ಇತ್ತೀಚಿಗೆ ಅಷ್ಟೇ ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್ಗೆ ಯುವಕನೊಬ್ಬ ಬಲಿಯಾಗಿದ್ದ ಅದರ ಬೆನ್ನಲ್ಲೇ ಇದೀಗ ಹಾಸನದಲ್ಲಿ ಅವೈಜ್ಞಾನಿಕ ಹಂಪಿಗೆ ವಿದ್ಯಾರ್ಥಿನಿ ಒಬ್ಬಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಹೌದು ಚಲಾಯಸುತ್ತಿದ್ದ ಬೈಕ್ನಿಂದ ಬಿದ್ದು ಯುವತಿಯೋರ್ವಳು ಸಾವನ್ನಪ್ಪಿರು ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ. ಇದೇ ಬೈಕ್ನಲ್ಲಿದ್ದ ಇನ್ನೊಬ್ಬಳು ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ.
ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ ಯುವತಿ. ಗಾಯಾಳು ಸ್ವಾತಿಯನ್ನು (24) ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ರಸ್ತೆಯಲ್ಲಿದ್ದ ಹಂಪ್ ಕಾಣದ ಹಿನ್ನೆಲೆ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ತಿಳಿದು ಬಂದಿದೆ.
ಯುವತಿಯರಿಬ್ಬರು ಹೆಲ್ಮೆಟ್ ಧರಿಸದ ಕಾರಣ ತಲೆ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಪ್ರಿಯಾ ಮತ್ತು ಸ್ವಾತಿ ಹೆಲ್ಮೆಟ್ ಧರಿಸದೆ ಬುಲೆಟ್ ರೈಡ್ ಮಾಡುತ್ತಿದ್ದರು. ಯುವತಿಯರಿಬ್ಬರು ಎಂಸಿಎ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದರು.
WhatsApp Group
Join Now