ನಿಜವಾಯ್ತು ಕೋಡಿಶ್ರೀ ಭವಿಷ್ಯ, ಸಿದ್ದರಾಮಯ್ಯ ಬಗ್ಗೆ ಸ್ವಾಮೀಜಿ ಹೇಳಿದ್ದೇನು.?

Spread the love

ಹೈಕಮಾಂಡ್ ಆದೇಶಕ್ಕೆ ಗೌರವ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಕರ್ನಾಟಕ ರಾಜಕೀಯದಲ್ಲಿ ಹೊಸ ಆಯಾಮ ಸೃಷ್ಟಿಸಿದೆ. ನಾಯಕರ ಸೂಚನೆಯನ್ನು ಶಿರಸಾವಹಿಸಿ ಪಾಲಿಸಿರುವ ಸಿದ್ದರಾಮಯ್ಯ, ದೆಹಲಿಯಲ್ಲಿ ಎಐಸಿಸಿ ಮುಖಂಡರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದ್ದಾರೆ.

ಈ ಪ್ರಮುಖ ರಾಜಕೀಯ ಸ್ಥಿತ್ಯಂತರದ ಬೆನ್ನಲ್ಲೇ, ಕೋಡಿಮಠದ ಶ್ರೀಗಳು ರಾಜ್ಯದ (Kodi Mutt Shree) ಸಿಎಂ ಕುರ್ಚಿ ಬದಲಾವಣೆ ಕುರಿತು ಈ ಹಿಂದೆ ನುಡಿದಿದ್ದ ಭವಿಷ್ಯ ಈಗ ಅಕ್ಷರಶಃ ನಿಜವಾಗಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಕೇಳಿಬರುತ್ತಿವೆ.

ಹಾಲು ಕೆಟ್ಟರೂ ಹಾಲುಮತ ಕೆಡುವುದಿಲ್ಲ ಎಂದಿದ್ದ ಕೋಡಿಮಠದ ಶ್ರೀ

WhatsApp Group Join Now

ಕೆಲ ದಿನಗಳ ಹಿಂದಷ್ಟೇ ಭವಿಷ್ಯ ನುಡಿದಿದ್ದ ಕೋಡಿಮಠದ ಸ್ವಾಮೀಜಿ, ಜಾಗತಿಕ ವಿದ್ಯಮಾನಗಳು ಹಾಗೂ ಪ್ರಾಕೃತಿಕ ವಿಕೋಪಗಳ ಜೊತೆಗೆ ರಾಜ್ಯ ರಾಜಕಾರಣದ ದಿಕ್ಕಿನ ಬಗ್ಗೆಯೂ ಮುನ್ಸೂಚನೆ ನೀಡಿದ್ದರು. ವಿಶೇಷವಾಗಿ ಸಿದ್ದರಾಮಯ್ಯ ಅವರ ನಾಯಕತ್ವ ಹಾಗೂ ಮುಂದಿನ ದಿನಗಳ ಬಗ್ಗೆ ಪ್ರಸ್ತಾಪಿಸಿದ್ದ ಅವರು, “ಹಾಲು ಕೆಟ್ಟರೂ ಹಾಲುಮತ ಕೆಡುವುದಿಲ್ಲ” ಎಂದು ಹೇಳಿದ್ದ ನುಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡಿದ್ದವು. ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಶ್ರೀಗಳ ಅಂದಿನ ವಾಕ್ಯಗಳಿಗೆ ತಕ್ಕಂತೆಯೇ ಸಾಬೀತಾಗುತ್ತಿವೆ.

ಬಲವಂತವಾಗಿ ಅಲುಗಾಡಿಸಲು ಆಗಲ್ಲ ಎಂದಿದ್ದ ಶ್ರೀ

ಅಂದು ಮುಖ್ಯಮಂತ್ರಿಗಳ ಅಧಿಕಾರಾವಧಿ ಕುರಿತು ಮಾತನಾಡಿದ್ದ ಶ್ರೀಗಳು, ಸಿದ್ದರಾಮಯ್ಯ ಅವರನ್ನು ಬಲವಂತವಾಗಿ ಅಧಿಕಾರದಿಂದ ಮುಕ್ತಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದರು. “ವಿರೋಧ ಪಕ್ಷಗಳಾಗಲಿ ಅಥವಾ ಸ್ವತಃ ಹೈಕಮಾಂಡ್ ಆಗಲಿ ಅವರನ್ನು ಒತ್ತಾಯಪೂರ್ವಕವಾಗಿ ಕುರ್ಚಿಯಿಂದ ಕೆಳಗಿಳಿಸಲು ಸಾಧ್ಯವಿಲ್ಲ. ಒಂದು ವೇಳೆ ಸಿದ್ದರಾಮಯ್ಯ ಅವರು ತಾವಾಗಿಯೇ ಮನಸ್ಸು ಮಾಡಿ ಸ್ಥಾನ ಬಿಟ್ಟುಕೊಟ್ಟರೆ ಮಾತ್ರ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸಾಧ್ಯ” ಎಂದು ಹೇಳಿದ್ದರು. ಅಂದರೆ ಈ ಬದಲಾವಣೆಯ ಹಿಂದೆ ಸಿದ್ದರಾಮಯ್ಯ ಅವರ ಸ್ವಯಂ ನಿರ್ಧಾರವೇ ಪ್ರಮುಖವಾಗಿರುತ್ತದೆ ಎಂದು ಶ್ರೀಗಳು ಅಂದೇ ಸೂಚಿಸಿದ್ದರು.

ಕೋಡಿಶ್ರೀಗಳು ಅಂದು ನುಡಿದಿದ್ದ ಭವಿಷ್ಯದಂತೆಯೇ ಇಂದು ಸಿದ್ದರಾಮಯ್ಯ ಅವರು ಯಾವುದೇ ಒತ್ತಡಕ್ಕೆ ಮಣಿಯದೆ, ಹೈಕಮಾಂಡ್ ಮೇಲಿನ ನಿಷ್ಠೆಯಿಂದಾಗಿ ತಾವಾಗಿಯೇ ಸ್ವಪ್ರೇರಣೆಯಿಂದ ಮುಖ್ಯಮಂತ್ರಿ ಸ್ಥಾನವನ್ನು ತ್ಯಾಗ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಈ ಗೌರವಯುತ ನಿರ್ಗಮನದೊಂದಿಗೆ ಕೋಡಿಮಠದ ಶ್ರೀಗಳ ಮಾತುಗಳು ಸತ್ಯವಾದಂತಾಗಿದ್ದು, ರಾಜಕೀಯ ವಲಯ ಹಾಗೂ ಸಾರ್ವಜನಿಕರಲ್ಲಿ ಶ್ರೀಗಳ ವಾಕ್ಸಿದ್ದಿಯ ಕುರಿತು ತೀವ್ರ ಕುತೂಹಲ ಮತ್ತು ಚರ್ಚೆಗಳು ಮುನ್ನೆಲೆಗೆ ಬಂದಿವೆ.

WhatsApp Group Join Now

Spread the love

Leave a Reply