Labour Card Scholarship : ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಸ್ಕಾಲರ್ಶಿಪ್!‌ ಈ ದಾಖಲೆಗಳು ಕಡ್ಡಾಯ – ಡೈರೆಕ್ಟ್ ಲಿಂಕ್

Labour card scholarship : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಉತ್ತಮ ಶಿಕ್ಷಣಕ್ಕಾಗಿ ಶೈಕ್ಷಣಿಕ ಸಹಾಯಧನವನ್ನು ನೀಡುತ್ತಿದ್ದು, ಇದೀಗ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ವಿದ್ಯಾರ್ಥಿವೇತನ ಧನ ಸಹಾಯ ಪಡೆಯಲು ಅರ್ಹರಿರುವ ಹಾಗೂ ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

ಇದನ್ನೂ ಕೂಡ ಓದಿ : Scholarship : ಶಾಲಾ ವಿಧ್ಯಾರ್ಥಿಗಳಿಗೆ ದೊರೆಯಲಿದೆ 10 ಸಾವಿರ ಪ್ರೋತ್ಸಾಹ ಧನ! ಇಲ್ಲಿದೆ ಅರ್ಜಿ ಹಾಕುವ ವಿವರ

WhatsApp Group Join Now

ವಿದ್ಯಾರ್ಥಿವೇತನಕ್ಕೆ ಹೇಗೆ ಅರ್ಜಿ ಸಲ್ಲಿಸುವುದು.?

ರಾಜ್ಯ ಸರ್ಕಾರವು ಅಸಂಘಟಿತ ವಲಯದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ಕಲಿಕಾ ಭಾಗ್ಯ ಧನ ಸಹಾಯ ವನ್ನು ಪ್ರತಿ ವರ್ಷ ನೀಡಲಾಗುತ್ತಿದೆ. ಅರ್ಹ ಫಲಾನುಭವಿಗಳು ಶೈಕ್ಷಣಿಕ ಸಹಾಯಧನವನ್ನ ಪಡೆದುಕೊಳ್ಳಬಹುದು. ಇದರಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗದೆ ವಿದ್ಯಾಭ್ಯಾಸವನ್ನು ಮುಂದುವರೆಸಲು ನೆರವಾಗುತ್ತದೆ. ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದಾಗಿದೆ.

ಕಲಿಕಾ ಭಾಗ್ಯ(Kalika bhagya) ಯೋಜನೆಗೆ ಅರ್ಜಿ ಸಲ್ಲಿಸಲು ಎಲ್ಲಾ ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ(SSP) ಮೂಲಕ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಒಂದು ವೇಳೆ 2023-24 ನೇ ಸಾಲಿಗಾಗಿ ಈಗಾಗಲೇ ಎಸ್ಎಸ್ ಪಿ(SSP) ತಂತ್ರಾಂಶದಲ್ಲಿ ಅರ್ಜಿಯನ್ನು ಸಲ್ಲಿಸಿರುವ ಫಲಾನುಭವಿ ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

WhatsApp Group Join Now

ಇದನ್ನೂ ಕೂಡ ಓದಿ : PM Yashasvi Scholarship 2024 : ವಿದ್ಯಾರ್ಥಿಗಳು ₹1,25,000/- ವರೆಗೆ ಹಣ ಪಡೆಯಲು ಪಿಎಂ ಯಶಸ್ವಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! ಹೇಗೆ ಅರ್ಜಿ ಸಲ್ಲಿಸುವುದು.?

ವಿದ್ಯಾರ್ಥಿವೇತನಕ್ಕೆ ಏನೆಲ್ಲಾ ದಾಖಲೆಗಳು ಬೇಕಾಗುತ್ತವೆ.?

  • ಕಾರ್ಮಿಕ ಇಲಾಖೆ ಮಂಡಳಿಯಿಂದ ನೀಡಲಾದ ನೋಂದಣಿ ಕಾರ್ಡ್
  • ನೋಂದಣಿದಾರರು ಮತ್ತು ಅವರ ತಂದೆ ಅಥವಾ ತಾಯಿಯ ಆಧಾರ್ ಕಾರ್ಡ್
  • ಪ್ರತಿ ವಿದ್ಯಾರ್ಥಿಯ ಆಧಾ‌ರ್ ಕಾರ್ಡ್‌ ಸಂಖ್ಯೆ
  • ನೋಂದಣಿದಾರರ ಬ್ಯಾಂಕ್‌ ಖಾತೆಯ ವಿವರ
  • ಸ್ಪೂಡೆಂಟ್ ಐಡಿ
  • ವ್ಯಾಸಂಗ ಪ್ರಮಾಣ ಪತ್ರ
  • ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ

ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್‌ಗಳು :- ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

WhatsApp Group Join Now

Leave a Reply