ಬಳ್ಳಾರಿ ಬ್ಯಾನರ್ ಗಲಭೆ : ಎಚ್ ಡಿಕೆ, ಜನಾರ್ಧನ್ ರೆಡ್ಡಿ ವಿರುದ್ಧ ಕಿಡಿಕಾರಿದ ಡಿಸಿಎಂ ಡಿ.ಕೆ ಶಿವಕುಮಾರ್

Spread the love

ಕುಮಾರಸ್ವಾಮಿ ಅವರು ಯಾವಾಗಲೋ ಬರುತ್ತಾರೆ, ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಹೋಗುತ್ತಾರೆ. ಅವರು ಗಂಭೀರ ರಾಜಕಾರಣ ಮಾಡುವವರಲ್ಲ. ಮಾಧ್ಯಮಗಳ ಮುಂದೆ ಮಾತ್ರ ರಾಜಕಾರಣ ಮಾಡುವವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಿರುಗೇಟು ನೀಡಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.ಜನಾರ್ಧನ ರೆಡ್ಡಿ ಅವರು ಅಮೆರಿಕಾದಿಂದ ಬೇಕಾದರೂ ಭದ್ರತೆ ತೆಗೆದುಕೊಳ್ಳಲಿ ಎಂಬ ನಿಮ್ಮ ಹೇಳಿಕೆಗೆ ಗ್ರೇಟ್ ಡಿಸಿಎಂ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದು ಗಮನ ಸೆಳೆದಾಗ, “ನಾವು ಯಾರಿಗೆ ಭದ್ರತೆ ಕೊಡಬೇಕು? ಯಾವ ಕಾರಣಕ್ಕೆ ಭದ್ರತೆ ನೀಡಬೇಕು ಎಂದು ಆಮೇಲೆ ಮಾತನಾಡೋಣ. ಈ ವಿಚಾರವಾಗಿ ಗೃಹ ಸಚಿವರು ಉತ್ತರ ನೀಡುತ್ತಾರೆ. ನಾನು ಯಾರಿಗೂ ಉತ್ತರ ನೀಡುವುದಿಲ್ಲ ಎಂದರು.

ನಾನು ಕೂಡ ಬಳ್ಳಾರಿಗೆ ಹೋಗುತ್ತಿದ್ದೇನೆ. ನಮ್ಮ ಕಾರ್ಯಕರ್ತ ಸತ್ತಿದ್ದಾನೆ. ನಾನು ಪಕ್ಷದ ಸಮಿತಿಯಿಂದ ಮಾಹಿತಿ ಪಡೆದಿದ್ದೇನೆ. ಅಧಿಕೃತವಾಗಿ ವರದಿ ನೀಡಬೇಕಿದೆ. ನಾನು ಕುಮಾರಸ್ವಾಮಿ ಹಾಗೂ ಇತರರ ಹೇಳಿಕೆಗೆ ಉತ್ತರ ನೀಡುವ ಅವಶ್ಯಕತೆ ಇಲ್ಲ. ಅವರು ತಮ್ಮ ಖುಷಿಗೆ ಏನಾದರೂ ಹೇಳಿಕೊಳ್ಳಲಿ. ಕುಮಾರಸ್ವಾಮಿ ಅವರು ಬರುತ್ತಾರೆ, ಮಾತನಾಡುತ್ತಾರೆ, ಹೋಗುತ್ತಾರೆ. ಬಳ್ಳಾರಿಯಲ್ಲಿ ಶಾಂತಿ ನೆಲೆಸಬೇಕು. ಬಳ್ಳಾರಿ ಜನ ಈ ಹಿಂದೆ ಅನುಭವಿಸಿರುವುದೇ ಸಾಕು, ಮುಂದೆ ಯಾವುದೇ ತೊಂದರೆ ಆಗಬಾರದು. ನಮಗೆ ಅಷ್ಟೇ ಸಾಕು. ಈ ಹಿಂದೆ ಆಗಬಾರದ್ದೆಲ್ಲಾ ಆಗಿದೆ. ಮೊನ್ನೆ ನಡೆದ ದುರ್ಘಟನೆ ಆಗಬಾರದಿತ್ತು, ಆದರೆ ಆಗಿಹೋಗಿದೆ. ಇದರಿಂದ ನನಗೆ ದುಃಖವಾಗಿದೆ” ಎಂದರು.

ರೆಡ್ಡಿ ತಮ್ಮ ಇತಿಹಾಸದ ಪುಸ್ತಕ ತೆರೆಯಲಿ

ಕ್ರಿಮಿನಲ್ ಶಾಸಕರಿಗೆ ಡಿಕೆ ಶಿವಕುಮಾರ್ ಬೆಂಬಲ ನೀಡುತ್ತಿದ್ದಾರೆ ಎಂಬ ಜನಾರ್ದನ ರೆಡ್ಡಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನನ್ನ ಮೇಲೂ ಕ್ರಿಮಿನಲ್ ಕೇಸ್ ದಾಖಲಿಸಿ ನನಗೂ ಕ್ರಿಮಿನಲ್ ಪಟ್ಟ ಕೊಟ್ಟಿದ್ದಾರೆ. ಜನಾರ್ದನ ರೆಡ್ಡಿ ಅವರು ತಮ್ಮ ಇತಿಹಾಸದ ಪುಸ್ತಕವನ್ನು ತೆರೆದು ಯಾರ ಮೇಲೆ ಕ್ರಿಮಿನಲ್ ಕೇಸ್ ಇದೆ ಎಂಬುದನ್ನು ನೋಡಿಕೊಳ್ಳಲಿ. ಮಾಜಿ ಸಿಎಂ, ಶಾಸಕರು, ಸಂಸದರ ಮೇಲೆ ಕ್ರಿಮಿನಲ್ ಕೇಸ್ ಗಳಿವೆಯಲ್ಲಾ? ಎಫ್‌ಐಆರ್ ದಾಖಲಿಸಿದ ನಂತರ ನ್ಯಾಯಾಲಯದಲ್ಲಿ ತೀರ್ಪು ಬರುವವರೆಗೂ ಆ ಕ್ರಿಮಿನಲ್ ಅನ್ನು ಆರೋಪಿ ಅಂತಲೇ ಪರಿಗಣಿಸುತ್ತಾರೆ ಅಲ್ಲವೇ?” ಎಂದರು.

WhatsApp Group Join Now

Spread the love

Leave a Reply