ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಲಾರಿ ಡಿಕ್ಕಿಯಾಗಿ ಡೀಸೆಲ್ ಟ್ಯಾಂಕ್ ಸಿಡಿದು ಬಸ್ ಗೆ ಬೆಂಕಿ ತಗುಲಿ 17 ಪ್ರಯಾಣಿಕರು ಮೃತಪಟ್ಟಿದ್ದಾರೆ.
ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. 32 ಆಸನಗಳ ಬಸ್ ನಲ್ಲಿ 29 ಪ್ರಯಾಣಿಕರು ಇದ್ದರು. ಗೋಕರ್ಣದ 25 ಜನ, ಕುಮಟಾದ ಇಬ್ಬರು ಹಾಗೂ ಶಿವಮೊಗ್ಗದ ಇಬ್ಬರು ಪ್ರಯಾಣಿಸುತ್ತಿದ್ದರು.
ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡಿದ್ದ 9 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಅವರನ್ನು ಶಿರಾ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಡಿವೈಡರ್ ಹಾರಿ ಬಂದು ಬಸ್ ಗೆ ಲಾರಿ ಗುದ್ದಿದೆ. ಬಸ್ ನಲ್ಲಿದ್ದ ಡೀಸೆಲ್ ಟ್ಯಾಂಕರ್ ಸ್ಪೋಟಗೊಂಡು ಬೆಂಕಿ ತಗುಲಿದೆ.
ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದ್ದು, ಸುಮಾರು ಮೂವತ್ತು ಕಿಲೋಮೀಟರ್ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿವೆ. ಮಂದಗತಿಯಲ್ಲಿ ವಾಹನಗಳು ಸಾಗುತ್ತಿವೆ.
ಚಿತ್ರದುರ್ಗದಲ್ಲಿ ಮಧ್ಯರಾತ್ರಿ ಭೀಕರ ದುರಂತ ಸಂಭವಿಸಿದೆ. ಶಿರಾ ಬಳಿಯಿಂದಲೂ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದೆ. ಮುಂಬೈಗೆ ಹೋಗುವ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಬಸ್ ಚಾಲಕ ಮತ್ತು ನಿರ್ವಾಹಕ ಪಾರಾಗಿದ್ದಾರೆ. ಅಪಘಾತ ಎಸಗಿದ ಲಾರಿ ಚಾಲಕ ಉತ್ತರ ಪ್ರದೇಶ ಮೂಲದ ಕುಲದೀಪ್ ಮೃತಪಟ್ಟಿದ್ದಾರೆ. ಆಜಾಗರೂಕತೆಯಿಂದ ಲಾರಿ ಚಲಾಯಿಸಿ ಅಪಘಾತ ಸಂಭವಿಸಿದೆ. ಶಿವಮೊಗ್ಗ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ಬಹುತೇಕರು ಕುಮುಟಾ ಮತ್ತು ಗೋಕರ್ಣ ಮೂಲದವರಾಗಿದ್ದಾರೆ.
ಬಸ್ ಗೆ ಬೆಂಕಿ ತಗುಲಿ 17 ಜನ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ 30 ಕಿ.ಮೀ. ಸಂಪೂರ್ಣ ಟ್ರಾಫಿಕ್ ಜಾಮ್
WhatsApp Group
Join Now