ಶ್ರೀಮಂತ ಯುವಕರ ಬಲೆಗೆ ಬೀಳಿಸ್ತಿದ್ದ ಯುವತಿ, ಹಲ್ಲೆ ಮಾಡಿ ದೋಚುತ್ತಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್

Spread the love

ದಾವಣಗೆರೆ (Davanagere) ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕ್ರಿಮಿನಲ್ ಪ್ರಕರಣಗಳು ವರದಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ದಾವಣಗೆರೆಯಲ್ಲಿ ಶ್ರೀಮಂತ ಯುವಕರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ನಡೆಸಿ ಹಣ, ಒಡವೆ ಸುಲಿಗೆ ಮಾಡುತ್ತಿದ್ದ ಐದು ಮಂದಿ ಕಿಲಾಡಿಗಳನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.

ಮತ್ತೊಂದೆಡೆ, ಹಣ ಹಾಗೂ ಕೌಟುಂಬಿಕ ದ್ವೇಷದ ಹಿನ್ನೆಲೆ ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಮುಖ್ಯಾಂಶಗಳು :-

• ಹನಿಟ್ರ್ಯಾಪ್ ಗ್ಯಾಂಗ್‌ನ ಐವರನ್ನು ಬಂಧಿಸಿದ ಪೊಲೀಸರು.
• ₹10.20 ಲಕ್ಷ ಮೌಲ್ಯದ ಚಿನ್ನ ಹಾಗೂ ಕೃತ್ಯಕ್ಕೆ ಬಳಸಿದ್ದಇನ್ನೋವಾ ಕಾರು ವಶಕ್ಕೆ
• ಶ್ರೀಮಂತ ಯುವಕನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ದರೋಡೆ ಮಾಡಿದ್ದ ಗ್ಯಾಂಗ್.

ಹನಿಟ್ರ್ಯಾಪ್ ಪ್ರಕರಣದ ವಿವರ

ಪಂಚಮಿ (34), ಜಗದೀಶ (35), ಗಂಗಾ ಮಲ್ಲೇಶ್ ನಾಯ್ಕ (25) ಹಾಗೂ ವೆಂಕಟೇಶ್ (30) ಎಂಬವರೇ ಹನಿಟ್ರ್ಯಾಪ್ ಕೇಸ್ನಲ್ಲಿ ಬಂಧಿತರಾದವರು. ಈ ಕಿಲಾಡಿ ಗ್ಯಾಂಗ್ ಮೊದಲು ಶ್ರೀಮಂತ ಹಿನ್ನೆಲೆಯುಳ್ಳ ಯುವಕರನ್ನು ಟಾರ್ಗೆಟ್ ಮಾಡುತ್ತಿತ್ತು. ಗ್ಯಾಂಗ್‌ನ ಸದಸ್ಯೆ ಪಂಚಮಿ (34) ಎಂಬಾಕೆ ಶ್ರೀಮಂತ ಯುವಕನೊಬ್ಬನೊಂದಿಗೆ ಸ್ನೇಹ ಬೆಳೆಸಿ, ಹರಿಹರ ತಾಲೂಕಿನ ಶಿವನಹಳ್ಳಿ ರಸ್ತೆಯ ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡಿದ್ದಾಳೆ. ಈ ವೇಳೆ ಹೊಂಚು ಹಾಕಿ ಕುಳಿತಿದ್ದ ಜಗದೀಶ, ಗಂಗಾ ಮಲ್ಲೇಶ್ ನಾಯ್ಕ, ವೆಂಕಟೇಶ್ ಹಾಗೂ ಮತ್ತೊಬ್ಬ ಆರೋಪಿ ಧಾವಿಸಿ ಬಂದು ಯುವಕನ ಮೇಲೆ ಹಲ್ಲೆ ನಡೆಸಿ, ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಇಡೀ ಗ್ಯಾಂಗ್ ಅನ್ನು ಜೈಲಿಗಟ್ಟಿದ್ದಾರೆ. ಈ ತಂಡ ಇನ್ನೂ ಹಲವು ಯುವಕರಿಗೆ ವಂಚಿಸಿರುವ ಶಂಕೆ ಇದ್ದು, ತನಿಖೆ ಚುರುಕುಗೊಂಡಿದೆ.

WhatsApp Group Join Now

Spread the love

Leave a Reply