ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಅಧಿಕಾರ ಹಂಚಿಕೆ ಕುರಿತಂತೆ ಕಾಂಗ್ರೆಸ್ ನಾಯಕರಾದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಮಧ್ಯೆ ಗುದ್ದಾಟಗಳು ನಡೆದಿದ್ದು, ಹೈಕಮಾಂಡ್ ಸೂಚನೆ ಮೇರೆ ಎರಡು ಭಾರೀ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ.
ಅಲ್ಲದೇ ಇಂದು ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆ ಸಿ ವೇಣುಗೋಪಾಲ್ ಅವರನ್ನ ಭೇಟಿ ಮಾಡಿದ್ರೆ, ಇತ್ತ ಡಿಸಿಎಂ ಡಿ ಕೆ ಶಿವಕುಮಾರ್ ಅವರು ದೆಹಲಿಗೆ ತೆರಳಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ದೆಹಲಿಗೆ ಭೇಟಿ ಕೊಟ್ಟಿರುವ ಸಂದರ್ಭದಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೀರಾ ಎಂದು ಮಾಧ್ಯಮಗಳ ಪ್ರಶ್ನೆಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಈಗ ನಮ್ಮ ನಾಯಕರು ಸಂಸತ್ ಅಧಿವೇಶನದಲ್ಲಿ ಬ್ಯುಸಿ ಇದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ತೊಂದರೆ ಕೊಡಲು ಬಯಸುವುದಿಲ್ಲ. ಗುರುವಾರ ಬೆಳಗ್ಗೆ ಬೆಂಗಳೂರಿಗೆ ಮರಳುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.
ದೆಹಲಿ ಭೇಟಿಯ ಉದ್ದೇಶದ ಕುರಿತು ಮಾತನಾಡಿ, ಮದುವೆ ಸಮಾರಂಭದಲ್ಲಿ ಭಾಗವಹಿಸುವುದು ಹಾಗೂ ಡಿ.14 ಪ್ರತಿಭಟನಾ ಸಮಾವೇಶಕ್ಕೆ ಕರ್ನಾಟಕ ರಾಜ್ಯದಿಂದ 10 ಸಾವಿರ ಜನರನ್ನು ಕರೆತರಲು ನಿರ್ಧರಿಸಲಾಗಿದೆ. ಇದರ ಪೂರ್ವ ತಯಾರಿ ನೋಡಿಕೊಳ್ಳುವುದು, ಪಕ್ಷದ ಅಧ್ಯಕ್ಷನಾಗಿ ನನ್ನ ಜವಾಬ್ದಾರಿ ಎಂದು ತಿಳಿಸಿದರು.
8 ರಂದು ಸಿಡಬ್ಲ್ಯುಎಂಎ ಸಭೆ ಇದೆ ಎಂದು ಕೇಳಿದಾಗ, “ಈ ಬಗ್ಗೆ ಎಲ್ಲಾ ದಾಖಲೆ ಸಿದ್ಧ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಾವು ನಮ್ಮ ವಿಚಾರ ಪ್ರತಿಪಾದಿಸಬೇಕು. ಇಲ್ಲದಿದ್ದರೆ, ಸಭೆ ಮುಂದೂಡಿಕೊಂಡು ಹೋಗಲಾಗುವುದು. ನಾವು ಅವರ ಮುಂದೆ ಪ್ರೆಸೆಂಟೇಷನ್ ಸಲ್ಲಿಸಬೇಕು. ಇದಕ್ಕೆ 6 ತಿಂಗಳ ಕಾಲಾವಕಾಶ ಇದೆ ಎಂದು ತಿಳಿಸಿದರು.
ಸಿಎಂ ಜೊತೆಗಿನ ಉಪಹಾರ ಸಭೆಯಲ್ಲಿ ಏನು ಚರ್ಚೆ ಆಯಿತು ಎಂಬ ಪ್ರಶ್ನೆಗೆ ಉತ್ತರಿಸಿದ್ದು, ಉಪಹಾರ ಸಭೆಯಲ್ಲಿ ಸಿಎಂ ಜೊತೆ ಸಾಕಷ್ಟು ವಿಚಾರ ಚರ್ಚೆ ಮಾಡಿದ್ದೇನೆ. ಎಲ್ಲರೂ ಒಟ್ಟಾಗಿ ಕರ್ನಾಟಕ ರಾಜ್ಯವನ್ನು ಮುನ್ನಡೆಸುವುದು, ಪಕ್ಷ ಸಂಘಟನೆ ವಿಚಾರವಾಗಿ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದರು.
ಸಿಎಂ ಪಟ್ಟಕ್ಕೆ ಪಟ್ಟು ; ದೆಹಲಿಗೆ ಬಂದ ಕನಕಪುರ ಬಂಡೆ : ರಾಹುಲ್ ಗಾಂಧಿ ಭೇಟಿಯಾಗ್ತಾರಾ ಡಿ ಕೆ ಶಿವಕುಮಾರ್?
WhatsApp Group
Join Now