ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರೆದಿದೆ. ಬಿಜೆಪಿ ಸಿಎಂ ಅಭ್ಯರ್ಥಿ ಸುವೆಂದು ಅಧಿಕಾರಿ ಪಿಎ ಚಂದ್ರನಾಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಬೆನ್ನಲ್ಲೇ ಹಲವೆಡೆ ಹಿಂಸಾಚಾರ ತೀವ್ರಗೊಳ್ಳುತ್ತಿದೆ.
ಬಿಜೆಪಿ ಶಾಸಕಿ ರತ್ನ ದೇಬನಾಥ್ ಅವರ ನಿವಾಸದ ಬಳಿ ಬಾಂಬ್ ಸ್ಫೋಟಗೊಂಡಿದೆ.
ಘಟನೆಯಲ್ಲಿ ಐವರು ಬಿಜೆಪಿ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಪಾನಿಹಾಟಿ ಕ್ಷೇತ್ರದ ಬಿಜೆಪಿ ನೂತನ ಶಾಸಕಿಯಾಗಿರುವ ರತ್ನ ದೇಬನಾಥ್ ಅವರ ಮನೆ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಬೀಡು ಬಿಟ್ಟಿದ್ದಾರೆ. ಶಾಸಕಿ ನಿವಾಸ ಹಾಗೂ ಸುತ್ತಮುತ್ತ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ.
WhatsApp Group
Join Now