ಅಡಕೆಯಲ್ಲಿನ ಸಾರಗಳು ಶಕ್ತಿಶಾಲಿ ಕ್ಯಾನ್ಸರ್ ಪ್ರತಿಬಂಧಕ ಗುಣಗಳನ್ನು ಹೊಂದಿವೆ ಎನ್ನುವುದು ದೃಢಪಟ್ಟಿದೆ. ಈ ಮಹತ್ವದ ಮಾಹಿತಿಯನ್ನು ತಿಳಿಸಿರುವ ಯೆನೆಪೋಯ ವಿಶ್ವವಿದ್ಯಾಲಯದ ಅಡಕೆ ಕುರಿತ ಅಧ್ಯಯನ ವರದಿಯನ್ನು ಕ್ಯಾಂಪ್ಕೋ ಸ್ವಾಗತಿಸಿದೆ.
ಕ್ಯಾಂಪ್ಕೋ ಅಧ್ಯಕ್ಷ ಎ. ಕಿಶೋರ್ ಕುಮಾರ್ ಕೊಡ್ಲಿ, ಅಡಿಕೆಯ ಸಾರಗಳು ಕ್ಯಾನ್ಸರ್ ಕೋಶಗಳ ವೃದ್ಧಿ, ಚಲನೆ ಮತ್ತು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯುತ್ತವೆ. ಇದು ಸಾಮಾನ್ಯ ಕೋಶಗಳಿಗೆ ಹಾನಿ ಉಂಟು ಮಾಡುವುದಿಲ್ಲ ಎಂಬುದು ಅಧ್ಯಯನದ ಅಂಶಗಳಳಾಗಿವೆ. ಸಾಂಪ್ರದಾಯಿಕವಾಗಿ ಸಂಸ್ಕರಿಸಿದ ಅಡಕೆಯನ್ನು ಬಳಸಿದರೆ ಆರೋಗ್ಯದಾಯಕ ಲಾಭಗಳಿವೆ ಎನ್ನುವ ಜನಸಾಮಾನ್ಯರ ನಂಬಿಕೆಗೆ ವೈಜ್ಞಾನಿಕ ಸಾಕ್ಷ್ಯಾಧಾರ ಒದಗಿಸಿದೆ ಎಂದು ಹೇಳಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಅಡಕೆಯನ್ನು ಕ್ಯಾನ್ಸರ್ ಕಾರಕ ಎಂದು ವರ್ಗೀಕರಿಸಿರುವುದು ಕಪೋಲಕಲ್ಪಿತವಾಗಿದೆ. ಕ್ಯಾಂಪ್ಕೋದ ಈ ಪ್ರತಿಪಾದನೆಗೆ ಯೆನೆಪೋಯ ವಿಶ್ವವಿದ್ಯಾಲಯದ ಅಡಕೆ ಕುರಿತ ಅಧ್ಯಯನ ವರದಿ ಪ್ರಬಲವಾದ ಪುರಾವೆಯಾಗಿದೆ. ಈ ರೀತಿಯ ವೈಜ್ಞಾನಿಕ ದೃಢೀಕರಣಗಳಿಂದ ಲಕ್ಷಾಂತರ ಅಡಿಕೆ ಬೆಳೆಗಾರರ ಹಿತಾಸಕ್ತಿ ರಕ್ಷಿಸಲು, ಉತ್ಪನ್ನದ ಕುರಿತಾದ ತಪ್ಪು ಕಲ್ಪನೆಗಳನ್ನು ದೂರವಾಗಿಸಲು ಬಹು ಮುಖ್ಯ ಪಾತ್ರ ವಹಿಸುತ್ತವೆ ಎಂದು ಅವರು ಹೇಳಿದ್ದಾರೆ.
ಅಡಿಕೆ ನಿಷೇಧ ಚರ್ಚೆಗಳಿಂದ ಆತಂಕದಲ್ಲಿದ್ದ ಬೆಳೆಗಾರರಿಗೆ ಗುಡ್ ನ್ಯೂಸ್ : ಅಡಕೆಯಲ್ಲಿದೆ ಕ್ಯಾನ್ಸರ್ ಪ್ರತಿಬಂಧಕ ಗುಣ
WhatsApp Group
Join Now