ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಜಾತಿ ನಿಂದನೆ ಹಾಗೂ ಅವಹೇಳನಕಾರಿ ಹೇಳಿಕೆ, ಆರೋಪಿ ಬಂಧನ

Spread the love

ಉಡುಪಿ : ಗೃಹ ಸಚಿವ (Home minister) ಪ್ರಿಯಾಂಕ್ ಖರ್ಗೆ (Priyank kharge) ವಿರುದ್ಧ ಸಾರ್ವಜನಿಕ ವೇದಿಕೆಯಲ್ಲಿ ಜಾತಿ ನಿಂದನೆ ಹಾಗೂ ಅವಹೇಳನಕಾರಿ ಮಾತುಗಳನ್ನಾಡಿದ ಆರೋಪದ ಮೇರೆಗೆ ರಾಜಕೀಯ ಮುಖಂಡರೊಬ್ಬರನ್ನು ಪೊಲೀಸರು (Police) ಯಶಸ್ವಿಯಾಗಿ ಬಂಧಿಸಿದ್ದಾರೆ.

ಪ್ರತಿಭಟನಾ ಸಭೆಯೊಂದರಲ್ಲಿ ಪಾಲ್ಗೊಂಡಿದ್ದ ಈ ನಾಯಕರು, ಸರ್ಕಾರದ ವೈಫಲ್ಯಗಳನ್ನು ಟೀಕಿಸುವ ಭರದಲ್ಲಿ ಗೃಹ ಸಚಿವರನ್ನು ವೈಯಕ್ತಿಕವಾಗಿ ಗುರಿಮಾಡಿ ಕೀಳುಮಟ್ಟದ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ. ಈ ಭಾಷಣದ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಗೃಹ ಸಚಿವರ ಘನತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ಬಳಸಲಾದ ಈ ಮಾತುಗಳ ವಿರುದ್ಧ ಆಡಳಿತ ಪಕ್ಷದ ಕಾರ್ಯಕರ್ತರು ಹಾಗೂ ಪ್ರಮುಖರು ತಕ್ಷಣವೇ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರನ್ನು ದಾಖಲಿಸಿದ್ದರು. ಕಾರ್ಕಳ ತಾಲೂಕಿನ ಕೆರ್ವಾಶೆ ನಿವಾಸಿ ಸುದೀರ್ ಬಂಗೇರ (48) ವಿರುದ್ಧ ದೂರು ದಾಖಲಿಸಲಾಗಿತ್ತು.

ಸಮಾಜದಲ್ಲಿ ದ್ವೇಷ ಮತ್ತು ಕೋಮು ಸೌಹಾರ್ದತೆಗೆ ಧಕ್ಕೆ ತರುವ ಉದ್ದೇಶದಿಂದ ಈ ಹೇಳಿಕೆ ನೀಡಿರುವುದಾಗಿ ದೂರುದಾರ ಸುರೇಶ್ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇಂತಹ ದ್ವೇಷಪೂರಿತ ಹೇಳಿಕೆಗಳು ಸಮಾಜದಲ್ಲಿ ಶಾಂತಿ ಕದಡುತ್ತವೆ ಎಂದು ಪೊಲೀಸರು ಎಚ್ಚರಿಸಿದ್ದಾರೆ. ಸದ್ಯ ಬಂಧಿತ ವ್ಯಕ್ತಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮುಂದಿನ ಕಾನೂನು ತನಿಖೆ ಮುಂದುವರಿದಿದೆ.

WhatsApp Group Join Now

Spread the love

Leave a Reply