ಬೆಳಗಾವಿ : ಸಂಭ್ರಮಿಸಬೇಕಾದ ಜನ್ಮದಿನದಂದೇ ಯುವತಿಯೊಬ್ಬಳು ಸಾವಿಗೆ ಶರಣಾದ ಹೃದಯವಿದ್ರಾವಕ ಘಟನೆ ಬೆಳಗಾವಿಯ ಅಜಂ ನಗರದಲ್ಲಿ ನಡೆದಿದೆ. ಪೊಲೀಸ್ ಕಾನ್ಸ್ಟೇಬಲ್ ಜೊತೆ ನಿಶ್ಚಿತಾರ್ಥವಾಗಿದ್ದ ಯುವತಿ, ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನೆಯ ವಿವರ:
ಟಾಬಳ್ಳಿ ಗ್ರಾಮದ ಕಾವೇರಿ ಉಮೇಶ್ ನಾಯಕ (21) ಎಂದು ಗುರುತಿಸಲಾಗಿದೆ. ಈಕೆ ಬೆಳಗಾವಿಯ ಅಜಂ ನಗರದಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಉಳಿದುಕೊಂಡು, ಬಿಎಸ್ಸಿ ಅಂತಿಮ ವರ್ಷದ ವ್ಯಾಸಾಂಗ ಮಾಡುತ್ತಿದ್ದಳು.
ನಡೆದಿದ್ದೇನು?
ಮೂರು ತಿಂಗಳ ಹಿಂದಷ್ಟೇ ಕಾವೇರಿಗೆ ಪೊಲೀಸ್ ಪೇದೆಯೊಬ್ಬರ ಜೊತೆ ಮದುವೆ ನಿಶ್ಚಯವಾಗಿತ್ತು.
ಜನ್ಮದಿನದಂದೇ ಸಾವು:
ವಿಶೇಷವೆಂದರೆ, ಇಂದು ಕಾವೇರಿಯ ಹುಟ್ಟುಹಬ್ಬವಾಗಿತ್ತು. ಮನೆಯವರು ಹಾಗೂ ಸ್ನೇಹಿತರು ಶುಭಾಶಯ ಕೋರುವ ಮೊದಲೇ ಈಕೆ ಸಾವಿನ ಹಾದಿ ಹಿಡಿದಿದ್ದಾಳೆ.
ಕಾರಣ ನಿಗೂಢ : ಯುವತಿಯ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಹಾಸ್ಟೆಲ್ ಕೊಠಡಿಯಲ್ಲಿ ಈಕೆ ನೇಣಿಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮದುವೆ ನಿಶ್ಚಯವಾಗಿದ್ದ ಹೊತ್ತಿನಲ್ಲೇ ಯುವತಿ ಇಂತಹ ನಿರ್ಧಾರ ಕೈಗೊಂಡಿರುವುದು ಕುಟುಂಬಸ್ಥರಲ್ಲಿ ಮತ್ತು ಗ್ರಾಮದಲ್ಲಿ ಶೋಕದ ಛಾಯೆ ಮೂಡಿಸಿದೆ.
ಹುಟ್ಟುಹಬ್ಬದ ದಿನವೇ ದುರಂತ ಅಂತ್ಯ : ಹಾಸ್ಟೆಲ್ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ..
WhatsApp Group
Join Now