ಇಡೀ ರಾಜ್ಯದಾದ್ಯಂತ ಭಾರಿ ಮಳೆ, ಹವಮಾನ ಇಲಾಖೆಯಿಂದ ಎಲ್ಲೋ ಅಲರ್ಟ್ ಘೋಷಣೆ. ಅಕ್ಟೋಬರ್ 29ರವರೆಗೂ 18 ಜಿಲ್ಲೆಗಳಿಗೆ ಭಯಂಕರ ಮಳೆ. ರಾಜ್ಯದಲ್ಲಿ ಈಗಾಗಲೇ ಮುಂಗಾರು ಮಳೆ ಅವಧಿ ಮುಗಿದಿದ್ದು, ಹಿಂಗಾರು ಮಳೆ ಆರಂಭಗೊಂಡಿದೆ. ದಿಢೀರನೇ ಸಾಯಂಕಾಲದ ಹೊತ್ತಿಗೆ ಭಯಂಕರವಾಗಿ ಬೀಸುವ ಗಾಳಿ, ಸುಳಿಗಾಳಿ, ಗುಡುಗು-ಮಿಂಚು ಸಹಿತ ರಣಮಳೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೀಳುತ್ತಿದೆ.
ಕರ್ನಾಟಕ ರಾಜ್ಯದ ಬಹುತೇಕ ಕಡೆಗಳಲ್ಲಿ ಇದೇ ಮುಂದಿನ ಅಕ್ಟೋಬರ್ 29ರ ವರೆಗೂ ಸಹ ಬಿಟ್ಟು ಬಿಡದೆ ಭಯಂಕರವಾಗಿ ಮಳೆ ಬೀಳಲಿದ್ದು, ಐಎಂಡಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ನಾಳೆಯಿಂದ ಮುಂದಿನ ನಾಲ್ಕು ದಿನಗಳವರೆಗೆ ಎಲ್ಲೋ ಅಲರ್ಟ್ ಘೋಷಿಸಿದೆ.
ಆಗ್ನೆಯ ಅರೇಬಿಯನ್ ಸಮುದ್ರ ಮತ್ತು ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ಬದಲಾವಣೆಗಳಿಂದಾಗಿ ರಾಜ್ಯಾದ್ಯಂತ ಅಕ್ಟೋಬರ್ 29ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಇಂದು ಸಹ ಬೆಂಗಳೂರಿಗೂ ಎಲ್ಲೋ ಅಲರ್ಟ್ ನೀಡಲಾಗಿದೆ.
ಭಾರಿ ಮಳೆ ಎಚ್ಚರಿಕೆ ಮತ್ತು ಗಾಳಿಯ ವೇಗ
ಹವಾಮಾನ ಇಲಾಖೆಯ ಪ್ರಕಾರ ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಸಂಜೆಯ ನಂತರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ಗಾಳಿಯ ಎಚ್ಚರಿಕೆ
ಒಳನಾಡಿನ ಜಿಲ್ಲೆಗಳಲ್ಲಿ ಮಳೆಯೊಂದಿಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳು, ಕರಾವಳಿ ಪ್ರದೇಶಗಳಲ್ಲಿ ಪರಿಸ್ಥಿತಿ ತೀವ್ರವಾಗಿದ್ದು, ಗಾಳಿಯ ವೇಗ ಗಂಟೆಗೆ 55 km ತಲುಪುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಮೊದಲ ಎರಡು ದಿನಗಳಲ್ಲಿ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅತ್ಯಂತ ಹೆಚ್ಚು ಮಳೆಯ ಎಚ್ಚರಿಕೆಯನ್ನ ನೀಡಲಾಗಿದೆ. ದಕ್ಷಿಣ ಒಳನಾಡು, ಕೋಲಾರ, ಕೊಡಗು, ಚಾಮರಾಜನಗರ, ಹಾಸನ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರು ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣದಿಂದ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 28 ಡಿಗ್ರಿ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಸುತ್ತ ಮುತ್ತ ಇರಲಿದೆ. ಮೂರನೇ ಮತ್ತು ನಾಲ್ಕನೇ ದಿನ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯಲಿದೆ.
ಉತ್ತರ ಒಳನಾಡಿನ ಕಲ್ಬುರ್ಗಿ, ವಿಜಯಪುರ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿಯೂ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆಯು ಸಾರ್ವಜನಿಕರಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮತ್ತು ಹವಾಮಾನ ಇಲಾಖೆಯ ಸೂಚನೆಗಳನ್ನ ಪಾಲಿಸುವಂತೆ ಮನವಿ ಮಾಡಿದೆ.
ಮಳೆ.! ಮಳೆ.! ಅಕ್ಟೋಬರ್ 29 ರ ವರೆಗೆ | 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | weather forecast
WhatsApp Group
Join Now