ಗೃಹಿಣಿಯೊಬ್ಬರು ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಜಿಲ್ಲಾ ಕೇಂದ್ರದ ಹಾಲೇನಹಳ್ಳಿಯಲ್ಲಿ ಬುಧವಾರ (ಜೂ.10) ನಡೆದಿದೆ.
ಸ್ಥಳೀಯ ಉದ್ಯಮಿ ರಾಜೇಶ್ ಎಂಬುವವರ ಪತ್ನಿ ಸುಮ (55) ಮೃತಪಟ್ಟ ದುರ್ದೈವಿ.
ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು, ಲೈಸೆನ್ಸ್ ಹೊಂದಿದ್ದ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಘಟನಾ ಸ್ಥಳದಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ.
ವಿಷಯ ತಿಳಿಯುತ್ತಿದ್ದಂತೆ ಬಸವನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಲಭ್ಯವಾಗಿರುವ ಡೆತ್ ನೋಟ್ ಆಧರಿಸಿ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದು, ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
WhatsApp Group
Join Now