ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ. ಜಾಮೀನು ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಜಾಮೀನು ನಿರಾಕರಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸದಲ್ಲಿರುವ ನಟ ದರ್ಶನ್ ಸೆಷನ್ಸ್ ಕೋರ್ಟ್‌ನಲ್ಲಿ ಪ್ರಕರಣದ ವಿಚಾರಣೆ ತೀವ್ರ ವಿಳಂಬ ಆಗುತ್ತಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಹೀಗಾಗಿ ದರ್ಶನ್ ಸಲ್ಲಿಕೆ ಮಾಡಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ವಾದ – ವಿವಾದಗಳನ್ನು ಆಲಿಸಿ ಮಹತ್ವದ ತೀರ್ಪು ನೀಡಿದೆ.
“ಒಂದು ವರ್ಷ ಸಮಯಾವಕಾಶ ನೀಡುತ್ತೇವೆ. ಆ ನಿಗದಿತ ಸಮಯದ ಒಳಗೆ ವಿಚಾರಣೆ ಪೂರ್ಣಗೊಳಿಸದಿದ್ದರೆ ಆಗ ಜಾಮೀನಿಗೆ ಅವರು ಅರ್ಜಿ ಸಲ್ಲಿಸಿ, ಅದನ್ನ ಪರಿಶೀಲನೆ ಮಾಡೋಣ,” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆ ಮೂಲಕ ಸದ್ಯಕ್ಕೆ ನಟ ದರ್ಶನ್ ಅವರಿಗೆ ನ್ಯಾಯಮೂರ್ತಿ ಪರ್ದೀವಾಲಾ ಅವರಿದ್ದ ಪೀಠ ಜಾಮೀನು ನಿರಾಕರಿಸಿ ಮಹತ್ವದ ತೀರ್ಪು ನೀಡಿದ್ದಾರೆ. ಅಂದರೆ 2027ರ ಮೇ 15ರ ವರೆಗೂ ದರ್ಶನ್ ಇನ್ನೂ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರಬೇಕಾಗುತ್ತದೆ.
ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್
WhatsApp Group
Join Now