ಕಾಂಗ್ರೆಸ್ ಭಾರತ ವಿರೋಧಿಗಳ ಕೈಗೊಂಬೆಯಂತೆ ಕೆಲಸ ಮಾಡುತ್ತಿದೆ, ಜನರಲ್ಲಿ ಯುದ್ಧದ ಸಂದರ್ಭದಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಇಂದು ವಾಗ್ದಾಳಿ ನಡೆಸಿದ್ದಾರೆ.
ಅಸ್ಸಾಂನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ಭಾರತದ ಅಭಿವೃದ್ಧಿಯನ್ನು ಕಾಂಗ್ರೆಸ್ ಸಹಿಸುತ್ತಿಲ್ಲ. ದೇಶವಿರೋಧಿಗಳ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದಿದ್ದಾರೆ.
ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಸನ್ನಿವೇಶವಿರುವಾಗ ಭಾರತದಲ್ಲಿ ಕಾಂಗ್ರೆಸ್ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ನಮ್ಮ ಸರ್ಕಾರ ವಿದೇಶಗಳಲ್ಲಿರುವ ಭಾರತೀಯರನ್ನು ರಕ್ಷಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುವಾಗ ಕಾಂಗ್ರೆಸ್ ದೇಶದ ಹಿತಾಸಕ್ತಿಯಿಂದ ಜವಾಬ್ಧಾರಿಯುತವಾಗಿ ನಡೆದುಕೊಳ್ಳಲು ವಿಫಲವಾಗಿದೆ ಎಂದಿದ್ದಾರೆ.
ಯುದ್ಧದಿಂದಾಗಿ ವಿಶ್ವದ ಬಹುತೇಕ ರಾಷ್ಟ್ರಗಳು ಸಂಕಷ್ಟ ಅನುಭವಿಸುತ್ತಿದೆ. ನಮ್ಮ ದೇಶ ಇಂತಹ ತುರ್ತು ಸಂದರ್ಭದಲ್ಲಿ ನಮ್ಮ ನಾಗರಿಕರ ಹಿತಾಸಕ್ತಿ ಕಾಪಾಡಲು ಎಲ್ಲಾ ಪ್ರಯತ್ನ ಮಾಡುತ್ತಿದೆ. ಕಾಂಗ್ರೆಸ್ ಜವಾಬ್ಧಾರಿಯುತ ವಿಪಕ್ಷವಾಗಿ ಸರ್ಕಾರದ ಜೊತೆಗಿರುವ ಬದಲು ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಜಾಗತಿಕವಾಗಿ ಕೆಲವೊಂದು ಸಂಘಟನೆಗಳು ನಮ್ಮ ದೇಶದ ಅಭಿವೃದ್ಧಿ ಸಹಿಸುತ್ತಿಲ್ಲ. ಅಂತಹವರ ಕೈಗೊಂಬೆಯಂತೆ ಕಾಂಗ್ರೆಸ್ ಕೆಲಸ ಮಾಡುತ್ತಿದೆ ಎಂದಿದ್ದಾರೆ.
ಕಾಂಗ್ರೆಸ್ ಭಾರತ ವಿರೋಧಿಗಳ ಕೈಗೊಂಬೆ, ಜನರಲ್ಲಿ ಭಯ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ
WhatsApp Group
Join Now