ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾದ ಬೆನ್ನಲ್ಲೇ, ರಾಜ್ಯದಲ್ಲಿ ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ!

Spread the love

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೊಟ್ಟೆಗಳ ಮಾದರಿ ಸಂಗ್ರಹಕ್ಕೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ.

ಮೊಟ್ಟೆಗಳನ್ನು ಲ್ಯಾಬ್ ನಲ್ಲಿ ಪರೀಕ್ಷಿಸುವಂತೆ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ ಒಂದು ವೇಳೆ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣವಾದ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಹಾಗಾಗಿ ರಾಜ್ಯಾದ್ಯಂತ ಮೊಟ್ಟೆಗಳ ಮಾದರಿ ಸಂಗ್ರಹಕ್ಕೆ ಸೂಚನೆ ನೀಡಿದ್ದಾರೆ.

ಈ ಮೊಟ್ಟೆಯಲ್ಲಿ ನೈಟ್ರೋಫ್ಯೂರನ್ ನಿಷೇಧಿತ ಔಷಧದ ಅಂಶ ಪತ್ತೆಯಾಗಿದೆ. ಇದು ಮನುಷ್ಯರ ದೇಹದ ಜೀವಕೋಶಹಾನಿ ಮಾಡುತ್ತದೆ. ರೋಗ ನಿರೋಧಕ ಶಕ್ತಿ ಕುಂದಿಸುವ ನೈಟ್ರೋಫುರಾನ್ ಅಂಶ ಮೊಟ್ಟೆಯಲ್ಲಿ ಪತ್ತೆಯಾಗಿದೆ. ಕ್ಯಾನ್ಸರ್ ನಂತಹ ಮಾರಣಾಂತಿಕ ಕಾಯಿಲೆಗೆ ಈ ಒಂದು ಅಂಶ ಕಾರಣವಾಗುತ್ತೆ ಎಂದು ಆಹಾರ ತಜ್ಞ ಡಾ. ಕೀರ್ತಿ ಹಿರೀಸಾವೆ ಅವರು ಮಾಹಿತಿ ನೀಡಿದ್ದಾರೆ.

WhatsApp Group Join Now

Spread the love

Leave a Reply