ಅಮೃತಹಳ್ಳಿಯಲ್ಲಿರುವ ಕಾಂಟ್ರಾಕ್ಟರ್ ಒಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ನೇಪಾಳ ಮೂಲದ ದಂಪತಿ 25 ಲಕ್ಷ ರೂಪಾಯಿ ನಗದು ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಅಮೃತಹಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿ, ಕದ್ದಿದ್ದ ಸಂಪೂರ್ಣ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಪವನ್ ಬಿಸ್ತಾ ಮತ್ತು ಸೀತಾ ಬಿಸ್ತಾ ಎಂದು ಗುರುತಿಸಲಾಗಿದೆ. ಇವರು ಮೂಲತಃ ನೇಪಾಳದವರಾಗಿದ್ದು, ಸುಮಾರು ಒಂದು ತಿಂಗಳ ಹಿಂದೆಯಷ್ಟೇ ಮನೆಯ ಕೆಲಸಕ್ಕಾಗಿ ಕಾಂಟ್ರಾಕ್ಟರ್ ಅವರ ಮನೆಯಲ್ಲಿ ಕೆಲಸಕ್ಕೆ ಸೇರಿದ್ದರು.
ಪೊಲೀಸರ ಮಾಹಿತಿ ಪ್ರಕಾರ, ಉದ್ಯಮಿ ತಮ್ಮ ಕೆಲಸಗಾರರಿಗೆ ಸಂಬಳ ನೀಡುವ ಉದ್ದೇಶದಿಂದ ಬ್ಯಾಂಕ್‌ನಿಂದ 25 ಲಕ್ಷ ರೂಪಾಯಿ ನಗದು ಡ್ರಾ ಮಾಡಿ ಮನೆಯ ಕಪಾಟಿನಲ್ಲಿ ಇಟ್ಟಿದ್ದರು. ಈ ವಿಷಯವನ್ನು ಗಮನಿಸಿದ್ದ ದಂಪತಿ, ಹಣವನ್ನು ಕಳವು ಮಾಡುವ ಸಂಚು ರೂಪಿಸಿ, ಸೂಕ್ತ ಸಮಯದಲ್ಲಿ ನಗದನ್ನು ಕದ್ದು ಪರಾರಿಯಾಗಲು ಯತ್ನಿಸಿದ್ದರು.
WhatsApp Group
Join Now