ರೈತರ ಸಾಲಮನ್ನಾ : ಗುಡ್‌ ನ್ಯೂಸ್‌ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ

Spread the love

ರೈತರ ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಬಹುತೇಕ ರೈತರ ಸಾಲಮನ್ನಾ ಮಾಡಲಾಗಿದೆ ಎಂದು ರಾಜ್ಯದ ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರ್ಜರಿ ಗುಡ್‌ ನ್ಯೂಸ್‌ ನೀಡಿದ್ದಾರೆ. 1 ಕೋಟಿ ಲೀಟರ್ ಹಾಲು ಪ್ರತಿದಿನ ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯ.

ಸಹಕಾರ ತತ್ವದಡಿ ಬರುವ ಎಲ್ಲಾ ಸಂಘ ಸಂಸ್ಥೆಗಳನ್ನು ಸಬಲೀಕರಣ ಗೊಳಿಸಬೇಕು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ 72ನೇ ಅಖಿಲ ಭಾರತ ‌ಸಹಕಾರ ಸಪ್ತಾಹದ ಪೂರ್ವಭಾವಿ ಸಭೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಕರ್ನಾಟಕ ಸಹಕಾರಿ ರತ್ನ ಪ್ರಶಸ್ತಿಯನ್ನು ರಾಜ್ಯೋತ್ಸವ ಪ್ರಶಸ್ತಿ ಮಾದರಿಯಲ್ಲಿ ನೀಡಿದರೆ ಒಳ್ಳೆಯದಲ್ಲವೇ. ಮೊದಲೆಲ್ಲಾ ನೂರಾರು ಪ್ರಶಸ್ತಿ ಕೊಡಲಾಗುತ್ತಿತ್ತು. ಈಗ ಎಷ್ಟನೇ ವರ್ಷದ ಆಚರಣೆಯೋ ಅಷ್ಟೇ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಅಥವಾ ಜಿಲ್ಲೆಗೆ ಒಂದರಂತೆ ಪ್ರಶಸ್ತಿ ನೀಡಿದರೆ ಸೂಕ್ತ. ಬೆಂಗಳೂರಿಗೆ ಅಗತ್ಯವಿದ್ದರೆ ಎರಡರಿಂದ ಐದು ಪ್ರಶಸ್ತಿಗಳು ಇರಲಿ. ಸಮಿತಿಯ ತೀರ್ಮಾನದಂತೆ ನೀಡಿ ಎನ್ನುವ ಸಲಹೆ ನೀಡಿದರು.

ಸಹಕಾರ ಇಲಾಖೆ ಅನಿವಾರ್ಯ ಕಾರಣಗಳಿಂದ ನನ್ನ ಸುಪರ್ದಿಗೆ ಬಂದಿದೆ. ಸಹಕಾರಿ ಕ್ಷೇತ್ರವನ್ನು ಮೊದಲಿನಿಂದಲೂ ಬೆಂಬಲಿಸಿ ಕೊಂಡು ಬಂದಿದ್ದೇನೆ ಸಹಕಾರಿ ಕ್ಷೇತ್ರದಲ್ಲಿ ಒಕ್ಕೂಟಗಳನ್ನು

ಬಲಗೊಳಿಸಬೇಕಿದೆ. ನಾನು ಶಾಸಕರಾಗಿದ್ದ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಂಘಗಳು ರೈತರ ಅಧೀನದಲ್ಲಿಯೇ ನಡೆಯಬೇಕು ಎಂದು ಒತ್ತಾಯಿಸಿದ್ದೆ. ಈಗಲೂ ಅದರಂತೆ ನಡೆಯುತ್ತಿದೆ. ಮೊದಲಿನಿಂದಲೂ ಈ ಕ್ಷೇತ್ರವನ್ನು ಬೆಂಬಲಿಸಿಕೊಂಡೇ ಬಂದಿದ್ದೇನೆ.

ಬ್ಯಾಂಕಿಂಗ್ ವ್ಯವಸ್ಥೆ ನಿಯಂತ್ರಣ ಕಾಯ್ದೆ ಪ್ರಕಾರ ಸಹಕಾರಿ ಬ್ಯಾಂಕ್ ಗಳ ಮ್ಯಾನೇಜರ್ ಗಳ ಸೇವಾವಧಿ ಯನ್ನು ಮರು ಪರಿಶೀಲಿಸಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಸಭೆಯಲ್ಲಿ ಮುಖ್ಯಮಂತ್ರಿಗಳನ್ನು ಕೋರಲಾಯಿತು. ರಾಜ್ಯದ ನೇಕಾರ, ಬಡಗಿ, ಮೀನುಗಾರರ ಸೊಸೈಟಿ ಗಳಂಥ ವೃತ್ತಿಮೂಲ ಸಂಘಗಳನ್ನು ಸಬಲಗೊಳಿಸಬೇಕು. ಸಹಕಾರ ಸಪ್ತಾಹದ ಘೋಷವಾಕ್ಯಗಳನ್ನು ಕೇಂದ್ರ ಸರ್ಕಾರದ ಬದಲಿಗೆ ಆಯಾ ರಾಜ್ಯಗಳೇ ಘೋಷಿಸಬೇಕು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಇನ್ನೂ ಈ ವೇಳೆ ಸಚಿವರಾದ ಎಚ್ ಕೆ ಪಾಟೀಲ್, ಮಾಜಿ ಸಚಿವರಾದ ಕೆ ಎನ್ ರಾಜಣ್ಣ, ಎಸ್.ಟಿ.ಸೋಮಶೇಖರ್, ಶಾಸಕರಾದ ವೆಂಕಟೇಶ್, ರಾಘವೇಂದ್ರ ಹಿಟ್ನಾಳ್, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷರಾದ ಜಿ ಟಿ ದೇವೇಗೌಡ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಕಾರ ಮಹಾ ಮಂಡಲಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now

Spread the love

Leave a Reply