ಹಾಲಾಯ್ತು ಹಾಲಾಹಾಲ – ರಾಸಾಯನಿಕ ಬಳಸಿ ನಕಲಿ ಹಾಲು ತಯಾರಿಕೆ ಮಾಡ್ತಿದ್ದ ಖದೀಮರು ಅರೆಸ್ಟ್‌!

Spread the love

ರಾಸಾಯನಿಕ ವಸ್ತುಗಳನ್ನು ಬಳಸಿ ನಕಲಿ ಹಾಲು (Milk) ತಯಾರು ಮಾಡುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು (KGF Police) ದಾಳಿ ನಡೆಸಿ, ಐವರನ್ನು ಬಂಧಿಸಿರುವ ಘಟನೆ ಕೋಲಾರ (Kolara) ಜಿಲ್ಲೆಯಲ್ಲಿ ನಡೆದಿದೆ.

WhatsApp Group Join Now

ಕೆಜಿಎಫ್ ತಾಲೂಕಿನ ಬಳ್ಳಗೆರೆ ಗ್ರಾಮದ ಬಳಿ ಶೆಡ್‌ ಒಂದರಲ್ಲಿ ಅಕ್ರಮವಾಗಿ ಕಲಬೆರಕೆ ಹಾಲು ತಯಾರಿಸಲಾಗುತ್ತಿತ್ತು.

ಕೆಜಿಎಫ್‌ ಪೊಲೀಸರು ನಕಲಿ ಹಾಲನ್ನು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ದಾಳಿ ಮಾಡಿ ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಂಧ್ರಪ್ರದೇಶ ಮೂಲದ ದಿಲೀಪ್, ಬಾಲರಾಜ್, ವೆಂಕಟೇಶಪ್ಪ, ಬಾಲಾಜಿ ಮತ್ತು ಮನೋಹರ್ ಎಂದು ಗುರುತಿಸಲಾಗಿದೆ.

ಪೊಲೀಸರು ಬಂಧಿತರಿಂದ ಸುಮಾರು 22 ಲಕ್ಷ ರೂ. ಮೌಲ್ಯದ ಉಪಕರಣ ಹಾಗೂ ಕಲಬೆರೆಗೆ ಬಳಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಸ್ಥಳದಿಂದ ಪಾಮ್‌ ಆಯಿಲ್, ಮಿಲ್ಕ್ ಪೌಡರ್, ಅಂಗನವಾಡಿ ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರ ಪುಷ್ಟಿ ಪೌಡರ್, ಲಡ್ಡು, ಹಾಲಿನ ಕ್ಯಾನ್‍ಗಳು, ಎರಡು ಲಗೇಜ್ ಆಟೋಗಳನ್ನು ವಶಕ್ಕೆ ಪಡೆದಿದ್ದಾರೆ.

ಆಂಡರ್ಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪತ್ತೆಯಾದ ವಸ್ತುಗಳನ್ನು ಆಹಾರ ಸುರಕ್ಷತಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

WhatsApp Group Join Now

Spread the love

Leave a Reply