ತಾಯಿ ಬೈದಿದ್ದಕ್ಕೆ ಮನನೊಂದ ಇಬ್ಬರು ಅಪ್ರಾಪ್ತ ಸಹೋದರಿಯರು ಭಾವುಕ ಪತ್ರ ಬರೆದಿಟ್ಟು ಮನೆಯಿಂದ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ.
ಗ್ರಾಮದ ರಾಮಚಂದ್ರ ಅವರ ಪುತ್ರಿಯರಾದ ಸುಜಾತಾ (16) ಮತ್ತು ರುಕ್ಮಿಣಿ (14) ಮನೆ ಬಿಟ್ಟು ಹೋಗಿರುವ ಬಾಲಕಿಯರು.
ಮನೆಯಲ್ಲಿನ ಯಾವುದೋ ವಿಚಾರಕ್ಕೆ ತಾಯಿ ಬೈದಿದ್ದರಿಂದ ಮನನೊಂದ ಅವರು, ಮನೆಯಿಂದ ಹೊರಟು ಹೋಗಿದ್ದಾರೆ.
ಮನೆಯಿಂದ ತೆರಳುವ ಮುನ್ನ ಬರೆದಿಟ್ಟಿರುವ ಪತ್ರದಲ್ಲಿ, ‘ಅಮ್ಮ-ಅಪ್ಪ ಸಾರಿ… ನಿಮ್ಮ ಕಣ್ಣು ಮುಂದೆ ಸಾಯೋಕೆ ಆಗಲ್ಲ. ನಾವು ದೂರ ಹೋಗಿ ಸತ್ತಿದ್ದೇವೆ’ ಎಂದು ಉಲ್ಲೇಖಿಸಿರುವುದು ಪೋಷಕರು ಮತ್ತು ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ.
ಪತ್ರ ಓದಿದ ತಕ್ಷಣ ಆತಂಕಗೊಂಡ ಪೋಷಕರು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಾಲಕಿಯರ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.
ಮಕ್ಕಳು ಯಾವುದಾದರೂ ಆತುರದ ನಿರ್ಧಾರ ಕೈಗೊಂಡಿರಬಹುದೇ ಎಂಬ ಭಯದಿಂದ ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದು, ಗ್ರಾಮದಲ್ಲೂ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಅಮ್ಮ-ಅಪ್ಪ ಸಾರಿ. ನಾವು ದೂರ ಹೋಗಿ ಸತ್ತಿದ್ದೇವೆ’; ತಾಯಿ ಬೈದಿದ್ದಕ್ಕೆ ಮನೆಬಿಟ್ಟು ನಾಪತ್ತೆಯಾದ ಅಪ್ರಾಪ್ತ ಸಹೋದರಿಯರು
WhatsApp Group
Join Now