ಮೂತ್ರಪಿಂಡಗಳು ನಮ್ಮ ದೇಹದಲ್ಲಿನ ಒಂದು ಪ್ರಮುಖ ಅಂಗವಾಗಿದ್ದು, ಅವು ದೇಹದಲ್ಲಿ ರಕ್ತ ಶುದ್ಧೀಕರಣವನ್ನು ಮಾಡುತ್ತವೆ ಹಾಗೆಯೇ ವಿಷವನ್ನು ತೆಗೆದುಹಾಕುತ್ತವೆ. ಅಂದಹಾಗೇ, ನಿಮ್ಮ ಮೂತ್ರಪಿಂಡಗಳು ಸರಿಯಾಗಿ ಕಾರ್ಯ ನಿರ್ವಹಿಸದಿದ್ದರೆ, ದೇಹವು ಸಮಸ್ಯೆಯನ್ನು ಅನುಭವಿಸಬೇಕಾಗುತ್ತದೆ. ಇದರಿಂದ ನಿಮ್ಮ ಆರೋಗ್ಯದ ಮೇಲೆ ನಕರಾತ್ಮಕ ಪರಿಣಾಮ ಬೀರುತ್ತದೆ.
ಮೂತ್ರಪಿಂಡದ ಸಮಸ್ಯೆಗೆ ಒಳಗಾಗುತ್ತೇವೆ ಎಂದು ಚಿಂತಿಸಬೇಡಿ, ಈ ಸರಳ ಆಹಾರವನ್ನು ಸೇವಿಸುವ ಮೂಲಕ ನಿಮ್ಮ ಮೂತ್ರಪಿಂಡಗಳನ್ನು ಆರೋಗ್ಯವಾಗಿ ಇಟ್ಟುಕೊಳ್ಳಬಹುದು. ಆದಾಗ್ಯೂ, ಈ ಆಹಾರಗಳು ರಾತ್ರೋ ರಾತ್ರಿ ನಿರ್ವಿಷಗೊಳಿಸುವುದಿಲ್ಲ ಎಂಬುದನ್ನು ನೆನಪಿಟ್ಟುಕೊಳ್ಳಿ. ಹಾಗಿದ್ದರೆ ಆ ಆಹಾರಗಳು ಯಾವುದು ಎಂದು ನೋಡೋಣ ಬನ್ನಿ…
1. ಪಾಲಕ್ ಸೊಪ್ಪು
ಪಾಲಕ್ ಸೊಪ್ಪು ನೋಡಿದ ತಕ್ಷಣ ಮುಖ ಕಿವುಚಿಕೊಳ್ಳುವವರು ಕೆಲವರಿದ್ದಾರೆ. ಈ ಸೊಪ್ಪನ್ನು ಸೇವಿಸುವುದರಿಂದ ಅನೇಕ ಪ್ರಯೋಜನಗಳನ್ನು ಪಡೆಯಬಹುದು. ಇದು ಸಾಮಾನ್ಯ ಸೊಪ್ಪಲ್ಲ ಬದಲಿಗೆ ಹೆಚ್ಚು ಪೌಷ್ಟಿಕಾಂಶವನ್ನು ಹೊಂದಿದಂತಹ ಆಹಾರವಾಗಿದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಮೂತ್ರಪಿಂಡಗಳು ತ್ಯಾಜ್ಯವನ್ನು ನಿಧಾನವಾಗಿ ಹೊರಹಾಕಲು ಸಹಾಯ ಮಾಡುತ್ತದೆ. ಇದರ ಸಕ್ಕರೆ ಅಥವಾ ಉಪ್ಪನ್ನು ಸೇರಿಸದೇ ಈ ರಸವನ್ನು ಸೇವಿಸುವುದರಿಂದ ದೇಹಕ್ಕೆ ಉತ್ತಮ ಪ್ರಯೋಜನ ದೊರೆಯುತ್ತವೆ.
2. ಬೆಳ್ಳುಳ್ಳಿ
ಬೆಳ್ಳುಳ್ಳಿ ಮೂತ್ರಪಿಂಡಗಳಿಗೆ ನೇರವಾಗಿ ಪ್ರಯೋಜನವನ್ನು ನೀಡದಿರಬಹುದು, ಆದರೆ ಪರೋಕ್ಷವಾಗಿ ಪ್ರಯೋಜನವನ್ನು ಪಡೆಯಬಹುದು. ಇದನ್ನು ಆಹಾರದಲ್ಲಿ ಸೇರಿಸಿ ಸೇವಿಸುವುದರಿಂದ ಉರಿಯೂತವನ್ನು ಕಡಿಮೆ ಮಾಡಿ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಆದಾಗ್ಯೂ, ಇದರ ನಿಯಮಿತ ಸೇವನೆಯು ಮೂತ್ರಪಿಂಡಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ.
