ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯೊಬ್ಬರ ಬಟ್ಟೆ ಬಿಚ್ಚಿಸಿ ಥಳಿಸಿದ್ದಾರೆ ಎಂದು ಹೇಳಲಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಘಟನೆಯ ವಿಡಿಯೋ ವೈರಲ್ ಆಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಧಾರವಾಡ ಜಿಲ್ಲಾ ಪೊಲೀಸ್ ಆಯುಕ್ತರು ಆಕೆಯೇ ತಮ್ಮ ಬಟ್ಟೆ ಹರಿದುಕೊಂಡು ನಗ್ನಳಾಗಿದ್ದಾಳೆ. ನಮ್ಮ ಪೊಲೀಸರು ಈ ಕೃತ್ಯ ಎಸಗಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಕಾರ್ಯಕರ್ತೆಯನ್ನು ಬಂಧಿಸಲು ಮುಂದಾಗಿದ್ದ ವೇಳೆ ಪೊಲೀಸರು ಕ್ರೌರ್ಯ ಮೆರೆದಿದ್ದಾರೆ ಎನ್ನಲಾಗಿದೆ. ಆದರೆ ಪೊಲೀಸರು ನೀಡಿರುವ ಸ್ಪಷ್ಟನೆ ಪ್ರಕಾರ ಆಕೆಯೇ ಬಟ್ಟೆ ಬಿಚ್ಚಿಕೊಂಡಿದ್ದಾಳೆ ಎನ್ನಲಾಗಿದೆ.
ಏನಿದು ಘಟನೆ.?
ಬಿಜೆಪಿ ಕಾರ್ಯಕರ್ತೆ ಸುಜಾತಾ ಅಲಿಯಾಸ್ ವಿಜಯಲಕ್ಷ್ಮಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹಳೇ ವೈಷಮ್ಯಕ್ಕೆ ಇತ್ತೀಚೆಗೆ ಗಲಾಟೆ ಆಗಿತ್ತು. ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಕೇಶ್ವಾಪುರ ಠಾಣಾ ವ್ಯಾಪ್ತಿಯಲ್ಲಿ ಗಲಾಟೆ ಆಗಿತ್ತು. ಬೂತ್ ಅಧಿಕಾರಿಗಳ ಜೊತೆ ತೆರಳಿದ್ದ ಬಿಜೆಪಿ ಕಾರ್ಯಕರ್ತೆ ಸುಜಾತಾ ಗಲಾಟೆ ಮಾಡಿದ್ದರು ಎನ್ನಲಾಗಿದೆ.ಗಲಾಟೆ ವೇಳೆ ಪ್ರತಿದೂರು ದಾಖಲಾಗಿತ್ತು. ಈ ಸಂಬಂಧ ಬಿಜೆಪಿ ಕಾರ್ಯಕರ್ತೆ ವಿರುದ್ಧ 307 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆಕೆಯನ್ನು ಬಂಧಿಸುವ ವೇಳೆ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಈಕೆ ವಿರುದ್ಧ ಬೇರೆ ಬೇರೆ ಆರೋಪಗಳಡಿ 9 ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಧಾರವಾಡ ಜಿಲ್ಲಾ ಪೊಲೀಸ್ ಆಯುಕ್ತರು ಆಕೆ ತಮ್ಮ ಬಟ್ಟೆ ಹರಿದುಕೊಂಡು ನಗ್ನಳಾಗಿದ್ದಾಳೆ. ನಮ್ಮ ಪೊಲೀಸರು ಈ ಕೃತ್ಯ ಎಸಗಿಲ್ಲ ಎಂದು ಹೇಳಿದ್ದಾರೆ.