ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೋನ್ (Kidney Stone) ಸಮಸ್ಯೆ ಅನೇಕರಲ್ಲಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ನೀರನ್ನು ಕಡಿಮೆ ಪ್ರಮಾಣದಲ್ಲಿ ಕುಡಿಯುವುದು ಮತ್ತು ಅಸ್ವಸ್ಥ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಆರಂಭದಲ್ಲಿ ಸಾಮಾನ್ಯ ಸಮಸ್ಯೆಯಂತೆ ಕಾಣಿಸಿದರೂ, ಸಮಯ ಕಳೆದಂತೆ ಇದು ತೀವ್ರ ನೋವು ಮತ್ತು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ವೈದ್ಯರ ಪ್ರಕಾರ, ದೇಹದಲ್ಲಿ ಕೆಲವು ಖನಿಜಗಳು ಅಧಿಕ ಪ್ರಮಾಣದಲ್ಲಿ ಸೇರುವುದರಿಂದ ಕಿಡ್ನಿಯಲ್ಲಿ ಕಲ್ಲು ರೂಪುಗೊಳ್ಳುತ್ತದೆ. ದಿನನಿತ್ಯ ಸೇವಿಸುವ ಕೆಲವು ಆಹಾರಗಳು ಈ ಅಪಾಯವನ್ನು ಹೆಚ್ಚಿಸಬಹುದು. ಹೀಗಾಗಿ ಆಹಾರ ಪದ್ಧತಿಯ ಬಗ್ಗೆ ಜಾಗ್ರತೆ ವಹಿಸುವುದು ಬಹಳ ಮುಖ್ಯವಾಗಿದೆ. ಹಾಗಾದರೆ ಯಾವ ಆಹಾರಗಳು ಕಿಡ್ನಿ ಸ್ಟೋನ್ ಅಪಾಯ ಹೆಚ್ಚಿಸುತ್ತದೆ, ಕಿಡ್ನಿ ಆರೋಗ್ಯ ಕಾಪಾಡಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.
ಕಿಡ್ನಿ ಸ್ಟೋನ್ ಅಪಾಯ ಹೆಚ್ಚಿಸುವ ಆಹಾರಗಳು:
ಲೇಡಿ ಹಾರ್ಡಿಂಗ್ ಆಸ್ಪತ್ರೆಯ ಮೆಡಿಸಿನ್ ವಿಭಾಗದ ನಿರ್ದೇಶಕ ಡಾ. ಎಲ್.ಎಚ್. ಘೋಟೇಕರ್ ಹೇಳುವ ಪ್ರಕಾರ, ಹೆಚ್ಚು ಉಪ್ಪು ಇರುವ ಆಹಾರ, ಪ್ರೊಸೆಸ್ಡ್ ಫುಡ್ ಮತ್ತು ಅಧಿಕ ಸಕ್ಕರೆ ಇರುವ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಕಿಡ್ನಿ ಸ್ಟೋನ್ ಅಪಾಯ ಹೆಚ್ಚಾಗುತ್ತದೆ. ಇದರ ಜೊತೆಗೆ ಕೆಲವು ಆಹಾರಗಳಲ್ಲಿ ಆಕ್ಸಲೇಟ್ ಪ್ರಮಾಣ ಹೆಚ್ಚಿರುತ್ತದೆ. ಈ ಅಂಶ ದೇಹದಲ್ಲಿ ಜಮೆಯಾಗುತ್ತಾ ಕಲ್ಲು ರೂಪುಗೊಳ್ಳಲು ಕಾರಣವಾಗಬಹುದು. ಜಂಕ್ ಫುಡ್, ಪ್ಯಾಕೇಜ್ಡ್ ಸ್ನ್ಯಾಕ್ಸ್, ಕೋಲ್ಡ್ ಡ್ರಿಂಕ್ಸ್ ಮತ್ತು ಸಾಫ್ಟ್ ಡ್ರಿಂಕ್ಸ್ಗಳ ಅಧಿಕ ಸೇವನೆಯೂ ಕಿಡ್ನಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಜೊತೆಗೆ ಕಡಿಮೆ ನೀರು ಕುಡಿಯುವ ಅಭ್ಯಾಸವೂ ಕಿಡ್ನಿ ಸ್ಟೋನ್ ಸಮಸ್ಯೆಯನ್ನು ಹೆಚ್ಚಿಸುತ್ತದೆ. ದೇಹದಲ್ಲಿ ನೀರಿನ ಕೊರತೆ ಉಂಟಾದರೆ ಖನಿಜಗಳು ಮೂತ್ರದ ಮೂಲಕ ಹೊರಹೋಗದೆ ಕಲ್ಲಾಗಿ ರೂಪುಗೊಳ್ಳುವ ಸಾಧ್ಯತೆ ಹೆಚ್ಚಾಗುತ್ತದೆ.
ಕಿಡ್ನಿ ಆರೋಗ್ಯ ಕಾಪಾಡಿಕೊಳ್ಳಲು ಏನು ಮಾಡಬೇಕು?
ಸಾಮಾನ್ಯವಾಗಿ ಕಿಡ್ನಿಯನ್ನು ಆರೋಗ್ಯವಾಗಿಡಲು ದಿನಪೂರ್ತಿ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯುವುದು ಅತ್ಯಂತ ಮುಖ್ಯ. ಜೊತೆಗೆ ತಾಜಾ ಹಣ್ಣು, ಹಸಿರು ತರಕಾರಿಗಳು ಸೇವಿಸುವುದು ಉತ್ತಮ. ನಿಂಬೆ ರಸ, ಎಳನೀರು ಹಾಗೂ ಫೈಬರ್ಯುಕ್ತ ಆಹಾರ ದೇಹವನ್ನು ಹೈಡ್ರೇಟ್ ಆಗಿಡಲು ಸಹಾಯಕವಾಗುತ್ತದೆ.
ಈ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬೇಡಿ:
ಹೊಟ್ಟೆ ಅಥವಾ ಬೆನ್ನಿನ ಭಾಗದಲ್ಲಿ ತೀವ್ರ ನೋವು, ಮೂತ್ರವಿಸರ್ಜನೆ ವೇಳೆ ಉರಿ, ಪದೇಪದೇ ಮೂತ್ರ ಬರುವುದು ಅಥವಾ ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಸ್ಟೋನ್ನ ಪ್ರಮುಖ ಲಕ್ಷಣಗಳಾಗಿರಬಹುದು. ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ.
ಅಪ್ಪಿತಪ್ಪಿಯೂ ಈ ಆಹಾರಗಳ ಸೇವನೆ ಮಾಡಬೇಡಿ ಇದು ಕಿಡ್ನಿ ಸ್ಟೋನ್ ಆಗಲು ಕಾರಣವಾಗುತ್ತೆ ಎಚ್ಚರ!
WhatsApp Group
Join Now