ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ‘ಜಲಗಾರ ಯೂನಿವರ್ಸಿಟಿ’ ಕಾಟ; ಪೊಲೀಸ್ ಠಾಣೆಗೆ ದೂರು!

Spread the love

ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi darshan) ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ (Social media) ಕಿಡಿಗೇಡಿಗಳು ನಕಲಿ ಖಾತೆಗಳ ಮೂಲಕ ಮತ್ತೆ ಮತ್ತೆ ಕಿರುಕುಳ ನೀಡುತ್ತಿದ್ದಾರೆ. ಇನ್‌ಸ್ಟಾಗ್ರಾಮ್ ಸೇರಿದಂತೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪದಗಳನ್ನು ಬಳಸಿ ನಿಂದಿಸುತ್ತಿರುವ ಹಾಗೂ ವೈಯಕ್ತಿಕ ಜೀವನದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ವಿಜಯಲಕ್ಷ್ಮಿ ಅವರು ಸೈಬರ್ ಪೊಲೀಸರಿಗೆ (Cyber police) ದೂರು ನೀಡಿದ್ದು, ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಜಲಗಾರ ಯೂನಿವರ್ಸಿಟಿ ಅಕೌಂಟ್ ತೆರೆದು ವಿಕೃತಿ

ವಿಜಯಲಕ್ಷ್ಮಿ ಅವರನ್ನು ಗುರಿಯಾಗಿಸಿಕೊಂಡು ಕಿಡಿಗೇಡಿಗಳು ಜಲಗಾರ ಯುನಿವರ್ಸಿಟಿ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ನಕಲಿ ಖಾತೆಯನ್ನು ತೆರೆದು ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇತ್ತೀಚೆಗೆ ವಿಜಯಲಕ್ಷ್ಮಿ ಅವರು ಚಿತ್ರಮಂದಿರಕ್ಕೆ ಸಿನಿಮಾ ನೋಡಲು ಹೋಗಿದ್ದ ವಿಡಿಯೋ ಒಂದನ್ನು ಇಟ್ಟುಕೊಂಡು ಅತ್ಯಂತ ವಿಕೃತ ಹಾಗೂ ಕೆಟ್ಟದಾಗಿ ಕಾಮೆಂಟ್ ಮಾಡಲಾಗಿದೆ. ಇಷ್ಟೇ ಅಲ್ಲದೆ, ನಟ ಧನ್ವೀರ್ ಹಾಗೂ ವಿಜಯಲಕ್ಷ್ಮಿ ಅವರ ವಿಡಿಯೋಗಳನ್ನು ಅಪ್ಲೋಡ್ ಮಾಡಿ ತೇಜೋವಧೆ ಮಾಡಲಾಗುತ್ತಿದೆ.

ಸೋಷಿಯಲ್ ಮೀಡಿಯಾ ಪೋಸ್ಟ್‌ಗಳಲ್ಲಿ ಇವರೇ ನೋಡಿ ಕ್ರಿಮಿನಲ್ ದರ್ಶನ್ ಹೆಂಡತಿ ಎಂದು ಬರೆದು, ರಾಪಿಡೋ ಡ್ರೈವರ್ (Rapid Driver) ಕಾರಲ್ಲಿ ಓಡಾಟ ನಡೆಸುತ್ತಿದ್ದಾರೆ ಎಂದು ನಿಂದನಾತ್ಮಕ ಪೋಸ್ಟ್‌ಗಳನ್ನು ಹರಿಬಿಡಲಾಗಿದೆ.ಅದೇ ಪೋಸ್ಟ್‌ನ ಕೊನೆಯಲ್ಲಿ ಕಿಡಿಗೇಡಿಗಳು ವಿಜಿಗೆ ಕಂಪ್ಲೇಂಟ್ ಕೊಡಬೇಡ ಅಂತಾ ಹೇಳಿ ಪ್ಲೀಸ್ ಎಂದು ವಿನಂತಿಸಿಕೊಳ್ಳುತ್ತಿದ್ದಾರೆ. ಆದರೆ, ಸತತವಾಗಿ ನಡೆಯುತ್ತಿರುವ ಈ ಟ್ರೋಲಿಂಗ್, ಚಾರಿತ್ರ್ಯ ಹರಣ ಮತ್ತು ಅಶ್ಲೀಲ ನಿಂದನೆಯಿಂದ ಬೇಸತ್ತಿರುವ ವಿಜಯಲಕ್ಷ್ಮಿ ಅವರು ಸೈಬರ್ ಕ್ರೈಮ್ ಪೊಲೀಸರ ಮೊರೆ ಹೋಗಿದ್ದಾರೆ.

ಕಿಡಿಗೇಡಿಗಳ ಪತ್ತೆಗೆ ಸೈಬರ್ ಪೊಲೀಸರ ಬಲೆ

ವಿಜಯಲಕ್ಷ್ಮಿ ಅವರ ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಿರುವ ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸರು, ನಕಲಿ ಅಕೌಂಟ್‌ಗಳ ಮೂಲಕ ಅಶ್ಲೀಲ ಕಾಮೆಂಟ್ ಮಾಡುತ್ತಿರುವ ಐಪಿ ಅಡ್ರೆಸ್‌ಗಳನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ. ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಹಾಕುವ ಇಂತಹ ಟ್ರೋಲ್ ಪೇಜ್‌ಗಳ ಅಡ್ಮಿನ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

ಈ ಹಿಂದೆಯೂ ವಿಜಯಲಕ್ಷ್ಮೀ ಅವರನ್ನು ಗುರಿಯಾಗಿಸಿಕೊಂಡು ಕಿಡಿಗೇಡಿಗಳು ಕೆಟ್ಟ ಕೆಟ್ಟ ಕಾಮೆಂಟ್‌ ಹಾಕುತ್ತಿದ್ರು. ಆಗಲೂ ವಿಜಯ ಲಕ್ಷ್ಮೀ ಪೋಲೀಸ್‌ ಠಾಣೆಯ ಮೆಟ್ಟಿಲು ಹತ್ತಿದ್ರು. ಕಳೆದ ಡಿಸೆಂಬರ್‌ನಲ್ಲಿ, ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ. ಈಗ ವೇದಿಕೆ, ಟಿವಿ ಚಾನೆಲ್‌ಗಳಲ್ಲಿ ಮಾತನಾಡುತ್ತಾರೆ. ದರ್ಶನ್ ಇದ್ದಾಗ ಇವರೆಲ್ಲಾ ಇದ್ರೋ? ಇರಲಿಲ್ವೋ ಎಂದು ಪ್ರಶ್ನಿಸಿದ್ದರು. ನಿಂದನೆಯ ವಿರುದ್ಧ ಸಿಡಿದೆದ್ದಿದ್ದ ವಿಜಯಲಕ್ಷ್ಮಿ 15 ಇನ್‌ಸ್ಟಾಗ್ರಾಂ ಐಡಿ ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್‌ ವಿರುದ್ಧ ಫೋಟೋ ಸಮೇತ ದೂರು ದೂರು ನೀಡಿದ್ದರು. ಈಗ ಮತ್ತೊಂದು ಬಾರೀ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

WhatsApp Group Join Now

Spread the love

Leave a Reply