BIG BREAKING: ನಾಳೆ ಮಧ್ಯಾಹ್ನ 12 ಗಂಟೆಗೆ SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ ಘೋಷಣೆ

Spread the love

ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವುದಾಗಿ ಸಚಿವ ಮಧು ಬಂಗಾರಪ್ಪ ಅವರು ಘೋಷಣೆ ಮಾಡಿದ್ದಾರೆ. ಆ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಎನ್ನುವ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

ಫಲಿತಾಂಶ ವೀಕ್ಷಿಸುವುದು ಹೇಗೆ? (ಹಂತ-ಹಂತದ ಮಾಹಿತಿ)

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ಕೆಳಗಿನ ಸರಳ ಹಂತಗಳ ಮೂಲಕ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು:

ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ:karresults.nic.in ಅಥವಾ kseab.karnataka.gov.in

ಲಿಂಕ್ ಆಯ್ಕೆ ಮಾಡಿ: ಮುಖಪುಟದಲ್ಲಿ ಕಾಣುವ ‘SSLC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಮಾಹಿತಿ ನಮೂದಿಸಿ: ನಿಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು (DOB) ಸರಿಯಾಗಿ ನಮೂದಿಸಿ.

ಸಲ್ಲಿಸಿ: ‘Submit’ ಬಟನ್ ಒತ್ತಿರಿ.

ಅಂಕಪಟ್ಟಿ ಪಡೆಯಿರಿ: ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಮೂಡುತ್ತದೆ. ಮುಂದಿನ ದಾಖಲೆಗಾಗಿ ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು: ವೆಬ್‌ಸೈಟ್ ಮಾತ್ರವಲ್ಲದೆ, ವಿದ್ಯಾರ್ಥಿಗಳು DigiLocker ಮತ್ತು KarnatakaOne ಅಪ್ಲಿಕೇಶನ್ ಮೂಲಕವೂ ಫಲಿತಾಂಶವನ್ನು ಪಡೆಯಬಹುದಾಗಿದೆ.

ಕೋರ್ಟ್ ಆದೇಶದಿಂದ ಫಲಿತಾಂಶ ವಿಳಂಬವಾಗಬಹುದು ಎಂಬ ಆತಂಕ ಪೋಷಕರಲ್ಲಿತ್ತು. ಆದರೆ ಇದಕ್ಕೆ ತೆರೆ ಎಳೆದಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, “ನಾಳೆ ಮಧ್ಯಾಹ್ನ 12 ಗಂಟಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಣೆಯಾಗಲಿದೆ. ಯಾವುದೇ ತಾಂತ್ರಿಕ ಅಡ್ಡಿಯಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಕೋರ್ಟ್ ಆದೇಶವನ್ನು ನಾವು ಗೌರವಿಸುತ್ತೇವೆ. ಈ ವರ್ಷದಿಂದಲೇ ಅಂಕ ನೀಡುವ ಪದ್ಧತಿ ಜಾರಿಯಾಗಿದ್ದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿತ್ತು. ಈ ಕುರಿತು ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿಲಾಗಿದೆ. ಅವರ ಸೂಚನೆಯ ಮೇರೆಗೆ ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್ ಎಸ್ ಎಲ್ ಪರೀಕ್ಷೆ 1ರ ಫಲಿತಾಂಶ ಪ್ರಕಟಿಸುವುದಾಗಿ ” ಎಂದು ಸಚಿವರು ತಿಳಿಸಿದ್ದಾರೆ.

ಪರೀಕ್ಷಾ ಮಂಡಳಿಯು ಫಲಿತಾಂಶ ಪ್ರಕಟಿಸಲು ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ವಿದ್ಯಾರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ, ಅಧಿಕೃತ ವೆಬ್‌ಸೈಟ್ ಗಮನಿಸುತ್ತಿರಲು ಸೂಚಿಸಲಾಗಿದೆ. ಎಲ್ಲರಿಗೂ ಶುಭವಾಗಲಿ!

WhatsApp Group Join Now

Spread the love

Leave a Reply