು ತನಿಖೆ ಮಾಡಿ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿನಂತಿಸಿದರು.

ಈ ಘಟನೆ ಮಹಾರಾಷ್ಟ್ರದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಆತ್ಮಹತ್ಯೆ ರಾಜಕೀಯ ತಿರುವು ಪಡೆದುಕೊಂಡಂತೆ, ಸಿಎಂ ದೇವೇಂದ್ರ ಫಡ್ನವೀಸ್ ಅವರ ಆದೇಶದ ಮೇರೆಗೆ ಅಧಿಕಾರಿಯನ್ನ ಅಮಾನತುಗೊಳಿಸಲಾಗಿದೆ. ಕಾಂಗ್ರೆಸ್ ನಾಯಕ ವಿಜಯ್ ನಾಮದೇವರಾವ್ ವಡೆಟ್ಟಿವಾರ್ ಆತ್ಮಹತ್ಯೆಗೆ ಸರ್ಕಾರವೇ ಕಾರಣ ಎಂದು ಆರೋಪಿಸಿದರು. ವೈದ್ಯರು ಹಿಂದೆ ದೂರು ನೀಡಿದಾಗ ಏಕೆ ಕ್ರಮ ಕೈಗೊಳ್ಳಲಿಲ್ಲ ಎಂದು ಪ್ರಶ್ನಿಸಿದರು. ಮಹಾಯುತಿ ಸರ್ಕಾರ ಪೊಲೀಸರನ್ನು ಪದೇ ಪದೇ ರಕ್ಷಿಸುತ್ತಿದೆ, ಇದು ಪೊಲೀಸ್ ದೌರ್ಜನ್ಯಕ್ಕೆ ಕಾರಣವಾಗುತ್ತಿದೆ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರ ವೈದ್ಯರ ಆತ್ಮಹತ್ಯೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸುವ ಭರವಸೆ ನೀಡಿದೆ.

WhatsApp Group Join Now

Spread the love

Leave a Reply