ಇದರಲ್ಲಿ ರಾಜಕಾರಣ ಏನಿದೆ? ಜನ ಇವತ್ತು ಒದ್ದಾಡ್ತಿದ್ದಾರೆ. ಸಾಮಾನ್ಯ ಜನರ ಸಮಸ್ಯೆ ಬಗ್ಗೆ ಮಾತನಾಡುವುದು ನಮ್ಮ ಕರ್ತವ್ಯ. ಆದರೆ ಬಿಜೆಪಿಯವರು ಯಾಕೆ ಮಾತನಾಡುತ್ತಿಲ್ಲ?” ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಈ ಕುರಿತು ಬಿಜೆಪಿ ನಾಯಕರು ಹೇಳಿದ್ದೇನು ಗೊತ್ತಾ? ಈ ಕುರಿತು ಕಂಪ್ಲೀಟ್ ಸ್ಟೋರಿ ಇಲ್ಲಿದೆ.
ಅನಗತ್ಯ ಭಯ ಹುಟ್ಟಿಸಿದ್ದೇ ಕೇಂದ್ರ; ಖರ್ಗೆ!
ಮಾರ್ಚ್ 10 ರಂದು ಕೇಂದ್ರ ಸರ್ಕಾರದಿಂದ ಹೊರಡಿಸಿದ ನೋಟಿಸ್ ಜನರಲ್ಲಿ ಆತಂಕಕ್ಕೆ ಕಾರಣವಾಯಿತು ಎಂದು ಅವರು ಆರೋಪಿಸಿದ್ದಾರೆ. ಕೇಂದ್ರದ ಸುತ್ತೋಲೆ ಹೊರಬಂದ ಬಳಿಕ ಜನರು ಗ್ಯಾಸ್ ಸಿಲಿಂಡರ್ ಲಭ್ಯತೆಯ ಬಗ್ಗೆ ಚಿಂತೆಪಡಲು ಆರಂಭಿಸಿದ್ದಾರೆ. ಇದು ಜನಸಾಮಾನ್ಯರಲ್ಲಿ ಅನಗತ್ಯ ಗೊಂದಲ ಮತ್ತು ಭಯ ಹುಟ್ಟಿಸಿದೆ ಎಂದು ಖರ್ಗೆ ಅಭಿಪ್ರಾಯಪಟ್ಟರು.
ಸಂಕಷ್ಟಕ್ಕೆ ಯಾರು ಕಾರಣ!
ಇದರಲ್ಲಿ ರಾಜಕಾರಣ ಏನಿದೆ? ಜನ ಇವತ್ತು ಒದ್ದಾಡ್ತಿದ್ದಾರೆ. ಸಾಮಾನ್ಯ ಜನರ ಸಮಸ್ಯೆ ಬಗ್ಗೆ ಮಾತನಾಡುವುದು ನಮ್ಮ ಕರ್ತವ್ಯ. ಆದರೆ ಬಿಜೆಪಿಯವರು ಯಾಕೆ ಮಾತನಾಡುತ್ತಿಲ್ಲ?” ಎಂದು ಖರ್ಗೆ ಪ್ರಶ್ನಿಸಿದರು. ಜನಸಾಮಾನ್ಯರ ಸಂಕಷ್ಟಕ್ಕೆ ಯಾರು ಕಾರಣ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದರು.
ಖರ್ಗೆ ಆರೋಪಕ್ಕೆ ತೀವ್ರ ಆಕ್ರೋಶ!