3. ಸೇಬುಗಳು
ದಿನಕ್ಕೊಂದು ಸೇಬು ತಿಂದರೆ ವೈದ್ಯರಿಂದ ದೂರವಿರಬಹುದು ಎಂಬ ನಾಣ್ಣುಡಿಯಂತೆ ಈ ಹಣ್ಣು ಜೀರ್ಣಾಂಗ ವ್ಯವಸ್ಥೆಗೆ ಸಹಾಯ ಮಾಡುತ್ತವೆ. ಪ್ರತಿನಿತ್ಯ ಇದರ ಸೇವನೆಯು ಕರುಳಿನಿಂದ ತ್ಯಾಜ್ಯವನ್ನು ಹೊರಹಾಕುತ್ತದೆ. ಸೇಬುಗಳು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರಿಂದ ಮೂತ್ರಪಿಂಡಗಳಲ್ಲಿನ ಸಣ್ಣ ರಕ್ತನಾಳಗಳನ್ನು ಹಾನಿಯಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಹಾಗಾಗಿ ಸಿಪ್ಪೆ ಜೊತೆಗೆ ಸೇವಿಸುವುದು ಬಹಳ ಪ್ರಯೋಜನಕಾರಿ.
4. ಕೊತ್ತಂಬರಿ
ಅಡುಗೆಯಲ್ಲಿ ಕೊತ್ತುಂಬರಿ ಸೊಪ್ಪನ್ನು ಬೆರೆಸಿ ಸೇವಿಸುವುದು ಮೂತ್ರದ ಉತ್ಪಾದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ದೇಹದಿಮದ ಹೆಚ್ಚುವರಿ ಕೊಬ್ಬನ್ನು ಹೊರ ಹಾಕಿ, ಮೂತ್ರದ ಮೂಲಕ ಹೊರ ಹಾಕುತ್ತದೆ. ರಾತ್ರಿಯಿಡೀ ಬೀಜಗಳನ್ನು ನೆನೆಸಿ ಬೆಳಿಗ್ಗೆ ಕೊತ್ತಂಬರಿ ನೀರನ್ನು ಕುಡಿಯುವುದರಿಂದ ಇದು ದೇಹವನ್ನು ನಿರ್ವಿಷಗೊಳಿಸುತ್ತದೆ.
5. ಹೂಕೋಸು
ಕೆಲವೊಂದು ತರಕಾರಿಗಳಲ್ಲಿ ಪೊಟ್ಯಾಸಿಯಂ ಅಧಿಕವಾಗಿರುತ್ತದೆ. ಅವುಗಳನ್ನು ಸೇವಿಸುವುದರಿಂದ ಇದು ಮೂತ್ರಪಿಂಡದ ಮೇಲೆ ಸಮಸ್ಯೆ ಹೆಚ್ಚಾಗುತ್ತದೆ. ಹಾಗಾಗಿ ಹೂಕೋಸ್ಗಳನ್ನು ಆಹಾರದಲ್ಲಿ ಸೇವಿಸುವ ಅಭ್ಯಾಸವನ್ನು ಮಾಡಿಕೊಳ್ಳುವುದರಿಂದ ಇದು ಮೂತ್ರಪಿಂಡಗಳ ಆರೋಗ್ಯವನ್ನು ಕಾಪಾಡಲು ಸಹಾಯ ಮಾಡುತ್ತದೆ. ಹೂಕೋಸ್ನಲ್ಲಿ ಪೊಟ್ಯಾಸಿಯಮ್, ಫೈಬರ್, ವಿಟಮಿನ್ ಸಿ ಇದ್ದು, ಇದು ಮೂತ್ರಪಿಂಡಗಳಲ್ಲಿನ ವಿಷವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಗಮನಿಸಿ: ಈ ಮಾಹಿತಿಯನ್ನು ಅಂತರ್ಜಾಲದಿಂದ ಸಂಗ್ರಹಿಸಲಾಗಿದೆ ಮತ್ತು ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ಪ್ರಸ್ತುತ ಪಡಿಸಲಾಗಿದೆ. ಇದನ್ನು “ಕನ್ನಡ ನ್ಯೂಸ್ ಟೈಮ್” ದೃಢಪಡಿಸುವುದಿಲ್ಲ. ಯಾವುದೇ ಸಲಹೆಯನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಯಾವಾಗಲೂ ಉತ್ತಮ.
ಕಿಡ್ನಿ ಫೇಲ್ಯೂರ್ ಭಯವೇ? ಈ ನೈಸರ್ಗಿಕ ಆಹಾರಗಳು ನಿಮ್ಮ ಮೂತ್ರಪಿಂಡಗಳಿಗೆ ನೀಡಲಿವೆ ಕಬ್ಬಿಣದಂತಹ ಶಕ್ತಿ!
WhatsApp Group
Join Now