ಫಲಾನುಭವಿಗಳಿಗೆ ಗುಡ್‌ನ್ಯೂಸ್ ಇದೆಯಾ.? ಗೃಹಲಕ್ಷ್ಮಿ ಹಣದ ಬಗ್ಗೆ ಶಾಕಿಂಗ್‌ ಹೇಳಿಕೆ ಕೊಟ್ಟ ಸಚಿವೆ ಹೆಬ್ಬಾಳ್ಕರ್!‌

Spread the love

ಗೃಹಲಕ್ಷ್ಮಿ ಹಣದ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆಯೊಂದನ್ನು ನೀಡಿದ್ದಾರೆ.

ಇಂದು ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ಈ ಹಿಂದೆ ಗೃಹಲಕ್ಷ್ಮಿ ಹಣ ನೀಡಲಾಗುತ್ತಿತ್ತು.

ಆದರೆ ಇದೀಗ ತೆರಿಗೆ ಕಟ್ಟುವವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗಿದ್ದು, ಅಂತವರ ಗೃಹಲಕ್ಷ್ಮಿ ಹಣ ಸಹ ಸ್ಥಗಿತಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಬಿಪಿಎಲ್ ಕಾರ್ಡುಗಳನ್ನು ಪರಿಶೀಲನೆಗೆ ಒಳಪಡಿಸಿ ಅಕ್ರಮ ಪಡಿತರ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ. ಇದರಿಂದ ಅಕ್ರಮ ಪಡಿತರ ಕಾರ್ಡುಗಳನ್ನು ಕೊಟ್ಟು ಗೃಹಲಕ್ಷ್ಮಿ ಹಣ ಪಡೆಯುತ್ತಿದ್ದವರಿಗೆ ಹಣವನ್ನು ಕೂಡ ಸ್ಥಗಿತಗೊಳಿಸಲಾಗುತ್ತದೆ.

ಫಲಾನುಭವಿಗಳಿಗೆ ಗುಡ್‌ನ್ಯೂಸ್

ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಶೀಘ್ರದಲ್ಲಿಯೇ ಮತ್ತೊಮ್ಮೆ ಸಿಹಿ ಸುದ್ದಿ ಸಿಗಲಿದೆ. 25ನೇ ಕಂತಿನ ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಜನವರಿ 10 ಮತ್ತು 12ರ ಮಧ್ಯದಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗುವ ನಿರೀಕ್ಷೆಯಿದೆ. ಅಂದರೆ ಸಂಕ್ರಾಂತಿ ಹಬ್ಬದ ವೇಳೆಗೆ ಗೃಹಲಕ್ಷ್ಮಿಯ 25 ನೇ ಕಂತು ಜಮಾ ಆಗುವ ಸಾಧ್ಯತೆಯಿದೆ.

ಸಿದ್ದರಾಮಯ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಲಕ್ಷಾಂತರ ಗೃಹಿಣಿಯರು ಎದುರು ನೋಡುತ್ತಿದ್ದಾರೆ. ಹಲವಾರು ಮಂದಿ ಗೃಹಿಣಿಯರು ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಫ್ರಿಡ್ಜ್ ಟಿವಿ ಹಾಗೂ ಅಂಗಡಿಗಳನ್ನು ಹಾಕಿಕೊಳ್ಳುವ ಮೂಲಕ ಬದುಕು ಕಟ್ಟಿಕೊಂಡಿದ್ದಾರೆ.

ಸಚಿವ ಕೆ.ಹೆಚ್‌ ಮುನಿಯಪ್ಪ ಹೇಳಿದ್ದೇನು..?

ರಾಜ್ಯದಲ್ಲಿ ಸುಮಾರು 1.28 ಕೋಟಿ ಬಿಪಿಎಲ್ ಕಾರ್ಡ್ ಗಳು ಇದೆ. ಈ ಕಾರ್ಡ್‌ಗಳಲ್ಲಿ ಸುಮಾರು 4.50 ಕೋಟಿ ಜನರು ಫಲಾನುಭವಿಗಳಿದ್ದಾರೆ. ಸದ್ಯ ನಾವು ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆ ಮಾಡುತ್ತಿದ್ದೇವೆ. ಯಾರೆಲ್ಲಾ ಬಿಪಿಎಲ್ ಕಾರ್ಡ್ ಪಡೆಯಲು ಅನರ್ಹರಿದ್ದಾರೋ ಅವರನ್ನ ಬಿಪಿಎಲ್‌ನಿಂದ ಎಪಿಎಲ್‌ಗೆ ಹಾಕುತ್ತೇವೆ ಎಷ್ಟೇ ಎಂದು ಸಚಿವ ಕೆ.ಹೆಚ್‌ ಮುನಿಯಪ್ಪ ಈ ಹಿಂದೆ ಹೇಳಿದ್ದರು.

ಕಾರ್ಡ್ ರದ್ದು ಮಾಡಲ್ಲ

ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದು ಮಾಡುವುದಿಲ್ಲ. ಸರ್ಕಾರ ಯಾವುದೇ ಕಾರಣಕ್ಕೂ ಸರ್ಕಾರದ ಮಾನದಂಡ ಬಿಟ್ಟು ಪರಿಷ್ಕರಣೆ ಮಾಡಲ್ಲ. ಯಾರೆಲ್ಲಾ ಬಿಪಿಎಲ್ ಕಾರ್ಡ್ ಪಡೆಯಲು ಅನರ್ಹ ಇದ್ದಾರೋ, ಅವರೇ ಹೊರಗೆ ಬನ್ನಿ. ಹೊಸ ಬಿಪಿಎಲ್ ಕಾರ್ಡ್ ಅವಶ್ಯಕತೆ ಇರುವವರಿಗೆ ಅವಕಾಶ ಮಾಡಿಕೊಡಿ. ಅನ್ನ ಭಾಗ್ಯ ರಾಜ್ಯದ ಕಟ್ಟ ಕಡೆಯ ವ್ಯಕ್ತಿಗೆ ತಲುಪಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದೆ. ಮನೆ ಕಟ್ಟುವ ಜನರಿಗೆ ಬಿಪಿಎಲ್ ಕಾರ್ಡ್ ಅವಶ್ಯಕತೆ ಇರುವುದಿಲ್ಲ. ಯಾರಿಗೆ ಅವಶ್ಯಕತೆ ಇರುವುದಿಲ್ಲವೋ ಅವರನ್ನ ಎಪಿಎಲ್‌ಗೆ ಸೇರಿಸಲಾಗುತ್ತದೆ ಎಂದು ತಿಳಿಸಿದ್ದರು.

WhatsApp Group Join Now

Spread the love

Leave a Reply