Karnataka Weather : ರಾಜ್ಯದಲ್ಲಿ ಶೀತಗಾಳಿ –  5 ಕ್ಕೂ ಜಿಲ್ಲೆಗಳಿಗೆ ಹವಾಮಾನ ಇಲಾಖೆ ವಾರ್ನಿಂಗ್.!

Spread the love

ರಾಜ್ಯದಲ್ಲಿ ದಿನೇ ದಿನೇ ಚಳಿ ಹೆಚ್ಚುತ್ತಿದ್ದು, ಕರುನಾಡಿನೆಲ್ಲೆಡೆ ಮುಂದಿನ 3 ದಿನ ಶೀತಗಾಳಿ ಎಚ್ಚರಿಕೆ ನೀಡಲಾಗಿದೆ. ಜನರು ಎಚ್ಚರಿಕೆಯಿಂದ ಇರಬೇಕಾಗಿದೆ.

ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದ 5 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನವೆಂಬರ್ 20 ರವರೆಗೂ ಶೀತ ಗಾಳಿ ಬೀಸಲಿದೆ.

ಪ್ರಮುಖವಾಗಿ ಬೀದರ್‌, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕಲಬುರಗಿ ಜಿಲ್ಲೆಯಾದ್ಯಂತ ನವೆಂಬರ್ 20ರ ವರೆಗೆ 4 ದಿನಗಳ ಕಾಲ ಜಿಲ್ಲೆಯಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 4°C ನಿಂದ 6° C ಕಡಿಮೆ ಇರುವ ಸಾಧ್ಯತೆಯಿದ್ದು, ಇದು ತೀವ್ರ ಶೀತ ಅಲೆಯ ಪರಿಸ್ಥಿತಿಗೆ ಕಾರಣವಾಗಬಹುದು ಎಂದು ಅಂದಾಜಿಸಲಾಗಿದೆ.

ಬೆಳಗ್ಗೆ ವೇಳೆ ದಟ್ಟವಾದ ಮಂಜು ನಂತರ ಶೀತಗಾಳಿ ಬೀಸಲಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರ್ಬೇಕು. ಸಾರ್ವಜನಿಕರು ಅನಗತ್ಯ ಹೊರಗಡೆ ತಿರುಗಾಡಬಾರದು ಮತ್ತು ಪ್ರವಾಸ ಮಿತಗೊಳಿಸಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಂತರ. ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಮೈಸೂರಿನಲ್ಲಿಯೂ ಜಿಟಿಜಿಟಿ ಮಳೆಯಾಗುವ ಸಾಧ್ಯತೆಯಿದೆ.

ಡಿಸೆಂಬರ್ ಮೊದಲ ವಾರ ಚಳಿ ಮತ್ತಷ್ಟು ಹೆಚ್ಚಲಿದ್ದು, ಗಢ ಗಢ ನಡುಗಿಸಲಿದೆ. ಪುಟ್ಟ ಮಕ್ಕಳು, ಬಾಣಂತಿಯರು, ವೃದ್ಧರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

WhatsApp Group Join Now

Spread the love

Leave a Reply