ಈ ಸಂದರ್ಭದಲ್ಲಿ ಬಿಜೆಪಿಯ ಶಾಸಕರು ಖರ್ಗೆ ಅವರ ಆರೋಪಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಸೇರಿ ಹಲವು ಶಾಸಕರು ಸಚಿವರ ಹೇಳಿಕೆಗಳಿಗೆ ತಿರುಗೇಟು ನೀಡಿದರು. ಈ ವೇಳೆ ಸದನದಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು. ಬಿಜೆಪಿ ಶಾಸಕರು ಪ್ರಿಯಾಂಕ್ ಖರ್ಗೆ ಅವರನ್ನು ಪ್ರಶ್ನಿಸಿ, “ಕಲ್ಬುರ್ಗಿಯಲ್ಲಿ ನೀವು ಸಚಿವರಾಗಿದ್ದಾಗ ಯಾವ ರೀತಿಯ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೀರಿ?” ಎಂದು ತರಾಟೆಗೆ ತೆಗೆದುಕೊಂಡರು. ಈ ಪ್ರಶ್ನೆಗೆ ಪ್ರತಿಯಾಗಿ ಖರ್ಗೆಯವರು ಮತ್ತೆ ಕೇಂದ್ರ ಸರ್ಕಾರದ ಕ್ರಮಗಳನ್ನೇ ಟೀಕಿಸಿದರು.
ಬಿಜೆಪಿ ಶಾಸಕರಿಂದ ಖಂಡನೆ!
ಇದೇ ವೇಳೆ ಬಿಜೆಪಿ ಶಾಸಕ ರವಿವ ಸುಬ್ರಹ್ಮಣ್ಯ ಸೇರಿದಂತೆ ಹಲವು ಸದಸ್ಯರು ಸಚಿವರ ಹೇಳಿಕೆಗಳನ್ನು ಖಂಡಿಸಿದರು. ಗ್ಯಾಸ್ ಕೊರತೆ ವಿಚಾರವನ್ನು ರಾಜಕೀಯವಾಗಿ ಬಳಸಲಾಗುತ್ತಿದೆ ಎಂದು ಅವರು ಆರೋಪಿಸಿದರು. ಸರ್ಕಾರ ಹಾಗೂ ಪ್ರತಿಪಕ್ಷ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು. ಸದನದಲ್ಲಿ ಪರಿಸ್ಥಿತಿ ಕೆಲಕಾಲ ತೀವ್ರವಾಗಿದ್ದು, ಸದಸ್ಯರು ಪರಸ್ಪರ ಆರೋಪ–ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದರು. ಗ್ಯಾಸ್ ಸಿಲಿಂಡರ್ ಕೊರತೆ ವಿಷಯಕ್ಕೆ ಸಂಬಂಧಿಸಿದಂತೆ ಆಡಳಿತ ಪಕ್ಷ ಕೇಂದ್ರ ಸರ್ಕಾರದ ಮೇಲೆ ಹೊಣೆ ಹಾಕುತ್ತಿದ್ದರೆ, ಬಿಜೆಪಿ ಸದಸ್ಯರು ರಾಜ್ಯ ಸರ್ಕಾರವೇ ಜನರಲ್ಲಿ ಆತಂಕ ಹುಟ್ಟಿಸುತ್ತಿದೆ ಎಂದು ಆರೋಪಿಸಿದರು.
ವಾಗ್ವಾದ ಕಾರಣ ಗದ್ದಲದ ವಾತಾವರಣ ಸೃಷ್ಟಿ!
ಒಟ್ಟಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ವಿಚಾರ ವಿಧಾನಸಭೆಯಲ್ಲಿ ದೊಡ್ಡ ಚರ್ಚೆಗೆ ಕಾರಣವಾಯಿತು. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ನಡುವೆ ನಡೆದ ತೀವ್ರ ವಾಗ್ವಾದದಿಂದ ಸದನದಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು.
ಗ್ಯಾಸ್ ಬಿಕ್ಕಟ್ಟಿಗೆ ಯಾರು ಕಾರಣ.? ಅನಗತ್ಯ ಭಯ ಹುಟ್ಟಿಸಿದ್ದೇ ಕೇಂದ್ರ ಎಂದ ಖರ್ಗೆ! ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಬಿಜೆಪಿ ಶಾಸಕರು ಹೇಳಿದ್ದೀಷ್ಟೆ!
WhatsApp Group
Join Now