ಗೃಹ ಸಚಿವರಾದ ಬಳಿಕ ಪ್ರಿಯಾಂಕ್ ಖರ್ಗೆ ಅವರು ಇಂದು (ಜೂನ್ 05) ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಿದರು. ಈ ವೇಳೆ ಬೆಂಗಳೂರು ಟ್ರಾಫಿಕ್ ಸಮಸ್ಯೆ, ಮಹಿಳೆಯರ ಸುರಕ್ಷತೆ ಹಾಗೂ ಡ್ರಗ್ಸ್ ಮಾಫಿಯಾ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಜೊತೆಗೆ ಕಾನೂನು ಸುವ್ಯವಸ್ಥೆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಇನ್ನು ಸಭೆ ಬಳಿಕ ಮಾತನಾಡಿದ ಖರ್ಗೆ, ಕಾನೂನು ಎಲ್ಲರಿಗೂ ಒಂದೆ.
ಯಾರೇ ಇದ್ರೂ ಕಾನೂನಿನ ಚೌಕಟ್ಟಿನಲ್ಲಿದ್ರೆ ಓಕೆ. ಅದನ್ನ ಮೀರಿ ಮಾಡಿದ್ರೆ ಕ್ರಮ ಕೈಗೊಳ್ಳುವುದು ಖಚಿತ ಎಂದು ಖಡಕ್ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರದಲ್ಲಿ ನನಗೊಂದು ದೊಡ್ಡ ಜವಾಬ್ದಾರಿ ವಹಿಸಿದ್ದಾರೆ. ಗೃಹ ಇಲಾಖೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತಿದ್ದೇನೆ. ಪರಮೇಶ್ವರ್ ಸಾಹೇಬರ ಕಾರ್ಯಕ್ರಮಗಳ ಬಗ್ಗೆ ಯಾವುದನ್ನು ಮುಂದುವರಿಸಬೇಕೆಂದು ಮಾಹಿತಿ ಪಡೆದಿದ್ದೇನೆ. ಬೆಂಗಳೂರು ಟ್ರಾಫಿಕ್ ಸಮಸ್ಯೆ, ಮಹಿಳೆಯರ ಸುರಕ್ಷತೆ ಮತ್ತು ಡ್ರಗ್ಸ್ ಮಾಫಿಯಾ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದು, ಜೊತೆಗೆ ಸಭೆಯಲ್ಲಿ ಕೆಲ ಸಲಹೆ ಸೂಚನೆಗಳನ್ನ ನೀಡಿದ್ದೇನೆ. ಕಾನೂನು ಎಲ್ಲರಿಗೂ ಒಂದೇ, ಕಾನೂನು ಮೀರಿದರೆ ಕ್ರಮ ಎಂದು ಹೇಳಿದರು.
ದ್ವೇಷ ಹುಟ್ಟಿಸುವ ಭಾಷಣ ಮಾಡಿದ್ರೆ ಕ್ರಮ
ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ಧಿ ವಿಚಾರದ ಬಗ್ಗೆ ಮಾತನಾಡಿ, ಐಟಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯಿಂದ ಚರ್ಚೆ ನಡೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ದ್ವೇಷ ಹುಟ್ಟಿಸುವ ಹಾಗೆ ಭಾಷಣ ಮಾಡಿದ್ರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ. ಸೋಷಿಯಲ್ ಮೀಡಿಯಾ ಬಗ್ಗೆ ಗಮನವಹಿಸಲಾಗುತ್ತಿದೆ. ಕಾನೂನಾತ್ಮಕವಾಗಿ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಆಗುತ್ತೆ ಎಂದು ಸ್ಪಷ್ಟಪಡಿಸಿದರು.
ರೌಡಿ ಪಡೆ ರಚನೆ ಮಾಡುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ನೀಡಿರುವ ಬಗ್ಗೆ ಈಗಲೇ ಹೇಳುವುದಕ್ಕೆ ಆಗಲ್ಲ. ಈ ಯೋಜನೆ ಬಗ್ಗೆ ಬ್ಲೂ ಪ್ರಿಂಟ್ ರೆಡಿ ಮಾಡಬೇಕು. ಮುಂದಿನ ದಿನದಲ್ಲಿ ಈ ಬಗ್ಗೆ ಹೇಳುತ್ತೇವೆ ಎಂದು ಹೇಳಿದ ಖರ್ಗೆ,ವಿವಿಐಪಿ ಸಂಚಾರದ ವೇಳೆ ಜನರಿಗೆ ಸಮಸ್ಯೆ ಬಗ್ಗೆ ಇವತ್ತು ಚರ್ಚೆ ಮಾಡಿದ್ದೇವೆ. ಬೇರೆ ಏನಾದ್ರು ಮಾಡಬಹುದಾ ಗಮನವಹಿಸಲು ಹೇಳಿದ್ದೇನೆ. ಅದಕ್ಕೆ ಸ್ವಲ್ಪ ಸಮಯ ಹಿಡಿಯುತ್ತೆ ಎಂದು ತಿಳಿಸಿದರು.
ಕಾನೂನು ಎಲ್ಲರಿಗೂ ಒಂದೇ, ಮೀರಿದರೆ ಕ್ರಮ: ಸಭೆ ಬಳಿಕೆ ಎಚ್ಚರಿಕೆ ಕೊಟ್ಟ ಗೃಹ ಸಚಿವ ಖರ್ಗೆ
WhatsApp Group
Join Now