ರಾಯಚೂರು : ಮಂತ್ರಾಲಯಕ್ಕೆ ಭೇಟಿ ನೀಡಲು ಮುಂದಾದ ಹಿಂದುತ್ವ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth kerehalli )ಅವರನ್ನು ಪೊಲೀಸರು ತಡೆದಿದ್ದಾರೆ.
ಇದೇ ವಿಚಾರಕ್ಕೆ ರಾಜ್ಯ ಸರ್ಕಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪುನೀತ್ ಕೆರೆಹಳ್ಳಿ ತೀವ್ರವಾಗಿ ಆಕ್ರೋಶ ಹೊರಹಾಕಿದ್ದಾರೆ.
“ನಾನು ಮಂತ್ರಾಲಯಕ್ಕೆ ಬಂದಿರುವುದು ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆಯಲು, ಇಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ. ಅಂತಹದರಲ್ಲಿ ನನ್ನನ್ನು ಏಕೆ ತಡೆಯುತ್ತಿದ್ದೀರಿ?” ಎಂದು ಅವರು ಪೊಲೀಸರನ್ನು ನೇರವಾಗಿ ಪ್ರಶ್ನಿಸಿದ್ದಾರೆ.
ಈ ಇಡೀ ಬೆಳವಣಿಗೆಯ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಕೈವಾಡವಿದೆ ಎಂದು ಗಂಭೀರವಾಗಿ ಆರೋಪಿಸಿರುವ ಕೆರೆಹಳ್ಳಿ, “ಪ್ರಿಯಾಂಕ ಖರ್ಗೆ ಅವರೇ ಇದು ಸರಿಯಲ್ಲ” ಎಂದು ನೇರವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರವು ಉದ್ದೇಶಪೂರ್ವಕವಾಗಿ ತನ್ನನ್ನು ಗುರಿ ಮಾಡುತ್ತಿದೆ ಮತ್ತು ತನ್ನ ಧಾರ್ಮಿಕ ಹಾಗೂ ಮೂಲಭೂತ ಹಕ್ಕುಗಳನ್ನು ಕಸಿಯುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ದೂರಿದ್ದಾರೆ.
ಆದರೆ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ಸಮರ್ಥಿಸಿಕೊಂಡಿವೆ.
ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಇಂದು ಆಯೋಜಿಸಲಾಗಿದ್ದ ‘ಹಿಂದೂ ಮಹೋತ್ಸವ’ ಸಮಾರಂಭಕ್ಕೆ ಆಗಮಿಸುವವರಿದ್ದರು.ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಆಗಮಿಸಬೇಕಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರಿಗೆ ರಾಯಚೂರು ಜಿಲ್ಲಾ ಪೊಲೀಸರು ಜಿಲ್ಲೆಗೆ ಪ್ರವೇಶಿಸದಂತೆ ನಿಷೇಧ ಹೇರಿದ್ದಾರೆ.
ಪುನೀತ್ ಕೆರೆಹಳ್ಳಿಗೆ ಮಂತ್ರಾಲಯಕ್ಕೆ ಪ್ರವೇಶ ನಿರ್ಬಂಧ – ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ರೋಶಗೊಂಡ ಪುನೀತ್
WhatsApp Group
Join Now