ತುಮಕೂರು ತಾಲ್ಲೂಕಿನ ಹೆಬ್ಬೂರು ಹೋಬಳಿಯ ದಾಸರಹಳ್ಳಿಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಪತಿ ಮೃತಪಟ್ಟ ಕೆಲವೇ ದಿನಗಳಲ್ಲಿ ಪತ್ನಿ ಮತ್ತೊಂದು ಮದುವೆಯಾಗಿರುವ ಹಿನ್ನೆಲೆ ಮೃತನ ಸಾವಿನ ಕುರಿತು ಸಂಶಯ ವ್ಯಕ್ತವಾಗಿದ್ದು, ವ್ಯಕ್ತಿ ಸತ್ತ 23 ದಿನಗಳ ಬಳಿಕ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಮೃತನ ಸಹೋದರಿಯಿಂದ ಪೊಲೀಸ್ ಠಾಣೆಗೆ ದೂರು!
ದಾಸರಹಳ್ಳಿ ನಿವಾಸಿ ಪರಮೇಶ್ (50) ಜನವರಿ 31ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ಅದೇ ದಿನ ಅಂತ್ಯಕ್ರಿಯೆ ನಡೆಸಿ ಮಣ್ಣಿನಲ್ಲಿ ಸಮಾಧಿ ಮಾಡಲಾಗಿತ್ತು. ಆದರೆ ಪರಮೇಶ್ ಮೃತಪಟ್ಟ ಕೆಲವೇ ದಿನಗಳಲ್ಲಿ, ಅಂದರೆ ಫೆಬ್ರುವರಿ 19ರಂದು ಅವರ ಪತ್ನಿ ಮತ್ತೊಂದು ಮದುವೆಯಾಗಿರುವುದು ಸಂಬಂಧಿಕರಲ್ಲಿ ಅನುಮಾನಕ್ಕೆ ಕಾರಣವಾಗಿದೆ.
ಈ ಬಗ್ಗೆ ಮೃತನ ಸಹೋದರಿ ಹೆಬ್ಬೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ತಮ್ಮ ಸಹೋದರನ ಸಾವು ಸಹಜವಲ್ಲ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಪರಮೇಶ್ ಮೃತಪಟ್ಟ ಸಂದರ್ಭದಲ್ಲಿ ಅವರ ಮೂಗಿನ ಪಕ್ಕದಲ್ಲಿ ಗಾಯದ ಗುರುತು ಇದ್ದದ್ದು ಹಾಗೂ ಗುಪ್ತಾಂಗ ಊದಿಕೊಂಡಿದ್ದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿರುವ ಅವರು ಅಣ್ಣನ ಸಾವು ಸಹಜವಲ್ಲವೆಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಅಂಶಗಳು ಸಾವಿನ ಕುರಿತು ಇನ್ನಷ್ಟು ಅನುಮಾನಕ್ಕೆ ಕಾರಣವಾಗಿವೆ ಎಂದು ತಿಳಿಸಿದ್ದಾರೆ.
ಮಕ್ಕಳ ಆರೋಗ್ಯ ಸಮಸ್ಯೆ ಹಿನ್ನೆಲೆ ಮತ್ತೊಮ್ಮೆ ಮದುವೆ
ಈ ಹಿಂದೆಯೂ ಗಂಡನನ್ನು ಕಳೆದುಕೊಂಡಿದ್ದ ಮಹಿಳೆ, ನಂತರ ಪರಮೇಶ್ವರನನ್ನು ಮದುವೆ ಆಗಿದ್ದಳು. ದಂಪತಿಗೆ ಇಬ್ಬರು ಮಕ್ಕಳಿದ್ದು, ಹುಟ್ಟಿನಿಂದಲೂ ಆರೋಗ್ಯ ಸಮಸ್ಯೆ ಇರುವ ಮಕ್ಕಳನ್ನು ಒಬ್ಬಳೇ ನೋಡಿಕೊಳ್ಳಲು ಕಷ್ಟ ಎಂದು ಮತ್ತೆ ಮದುವೆಯಾಗಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾಳೆ.
ಒಂದು ವಾರದ ಬಳಿಕ ಬಯಲಾಗುತ್ತೆ ರಹಸ್ಯ
ದೂರು ಹಿನ್ನೆಲೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಹಸೀಲ್ದಾರ್ ರಾಜೇಶ್ವರಿ ಸಮ್ಮುಖದಲ್ಲಿ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅನುಮಾನಾಸ್ಪದ ಸಾವು ಪ್ರಕರಣವಾಗಿರುವುದರಿಂದ ವೈದ್ಯರು ಸಂಪೂರ್ಣ ಪರಿಶೀಲನೆ ನಡೆಸಲಿದ್ದು, ಮರಣೋತ್ತರ ಪರೀಕ್ಷೆಯ ವರದಿ ಒಂದು ವಾರದೊಳಗೆ ಲಭ್ಯವಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. ವರದಿ ಆಧಾರವಾಗಿ ಪರಮೇಶ್ ಅವರ ಸಾವಿನ ನಿಜವಾದ ಕಾರಣ ಬಹಿರಂಗವಾಗಲಿದೆ.
ಪತಿಯ ಸಾವಿನ ದುಃಖ ಮಾಸುವ ಮುನ್ನವೇ ಮತ್ತೆ ಹಸೆಮಣೆಯೇರಿದ ಪತ್ನಿ; ಪತಿಯ ಸಾವಿಗೆ ಪತ್ನಿಯೇ ಕಾರಣಾನಾ.?
WhatsApp Group
Join Now